ಮೂಲಸೌಲಭ್ಯಗಳ ಅಭಿವೃದ್ಧಿಯಿಂದ ಕೃಷಿಯ ಅಭಿವೃದ್ಧಿ

KannadaprabhaNewsNetwork |  
Published : Nov 25, 2026, 01:45 AM IST
24ಎಚ್ಎಸ್ಎನ್8 :  | Kannada Prabha

ಸಾರಾಂಶ

ರೈತರು ತಮ್ಮ ಜಮೀನುಗಳಿಗೆ ತೆರಳಲು ಹಾಗೂ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಕಾಲುಸಂಕ ನಿರ್ಮಿಸಲಾಗುತ್ತಿದೆ ಎಂದರು. ಮಳೆಗಾಲದಲ್ಲಿ ಹಳ್ಳ, ತೊರೆಗಳನ್ನು ದಾಟಲು ರೈತರು ಮತ್ತು ಗ್ರಾಮಸ್ಥರು ಎದುರಿಸುತ್ತಿದ್ದ ಸಮಸ್ಯೆಗಳಿಗೆ ಈ ಕಾಮಗಾರಿಗಳು ಪರಿಹಾರ ಒದಗಿಸಲಿವೆ. ಕಾಲುಸಂಕದಿಂದ ಕೃಷಿ ಉತ್ಪನ್ನಗಳ ಸಾಗಣೆ ಹಾಗೂ ಜಾನುವಾರುಗಳ ಓಡಾಟಕ್ಕೂ ಅನುಕೂಲವಾಗಲಿದ್ದು, ತಡೆಗೋಡೆಯಿಂದ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶದ ಸುರಕ್ಷತೆ ಹೆಚ್ಚಲಿದೆ ಎಂದರು.

ಕನ್ನಡಪ್ರಭ ವಾರ್ತೆ ಸಕಲೇಶಪುರಗ್ರಾಮೀಣ ಪ್ರದೇಶದ ರಸ್ತೆ, ಕಾಲುಸಂಕ (ಕಾಲುಹಾದಿ) ಹಾಗೂ ಇತರೆ ಮೂಲಸೌಕರ್ಯಗಳು ಅಭಿವೃದ್ಧಿಗೊಂಡಾಗ ಮಾತ್ರ ರೈತರ ಕೃಷಿ ಚಟುವಟಿಕೆಗಳಿಗೆ ವೇಗ ದೊರೆಯಲಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.ತಾಲೂಕಿನ ಹೊಸೂರು ಗ್ರಾಮದ ಕೌಕೋಡಿ ಶಿವನ ದೇವಾಲಯ ಹಾಗೂ ಶಾಲೆಯ ಸಮೀಪ ₹25 ಲಕ್ಷ ವೆಚ್ಚದಲ್ಲಿ ತಡೆಗೋಡೆ ಮತ್ತು 18 ಲಕ್ಷ ರು. ವೆಚ್ಚದಲ್ಲಿ ಕಾಲುಸಂಕ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ರೈತರು ತಮ್ಮ ಜಮೀನುಗಳಿಗೆ ತೆರಳಲು ಹಾಗೂ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಕಾಲುಸಂಕ ನಿರ್ಮಿಸಲಾಗುತ್ತಿದೆ ಎಂದರು. ಮಳೆಗಾಲದಲ್ಲಿ ಹಳ್ಳ, ತೊರೆಗಳನ್ನು ದಾಟಲು ರೈತರು ಮತ್ತು ಗ್ರಾಮಸ್ಥರು ಎದುರಿಸುತ್ತಿದ್ದ ಸಮಸ್ಯೆಗಳಿಗೆ ಈ ಕಾಮಗಾರಿಗಳು ಪರಿಹಾರ ಒದಗಿಸಲಿವೆ. ಕಾಲುಸಂಕದಿಂದ ಕೃಷಿ ಉತ್ಪನ್ನಗಳ ಸಾಗಣೆ ಹಾಗೂ ಜಾನುವಾರುಗಳ ಓಡಾಟಕ್ಕೂ ಅನುಕೂಲವಾಗಲಿದ್ದು, ತಡೆಗೋಡೆಯಿಂದ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶದ ಸುರಕ್ಷತೆ ಹೆಚ್ಚಲಿದೆ ಎಂದರು. ಕಳೆದ ಬಾರಿ ಈ ಭಾಗದಲ್ಲಿ ಸಂಚಾರಕ್ಕೆ ತೊಂದರೆಯಾಗಿದ್ದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದೆ. ಇದರಿಂದ ರೈತರು ಜಮೀನುಗಳಿಗೆ ತೆರಳಲು ಹಾಗೂ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಅನುಕೂಲವಾಗಿದೆ. ಅನುದಾನ ಲಭ್ಯತೆಗೆ ಅನುಗುಣವಾಗಿ ಸ್ಥಳೀಯ ಅಗತ್ಯಗಳನ್ನು ಗುರುತಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ರಸ್ತೆ ಅಭಿವೃದ್ಧಿ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯ ಎಂದು ಹೇಳಿದರು.ಈ ಸಂದರ್ಭದಲ್ಲಿ ಕಿರಣ್ ಕೌಕೋಡಿ, ಎಚ್. ಕೆ. ದಿನೇಶ್, ತಡಕಲು ಹರೀಶ್, ಪುಟ್ಟಸ್ವಾಮಿಗೌಡ, ಹೊಸಕೋಟೆ ಪರಮೇಶ್, ಕಳಲೆ ಹರೀಶ್, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸವಿನ್ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಪಾನಿಂದಲೇ ಆಶಾ ಮನವೊಲಿಕೆಗೆ ಸಿಎಂ ಯತ್ನ
ವೈದ್ಯರ ಚೀಟಿ ಇಲ್ಲದೆ ಗರ್ಭಪಾತ ಮಾತ್ರೆಗಳ ಮಾರಾಟ: ಅಧಿಕಾರಿಗಳ ದಾಳಿ