ಸೆಂಟ್ರಲ್ ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ

KannadaprabhaNewsNetwork |  
Published : Nov 29, 2025, 11:08 PM IST
ಹು-ಧಾ ಸೆಂಟ್ರಲ್ ಕ್ಷೇತ್ರದ 42ನೇ ವಾರ್ಡಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಮಹೇಶ ಟೆಂಗಿನಕಾಯಿ ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಸರ್ಕಾರದಿಂದ ಅನುದಾನದ ಕೊರತೆ ಇದ್ದು, ಅಂತಹ ಪರಿಸ್ಥಿತಿಯಲ್ಲಿಯೂ ಕ್ಷೇತ್ರದಲ್ಲಿ ಜನಪರ ಅಭಿವೃದ್ಧಿ ಕಾಮಗಾರಿ ನಡೆಸುತ್ತಾ ಮುಂದೆ ಸಾಗುತ್ತಿದ್ದೇನೆ. ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯವಾಗಿದ್ದು, ಯಾವುದೇ ಕಾರಣಕ್ಕೂ ಅಭಿವೃದ್ಧಿ ಕಾರ್ಯ ಕೈಗೊಳ್ಳುವುದನ್ನು ನಿಲ್ಲಿಸುವುದಿಲ್ಲ.

ಹುಬ್ಬಳ್ಳಿ:

ಸೆಂಟ್ರಲ್ ಕ್ಷೇತ್ರವು ಎಲ್ಲ ಆಯಾಮಗಳಲ್ಲಿ ಅಭಿವೃದ್ಧಿ ಹೊಂದಬೇಕೆನ್ನುವುದು ನನ್ನ ಗುರಿ. ಅದಕ್ಕೆ ಬೇಕಾದ ಎಲ್ಲ ಸೌಲಭ್ಯ ಕಲ್ಪಿಸಲು ಬದ್ಧನಾಗಿದ್ದೇನೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ನಗರದ ಹು-ಧಾ ಸೆಂಟ್ರಲ್ ಕ್ಷೇತ್ರದ 42ನೇ ವಾರ್ಡಿನಲ್ಲಿ ಅಂದಾಜು ₹1 ಕೋಟಿ ವೆಚ್ಚದಲ್ಲಿ ರಸ್ತೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಸರ್ಕಾರದಿಂದ ಅನುದಾನದ ಕೊರತೆ ಇದ್ದು, ಅಂತಹ ಪರಿಸ್ಥಿತಿಯಲ್ಲಿಯೂ ಕ್ಷೇತ್ರದಲ್ಲಿ ಜನಪರ ಅಭಿವೃದ್ಧಿ ಕಾಮಗಾರಿ ನಡೆಸುತ್ತಾ ಮುಂದೆ ಸಾಗುತ್ತಿದ್ದೇನೆ. ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯವಾಗಿದ್ದು, ಯಾವುದೇ ಕಾರಣಕ್ಕೂ ಅಭಿವೃದ್ಧಿ ಕಾರ್ಯ ಕೈಗೊಳ್ಳುವುದನ್ನು ನಿಲ್ಲಿಸುವುದಿಲ್ಲ ಎಂದರು.

ಈ ವೇಳೆ ರಾಜಾಜಿನಗರ ರಿಕ್ಷಾ ನಿಲ್ದಾಣದಿಂದ ಮಂಜುನಾಥ ಉಡುಪಿ ಮನೆಯ ವರೆಗೆ ₹29 ಲಕ್ಷದಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿ, ಹೂಗಾರ ಓಣಿಯ ಅರಳಿಕಟ್ಟಿ ಮನೆಯ ವರೆಗೆ ₹12 ಲಕ್ಷ ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿ, ₹12 ಲಕ್ಷ ವೆಚ್ಚದಲ್ಲಿ ಓಂಕಾರ ಅಂಗಡಿಯಿಂದ ರಾಯನಗೌಡರ ಮನೆಯ ವರೆಗೆ ಕಾಂಕ್ರಿಟ್ ರಸ್ತೆ, ₹9 ಲಕ್ಷ ವೆಚ್ಚದಲ್ಲಿ ಸಿದ್ದರಾಮನಗರ ಡೊಂಬರ ಮನೆಯ ದೇವಸ್ಥಾನ ವರೆಗಿನ ರಸ್ತೆ ಕಾಮಗಾರಿ, ₹ 12 ಲಕ್ಷ ವೆಚ್ಚದಲ್ಲಿ ಅಜಾದ್ ಸೊಸೈಟಿಯಿಂದ ಫಯಾಜ ಮನೆಯ ವರೆಗೆ ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಪಾಲಿಕೆ ಸದಸ್ಯ ಎಂ.ವೈ. ನರಗುಂದ, ರಾಜು ಕಾಳೆ, ಪ್ರಫುಲ್ ಚಂದ ರಾಯನಗೌಡ, ರಮೇಶ ಮಹಾದೇವಪ್ಪನವರ, ಈಶ್ವರಗೌಡ ಪಾಟೀಲ, ಅಶೋಕ ವಾಲ್ಮೀಕಿ, ಮಂಜುನಾಥ ಉಡುಪಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ಪ್ಯಾರಾದಲ್ಲಿ ಕೇಂದ್ರ ವಿರುದ್ಧ ಟೀಕಾ ಪ್ರಹಾರ
ಬೇಡಿಕೆಗೆ ತಕ್ಕಷ್ಟು ಬರುತ್ತಿಲ್ಲ ಮೈಸೂರು ರೇಷ್ಮೆ ಸೀರೆ