ಕನ್ನಡಪ್ರಭ ವಾರ್ತೆ ಚಾಮರಾಜನಗರ
ಕ್ಷಯರೋಗಿಗಳಿಗೆ ಅಪೌಷ್ಠಿಕತೆ ನೀಗಿಸುವ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಬೇಕಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಬೆಂಬಲವನ್ನು ಪಡೆಯಬೇಕಿದೆ. ಕ್ಷಯರೋಗಿಗಳನ್ನು ದತ್ತು ತೆಗೆದುಕೊಂಡು ಅವರನ್ನು ಸಂಪೂರ್ಣ ಗುಣಮುಖರಾಗುವವರೆಗೆ ಅವಶ್ಯವಿರುವ ಚಿಕಿತ್ಸೆ, ಪೌಷ್ಠಿಕ ಆಹಾರ, ಇನ್ನಿತರ ಬೆಂಬಲ ನೆರವು ನೀಡಬೇಕಿದೆ. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚಿಸಿ ಕ್ರಿಯಾಯೋಜನೆ ರೂಪಿಸಬೇಕು. ಮುಂದಿನ ೩ ತಿಂಗಳೊಳಗೆ ಮತ್ತೆ ಕ್ಷಯರೋಗ ಫೋರಂ ಸಭೆಯನ್ನು ಕರೆದು ಪ್ರಗತಿ ಪರಿಶೀಲಿಸಲಾಗುವುದು ಎಂದು ಹೇಳಿದರು. ಇದೇ ವೇಳೆ ಖನಿಜ ಪ್ರತಿಷ್ಠಾನ ವತಿಯಿಂದ ಕ್ಷಯರೋಗ ಪತ್ತೆ ಹಚ್ಚುವ ಅತ್ಯಾಧುನಿಕ ತಪಾಸಣಾ, ಎಕ್ಸರೇ ಉಪಕರಣಗಳನ್ನುಡೀಸಿ ಶಿಲ್ಪಾನಾಗ್ ಜಿಲ್ಲಾ ಆರೋಗ್ಯ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳಿಗೆ ಹಸ್ತಾಂತರಿಸಿದರು. ಜಿಲ್ಲೆಯ ಗಣಿ, ಕ್ವಾರಿ, ಕ್ರಶರ್, ಗ್ರಾನೈಟ್ ಮಾಲೀಕರ ನೆರವಿನಿಂದ ೧೦೦ ಕ್ಷಯರೋಗಿಗಳಿಗೆ ಕಳೆದ ೪ ತಿಂಗಳಿಂದ ಪ್ರೋಟಿನ್ ಪೌಡರ್ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರಿಗೆ ನಿಕ್ಷಯ ಮಿತ್ರ ಪ್ರಶಂಸನಾ ಪತ್ರವನ್ನು ಡೀಸಿ ನೀಡಿದರು. ಕೊಳ್ಳೇಗಾಲ ತಾಲೂಕು ಆರೋಗ್ಯ ಅಧಿಕಾರಿ ಡಾ. ಗೋಪಾಲ್, ಹನೂರು ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಕಾಶ್ ಕ್ಷಯರೋಗಿಗಳಿಗೆ ನೀಡುತ್ತಿರುವ ಬೆಂಬಲ ಹಿನ್ನೆಲೆಯಲ್ಲಿ ಪ್ರಶಂಸನಾ ಪತ್ರವನ್ನು ನೀಡಲಾಯಿತು. ಜಿಪಂ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ರವಿಕುಮಾರ್, ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಡಾ.ಮಂಜುನಾಥ್, ಜಿಲ್ಲಾ ಸರ್ಜನ್ ಡಾ. ಕೃಷ್ಣಪ್ರಸಾದ್, ಸ್ಥಾನಿಕ ವೈದ್ಯಾಧಿಕಾರಿ ಡಾ. ಮಹೇಶ್, ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ಡಾ. ಕಿರಣ್, ಸಂಗೀತ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಪದ್ಮಜ, ವಕೀಲ ಪುಟ್ಟಸ್ವಾಮಿ, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಡಾ. ಚಂದ್ರಶೇಖರ್, ಡಾ. ಗಿರಿಧರ್, ಡಾ. ರಾಜೇಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಸ್ವಯಂ ಸೇವಾ ಸಂಸ್ಥೆಗಳಾದ ಚೈತನ್ಯ ನೆಟ್ ವರ್ಕ್ ಸ್ನೇಹ ಜ್ಯೋತಿ ಇನ್ನಿತರ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.