ನಾರಾಯಣ ಗುರುಗಳ ತತ್ವದಿಂದ ಅಭಿವೃದ್ಧಿ ಸಾಧ್ಯ: ಬಿ.ಕೆ. ಹರಿಪ್ರಸಾದ್‌

KannadaprabhaNewsNetwork | Updated : Mar 11 2024, 01:18 AM IST

ಸಾರಾಂಶ

ಸಾಧಕರ ನೆಲೆಯಲ್ಲಿ ಚಲನಚಿತ್ರ ನಟರಾದ ಸುಮನ್ ತಲ್ವಾರ್, ಜಯಮಾಲಾ, ನವೀನ್ ಡಿ. ಪಡೀಲ್ ಅವರಿಗೆ ಬಿಲ್ಲವ ಕಲಾ ಸಾಮ್ರಾಟ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ವಿಶೇಷ ಚೇತನ ಮಕ್ಕಳ ಅಭಿವೃದ್ಧಿ ಸಂಸ್ಥೆಗೆ ಧನ ಸಹಾಯ, ಸ್ಥಾಪಕ ಪ್ರವರ್ತಕರಿಗೆ ಗೌರವಾರ್ಪಣೆ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಸನ್ಮಾನ ನಡೆಯಿತು

ಕನ್ನಡಪ್ರಭ ವಾರ್ತೆ ಮೂಲ್ಕಿ

ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಹಕ್ಕು ಇದ್ದು ಸಮಾಜ ಒಗ್ಗಟ್ಟಾಗಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಿದ್ಧಾಂತಕ್ಕೆ ಬದ್ಧರಾದರೆ ಮಾತ್ರ ಅಭಿವೃದ್ಧಿ ಸಾಧ್ಯ. ಸಮಾಜವನ್ನು ಒಂದುಗೂಡಿಸುವ ಕಾರ್ಯವನ್ನು ಸ್ವಾಮೀಜಿಗಳು ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

275 ಬಿಲ್ಲವ ಸಂಘಗಳ ಸದಸ್ಯತ್ವವನ್ನು ಹೊಂದಿ ಬಿಲ್ಲವ ಸಮಾಜ ಅಭಿವೃದ್ಧಿಯಲ್ಲಿ ಯಶಸ್ಸು ಸಾಧಿಸಿರುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಬೆಳ್ಳಿ ಹಬ್ಬದ ಸಂಭ್ರಮ ಮೂಲ್ಕಿಬಿಲ್ಲವ ಸಮಾಜ ಸೇವಾ ಸಂಘದ ಬಳಿ ಬೃಹತ್ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಹರಿಪ್ರಸಾದ್‌ ಮಾತನಾಡಿದರು.ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ. ರಾಜಶೇಖರ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ಸೋಲೂರು ಮಠದ ಆರ್ಯ ಈಡಿಗ ಮಹಾಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಯುವ ಜನಾಂಗದಲ್ಲಿ ಆಧ್ಯಾತ್ಮಿಕ ಚಿಂತನೆಗಳು ಕಡಿಮೆಯಾಗಿದ್ದು ಕ್ರಾಂತಿಕಾರಿ ಬದಲಾವಣೆಯ ಮೂಲಕ ಯುವಕರ ಯೋಜನೆ ಹಾಗೂ ಯೋಚನೆಗಳು ಕೈಗೂಡಲಿ ಎಂದರು. ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ, ನಿಪ್ಪಾಣಿ ಮಹಾಕಾಳಿ ಮಹಾಸಂಸ್ಥಾನದ ಮಠಾಧಿಪತಿ ಶ್ರೀ ಅರುಣಾನಂದ ಸ್ವಾಮೀಜಿ, ಶ್ರೀ ಕ್ಷೇತ್ರ ಕಣಿಯೂರು ನ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು.ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಉಮಾನಾಥ ಕೋಟ್ಯಾನ್, ಕಾರ್ಕಳ ಶಾಸಕ ಸುನಿಲ್ ಕುಮಾರ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಶಂಕರ್ ಪೂಜಾರಿ, ಗೆಜ್ಜಗಿರಿ ಆಡಳಿತ ಸಮಿತಿ ಅಧ್ಯಕ್ಷ ಪೀತಾಂಬರ ಹೆರಾಜೆ, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ, ದಯಾನಂದ ಬೊಂಟ್ರ ಗುಜರಾತ್, ಮುಂಬೈ ಬಿಲ್ಲವರ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಎನ್ ಟಿ ಪೂಜಾರಿ, ಸತೀಶ್ ಪೂಜಾರಿ ದುಬೈ, ಎಸ್.ಕೆ. ಪೂಜಾರಿ ಮಸ್ಕತ್, ರಾಜ್ ಕುಮಾರ್ ಬೆಹರಿನ್, ರಾಘು ಪೂಜಾರಿ ಕುವೈಟ್, ಗಣೇಶ್ ಪೂಜಾರಿ ಮುಂಬೈ, ಬಿಲ್ಲವ ಪರಿಷತ್ ಅಧ್ಯಕ್ಷ ನವೀನ್ ಅಮೀನ್, ಮುಂಬೈ ಬಿಲ್ಲವರ ಅಸೋಸಿಯೇಷನ್ ಅಧ್ಯಕ್ಷ ಹರೀಶ್ ಬಿ. ಅಮೀನ್, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ಸೂರ್ಯಕಾಂತಿ ಜಯ ಸುವರ್ಣ, ಗೌರವ ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ, ಕೋಶಾಧಿಕಾರಿ ಪ್ರಭಾಕರ್ ಬಂಗೇರ ಕಾರ್ಕಳ, ಜೊತೆ ಕಾರ್ಯದರ್ಶಿ, ಗಣೇಶ್ ಪೂಜಾರಿ ಮೂಡು ಪೆರಾರ, ಶಿವಾಜಿ ಸುವರ್ಣ ಬೆಳ್ಳೆ, ಗಣೇಶ್ ಎಲ್ ಪೂಜಾರಿ ಬೈಂದೂರು ಮತ್ತಿತರರು ಇದ್ದರು.ಸನ್ಮಾನ: ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ಚಲನಚಿತ್ರ ನಟರಾದ ಸುಮನ್ ತಲ್ವಾರ್, ಜಯಮಾಲಾ, ನವೀನ್ ಡಿ. ಪಡೀಲ್ ಅವರಿಗೆ ಬಿಲ್ಲವ ಕಲಾ ಸಾಮ್ರಾಟ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ವಿಶೇಷ ಚೇತನ ಮಕ್ಕಳ ಅಭಿವೃದ್ಧಿ ಸಂಸ್ಥೆಗೆ ಧನ ಸಹಾಯ, ಸ್ಥಾಪಕ ಪ್ರವರ್ತಕರಿಗೆ ಗೌರವಾರ್ಪಣೆ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಸನ್ಮಾನ ನಡೆಯಿತು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರಕ್ಕೆ ಪ್ರತ್ಯೇಕ ಬಿಲ್ಲವರ ಅಭಿವೃದ್ಧಿ ನಿಗಮ ರಚನೆ ಸಹಿತ ಅನೇಕ ಹಕ್ಕೊತ್ತಾಯ ಮಂಡಿಸಲಾಯಿತು.ದಿನೇಶ್ ಸುವರ್ಣ ರಾಯಿ, ಪ್ರಜ್ಞಾ ಪೂಜಾರಿ ಒಡಿನ್ನಾಳ ನಿರೂಪಿಸಿದರು.

Share this article