ಹಾವೇರಿ: ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ಕೈಗಾರಿಕೆ ಸ್ಥಾಪನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕೆ ಜಿಲ್ಲೆಯ ಕೋಳೂರ ಬಳಿ 400 ಎಕರೆ ಜಮೀನು ಅಭಿವೃದ್ಧಿ ಪಡಿಸಲಾಗುತ್ತಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಇನ್‌ವೆಸ್ಟ್ ಕರ್ನಾಟಕ ಮಾದರಿಯಲ್ಲಿ ಮುಂಬರುವ ದಿನಗಳಲ್ಲಿ ಹಾವೇರಿ ಇನ್‌ವೆಸ್ಟ್ ಕಾರ್ಯಕ್ರಮ ಮಾಡಲಾಗುವುದು ಎಂದು ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಹೇಳಿದರು.
ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಸುವ ಕೆಲಸವಾಗಬೇಕಾಗಿದೆ. ಟೆಕ್ಸ್‌ಟೈಲ್ ನಿರ್ಮಾಣಕ್ಕೆ ಹನುಮನಮಟ್ಟಿ ಬಳಿ 18 ಎಕರೆ ಜಮೀನು ಖರೀದಿ ಮಾಡಲಾಗಿದೆ. ಈ ಸ್ಥಳದಲ್ಲಿ ಗಾರ್ಮೆಂಟ್ ಸ್ಥಾಪನೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಕೌಶಲ್ಯ ತರಬೇತಿನಿರುದ್ಯೋಗಿಗಳಿಗೆ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ವಿವಿಧ ವೃತ್ತಿ ಕೌಶಲ್ಯ ತರಬೇತಿಗಳನ್ನು ಸಹ ನೀಡಲಾಗುತ್ತಿದೆ. ಹಾನಗಲ್ ಜಿಟಿಟಿಸಿ ಕೇಂದ್ರದಲ್ಲಿ ತರಬೇತಿ ಪಡದರೆ ದೇಶ -ವಿದೇಶಗಳಲ್ಲಿ ಉತ್ತಮ ಉದ್ಯೋಗ ದೊರೆಯುತ್ತವೆ. ನಿರುದ್ಯೋಗಿಗಳು ಆತ್ಮಸ್ಥೈರ್ಯ ಕಳೆದುಕೊಳ್ಳದೇ ಸಿಗುವ ಕೆಲಸವನ್ನು ಶ್ರದ್ಧೆಯಿಂದ ಮಾಡಿದರೆ ಯಶಸ್ಸು ಸಾಧ್ಯ ಎಂದು ಹೇಳಿದರು.
ಒಳ್ಳೆಯ ಸಂಬಳ ನೀಡಿ
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ 22,600 ಅಭ್ಯರ್ಥಿಗಳು ಯುವನಿಧಿ ಫಲಾನುಭವಿಗಳಿದ್ದು, ಇಂದು ಉದ್ಯೋಗ ಮೇಳಕ್ಕೆ ಸಾವಿರ ಸಂಖ್ಯೆಯಲ್ಲಿ ಮಾತ್ರ ನಿರುದ್ಯೋಗಿಗಳು ನೋಂದಣಿ ಮಾಡಿಸಿದ್ದು ವಿಷಾಧಕರ ಸಂಗತಿಯಾಗಿದೆ. ಸರ್ಕಾರದ ಸಹಾಯಧನ ತೆಗೆದುಕೊಂಡು ಮನೆಯಲ್ಲಿ ಕುಳಿತುಕೊಳ್ಳುವುದು ಒಳ್ಳೆಯ ಲಕ್ಷಣವಲ್ಲ. ನಮ್ಮ ಊರಿನಲ್ಲೆ ಕೆಲಸ ಸಿಗಬೇಕು ಎಂಬ ಮನೋಭಾವ ಬದಲಾಗಬೇಕು. ಎಲ್ಲೇ ಕೆಲಸ ಸಿಕ್ಕರೂ ಮಾಡುತ್ತೇನೆ ಎಂಬ ಛಲವಿರಬೇಕು. . ಪ್ರತಿ ಆರು ತಿಂಗಳಿಗೊಮ್ಮೆ ಉದ್ಯೋಗ ಮೇಳ ಆಯೋಜನೆ ಮಾಡಬೇಕು. ಮುಂದಿನ ದಿನಗಳಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಯುವನಿಧಿ ಸೌಲಭ್ಯ ಪಡೆಯುವ ಫಲಾನುಭವಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರಾಜೇಂದ್ರ ಕದಂ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
49 ಕಂಪನಿಗಳು
ನೇಮಕಾತಿ ಆದೇಶ
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎ. ಮೈದೂರ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಶ್ರೀಧರ ದೊಡ್ಡಮನಿ ಇತರರು ಉಪಸ್ಥಿತರಿದ್ದರು.
ವಯಸ್ಕರ ಶಿಕ್ಷಣ ಇಲಾಖೆ ಅಧಿಕಾರಿ ಬಿ.ಎಂ. ಬೇವಿನಮರದ ಕಾರ್ಯಕ್ರಮ ನಿರೂಪಿಸಿದರು. ವಿನಾಯಕ ವಂದಿಸಿದರು.