ಟೌನ್‌ಶಿಪ್‌ ಮಾದರಿಯಲ್ಲಿ 4 ತಾಲೂಕು ಅಭಿವೃದ್ಧಿ: ಸಚಿವ ಮುನಿಯಪ್ಪ

KannadaprabhaNewsNetwork |  
Published : Dec 23, 2024, 01:02 AM IST
ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ ನೀಡಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಇಲ್ಲಿನ ತಾಲೂಕು ಪಂಚಾಯಿತಿ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ 1.08 ಕೋಟಿ ವೆಚ್ಚದ ರಸ್ತೆ, ಚರಂಡಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂ.ಗ್ರಾ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಶಂಕುಸ್ಥಾಪನೆ ನೆರವೇರಿಸಿದರು.

ದೊಡ್ಡಬಳ್ಳಾಪುರ: ಇಲ್ಲಿನ ತಾಲೂಕು ಪಂಚಾಯಿತಿ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ 1.08 ಕೋಟಿ ವೆಚ್ಚದ ರಸ್ತೆ, ಚರಂಡಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂ.ಗ್ರಾ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಶಂಕುಸ್ಥಾಪನೆ ನೆರವೇರಿಸಿದರು.

ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು ಮಾತನಾಡಿ, ಒಳಚರಂಡಿ ವ್ಯವಸ್ಥೆ ಕಲ್ಪಿಸಿಕೊಡಲು, ನಗರೋತ್ಥಾನ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಿಕೊಡಲು, ರಸ್ತೆ ಅಭಿವೃದ್ಧಿಗೆ ಹಾಗೂ ರಸ್ತೆ ಅಗಲೀಕರಣಕ್ಕೆ ಅನುದಾನ ಕಲ್ಪಿಸಿಕೊಡಲು ಮನವಿ ಮಾಡಿದರು.

ಸಚಿವರು ಮನವಿಗೆ ಸ್ಪಂದಿಸಿ ನಗರೋತ್ಥಾನ ಕಾಮಗಾರಿಗಳು ಒಂದು ತಿಂಗಳ ಒಳಗಾಗಿ ಆರಂಭ ಆಗಬೇಕು. ಜಿಲ್ಲೆಯ ನಾಲ್ಕು ತಾಲೂಕುಗಳನ್ನು ಟೌನ್ ಶಿಪ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ, ನಗರಸಭೆ ಅಧ್ಯಕ್ಷೆ ಸುಮಿತ್ರ ಆನಂದ್, ಉಪಾಧ್ಯಕ್ಷ ಮಲ್ಲೇಶ್ , ಜಿಪಂ ಸಿಇಒ ಡಾ. ಕೆ ಎನ್ ಅನುರಾಧ, ತಹಶೀಲ್ದಾರ ವಿಭಾ ವಿದ್ಯಾ ರಾಥೋಡ್ , ಪೌರಾಯುಕ್ತ ಕಾರ್ತಿಕ್ ಈಶ್ವರ್ , ತಾಪಂ ಇಒ ಮುನಿರಾಜು, ನಗರಸಭಾ ಸದಸ್ಯರು, ನಗರಸಭೆ ನಾಮನಿರ್ದೇಶಿತ ಸದಸ್ಯರು, ಅಧಿಕಾರಿಗಳು ಹಾಜರಿದ್ದರು.

22ಕೆಡಿಬಿಪಿ1-

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾವೂರು ಶ್ರೀ ಗೋಪಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ಸಂಪನ್ನ
ಸಚಿವ ತಿಮ್ಮಾಪುರ ಬೆಂಬಲಿಸಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ