ಆಲಮಟ್ಟಿ ಹಾಗೂ ಸುತ್ತಮುತ್ತಲಿನ ರೈಲ್ವೆ ನಿಲ್ದಾಣಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ಹಾಗೂ ಪ್ರಮುಖ ರೈಲುಗಳಿಗೆ ನಿಲುಗಡೆ ಕಲ್ಪಿಸುವಂತೆ ಆಗ್ರಹಿಸಿ, ಆಲಮಟ್ಟಿ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿಯ ನಿಯೋಗ ನೈಋತ್ಯ ರೈಲ್ವೆ ವಲಯದ ಜನರಲ್ ಮ್ಯಾನೇಜರ್ ಪಿ. ಅನಂತ್ ಅವರಿಗೆ ಗುರುವಾರ ಹುಬ್ಬಳ್ಳಿಯಲ್ಲಿ ಮನವಿ ಸಲ್ಲಿಸಿತು.
ಕನ್ನಡಪ್ರಭ ವಾರ್ತೆ ಆಲಮಟ್ಟಿ

ಆಲಮಟ್ಟಿ ರೈಲ್ವೆ ನಿಲ್ದಾಣದ ಸಮೀಪ ಸಾರ್ವಜನಿಕರು ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬಹುದಿನಗಳ ಬೇಡಿಕೆಯಾಗಿರುವ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಕಾಮಗಾರಿಯನ್ನು ತಕ್ಷಣ ಕೈಗೆತ್ತಿಕೊಳ್ಳಬೇಕು ಎಂದು ನಿಯೋಗ ಒತ್ತಾಯಿಸಿತು.
ಹುಬ್ಬಳ್ಳಿ-ನಿಜಾಮುದ್ದೀನ್ ರೈಲಿಗೆ ಆಲಮಟ್ಟಿಯಲ್ಲಿ ನಿಲುಗಡೆ ಕಲ್ಪಿಸುವಂತೆ ಮನವಿ ಮಾಡಲಾಯಿತು. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಆಲಮಟ್ಟಿ ನಿಲ್ದಾಣದಲ್ಲಿ ಮೂಲಸೌಕರ್ಯಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಲಾಯಿತು.
ಬೇನಾಳ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್, ಕುಡಿಯುವ ನೀರು, ಮಹಿಳೆಯರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಹಾಗೂ ಶೌಚಾಲಯ ಸೇರಿದಂತೆ ಮೂಲಸೌಕರ್ಯ ಕಲ್ಪಿಸಬೇಕು. ವಂದಾಲ ರೈಲ್ವೆ ನಿಲ್ದಾಣದಲ್ಲಿ ವೇಗದೂತ ರೈಲುಗಳಿಗೆ ನಿಲುಗಡೆ ನೀಡಿ ಸುತ್ತಮುತ್ತಲಿನ ಗ್ರಾಮಗಳ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು ಎಂಬ ಬೇಡಿಕೆಯನ್ನೂ ನಿಯೋಗ ಮುಂದಿಟ್ಟಿತು.
ಸಮಿತಿ ಅಧ್ಯಕ್ಷ ಭರತರಾಜ ದೇಸಾಯಿ, ಉಪಾಧ್ಯಕ್ಷ ಶಿವಾನಂದ ಎಂ. ಅವಟಿ, ರಮೇಶ ಆಲಮಟ್ಟಿ, ಮಲ್ಲೇಶಿ ರಾಠೋಡ, ಚಂದ್ರಸೇನ ದೇಸಾಯಿ, ಬಿ.ಕೆ. ಬಾಗವಾನ ಸೇರಿದಂತೆ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.