ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಈ ಮೂಲಕ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಪ್ರವಾಸೋದ್ಯಮಕ್ಕೆ ಅಭಿವೃದ್ಧಿಯ ಹೊಸ ಸ್ಪರ್ಶವನ್ನು ನೀಡಲು ಸಂಸದ ಡಾ.ಕೆ.ಸುಧಾಕರ್ ಪ್ರಯತ್ನ ಆರಂಭಿಸಿದ್ದಾರೆ. ಯೋಜನೆಯಡಿ ಅಭಿವೃದ್ಧಿಗೆ ಮನವಿ
ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿನ ಪುರಾತನ ತೀರ್ಥ ಕ್ಷೇತ್ರಗಳು ಹಾಗೂ ಪ್ರಸಿದ್ಧ ಪ್ರವಾಸಿ ತಾಣಗಳನ್ನು ಅಭಿವೃದ್ದಿಪಡಿಸುವ ಕುರಿತು ಚರ್ಚಿಸಿ ಮನವಿ ಪತ್ರ ಸಲ್ಲಿಸಿದರು. ಕೇಂದ್ರ ಸರ್ಕಾರದ ಪ್ರಸಾದ್ ಮತ್ತು ಸ್ವದೇಶ್ ದರ್ಶನ್ ಯೋಜನೆಗಳಡಿ ಈ ತಾಣಗಳನ್ನು ಅಭಿವೃದ್ಧಿ ಮಾಡಬೇಕೆಂದು ಕೋರಿದರು.ಭಾರತದ ಮೊದಲ ಜೀವವೈವಿಧ್ಯ ತಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೇವನಹಳ್ಳಿ ತಾಲ್ಲೂಕಿನ ನಲ್ಲೂರು ಹುಣಸೆ ತೋಪಿನಲ್ಲಿ 410 ವರ್ಷಗಳಷ್ಟು ಹಳೆಯದಾದ ಭಾರಿ ಗಾತ್ರದ ಸುಮಾರು 300 ಹುಣಸೆ ಮರಗಳಿವೆ. ಇದನ್ನು ಉತ್ತಮ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಬಹುದು. ಇದು ವಿದ್ಯಾರ್ಥಿಗಳಿಗೆ ಹಾಗೂ ಸಂಶೋಧಕರಿಗೆ ಅಧ್ಯಯನ ಯೋಗ್ಯ ಸ್ಥಳವೂ ಆಗಿದೆ. ಇಲ್ಲಿ ಮಕ್ಕಳ ಉದ್ಯಾನ ನಿರ್ಮಾಣ ಮಾಡುವಂತೆ ಕೋರಿದ್ದಾರೆ. ಹೊಸಕೋಟೆಯ ಅಮಾನಿಕೆರೆಹೊಸಕೋಟೆಯ ಅಮಾನಿಕೆರೆ ವಲಸೆ ಹಕ್ಕಿಗಳಿಗೆ ಆಶ್ರಯ ತಾಣವಾಗಿದ್ದು, ಪ್ರವಾಸಿಗರು ಹಾಗೂ ವನ್ಯಜೀವಿ ಛಾಯಾಗ್ರಾಹಕರು ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ. ಕೆರೆಯ ಸುತ್ತ ವಿಹಾರ ಪಥ ಹಾಗೂ ರಸ್ತೆ ನಿರ್ಮಾಣ, ಬೋಟಿಂಗ್ ವ್ಯವಸ್ಥೆ, ಮಕ್ಕಳ ಉದ್ಯಾನ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮೊದಲಾದ ಸೌಕರ್ಯಗಳ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿ ಮಾಡಬಹುದು. ಶಿವಗಂಗೆಗೆ ಪ್ರತಿ ದಿನ ಸುಮಾರು 6,000 ಪ್ರವಾಸಿಗರು ಭೇಟಿ ನೀಡುತ್ತಾರೆ. ಇಲ್ಲಿ ಮೂಲಸೌಕರ್ಯ ಕಲ್ಪಿಸುವ ಮೂಲಕ ಪ್ರವಾಸಿ ಹಾಗೂ ಧರ್ಮ ಕ್ಷೇತ್ರವಾಗಿ ಅಭಿವೃದ್ಧಿ ಮಾಡಬೇಕಿದೆ ಎಂದು ಅವರು ಸಲ್ಲಿಸಿದ ಮನವಿಯಲ್ಲಿ ವಿವರಿಸಿದ್ದಾರೆ. ಇದೇ ರೀತಿ ದೇವನಹಳ್ಳಿ ಕೋಟೆಯ ಬಳಿ ರಸ್ತೆಗಳ ಅಭಿವೃದ್ಧಿಗೂ ಕೋರಿದ್ದಾರೆ. ವಿದುರಾಶ್ವತ್ಥ ಅಭಿವೃದ್ಧಿಗೆ ಮನವಿ