ಕನ್ನಡಪ್ರಭ ವಾರ್ತೆ ಬ್ರಹ್ಮಾವರಬ್ಯಾಂಕಿಂಗ್ ತವರಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹುಟ್ಟಿದ ಹೆಚ್ಚಿನ ವಾಣಿಜ್ಯ ಬ್ಯಾಂಕ್‌ಗಳು ಇಂದು ಇಲ್ಲವಾಗಿವೆ. ಇರುವ ಬ್ಯಾಂಕ್‌ಗಳಲ್ಲಿ ಸ್ಥಳೀಯ ಭಾಷೆ ಬಾರದ ಸಿಬ್ಬಂದಿಗಳೇ ಹೆಚ್ಚಿದ್ದಾರೆ. ಆದರೆ ಸಹಕಾರಿ ಬ್ಯಾಂಕ್‌ಗಳಲ್ಲಿ ಇಲ್ಲಿನ ಜನರ ಸಂಸ್ಕೃತಿ, ಭಾಷೆ ಗೊತ್ತಿರುವವರೇ ಸೇವೆ ಸಲ್ಲಿಸುತ್ತಿದ್ದಾರೆ. ಆದ್ದರಿಂದ ಈ ಜಿಲ್ಲೆಗಳಲ್ಲಿ ಬ್ಯಾಂಕಿಂಗ್ ಅಭಿವೃದ್ಧಿ ಪಥದಲ್ಲಿವೆ ಎಂದು ದ.ಕ. ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.ಅವರು ಸೋಮವಾರ ಇಲ್ಲಿನ ಸಾಯ್ಬ್ರಕಟ್ಟೆಯ ಎಸ್.ಎಸ್ ಕಾಂಪ್ಲೆಕ್ಸ್ ಕಟ್ಟಡಕ್ಕೆ ದ.ಕ. ಕೇಂದ್ರ ಸಹಕಾರಿ ಬ್ಯಾಂಕಿನ ಸ್ಥಳಾಂತರಿತ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು.ಸ್ವಾತಂತ್ರ್ಯ ಪೂರ್ವದಲ್ಲಿಯೇ ಸಹಕಾರಿ ಕ್ಷೇತ್ರ ಪ್ರಚಲಿತದಲ್ಲಿತ್ತು. ಗ್ರಾಹಕರ ಅಗತ್ಯತೆಯನ್ನು ಅರಿತು, ನಗುಮೊಗದ ಸೇವೆ ನೀಡಿದ್ದಲ್ಲಿ ಬ್ಯಾಂಕಿಂಗ್ ಕ್ಷೇತ್ರ ಅಭಿವೃದ್ಧಿ ಸಾಧ್ಯ. ಜನತೆಯ ಅನುಕೂಲಕ್ಕಾಗಿ ಮೇಲಿನ ಅಂತಸ್ತಿನಿಂದ ನೆಲಅಂತಸ್ತಿಗೆ ಬ್ಯಾಂಕಿನ ಸಾಯ್ಬ್ರಕಟ್ಟೆ ಶಾಖೆಯನ್ನು ಸ್ಥಳಾಂತರ ಮಾಡಲಾಗಿದೆ ಎಂದು ಹೇಳಿದರು.ಶಿರಿಯಾರ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ಪ್ರದೀಪ್ ಬಳ್ಳಾಲ್ ಮಾತನಾಡಿ, ಜನರು ಬಡ್ಡಿ ದಂಧೆಗೆ ಬಲಿಯಾಗುವುದನ್ನು ತಡೆಯಲು ರಾಜೇಂದ್ರ ಕುಮಾರ್ ಅವರು ಬ್ಯಾಂಕ್‍ನಿಂದ ಕನಿಷ್ಠ ದಾಖಲೆಯಲ್ಲಿ ಗರಿಷ್ಠ ಸಾಲ ನೀಡುತ್ತಿದ್ದಾರೆ. ಗ್ರಾಮದ ಜನರು ಬ್ಯಾಂಕ್ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಗ್ರಾಹಕರಿಗೆ ಬೇಕಾಗಿ ಹವಾನಿಯಂತ್ರಿತ ಸುಸಜ್ಜಿತ ಬ್ಯಾಂಕ್ ಶಾಖೆಯನ್ನು ಇಲ್ಲಿ ತೆರೆಯಲು ಡಾ.ಎಂ.ಎನ್. ರಾಜೇಂದ್ರ ಕುಮಾರ್ ಕಾರಣರಾಗಿದ್ದು, ಅಭಿನಂದನಾರ್ಹರು ಎಂದು ಹೇಳಿದರು.ಬ್ಯಾಂಕಿನ ಎಟಿಎಂ ಕೇಂದ್ರ, ಗ್ರಾಹಕರಿಗೆ ಠೇವಣಿ ಪತ್ರ, ಸ್ವಸಹಾಯ ಸಾಲ ಪತ್ರ ವಿತರಣೆ, ಹೊಸ ಸ್ವಸಹಾಯ ಸಂಘಗಳ ಉದ್ಘಾಟನೆ ಕಾರ್ಯಕ್ರಮ ಇದೇ ಸಂದರ್ಭದಲ್ಲಿ ನಡೆಯಿತು.ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಜಿಲ್ಲಾ ಸಹಕಾರಿ ಉಪನಿಬಂಧಕಿ ಲಾವಣ್ಯ, ಶಿರಿಯಾರ ಗ್ರಾಪಂ ಅಧ್ಯಕ್ಷ ಸುಧೀಂದ್ರ ಶೆಟ್ಟಿ, ಕಟ್ಟಡ ಮಾಲಕರಾದ ಶರತ್ ಕುಮಾರ್ ಶೆಟ್ಟಿ ಮತ್ತು ಸುರೇಶ್ ಶೆಟ್ಟಿ ಬಿ. ಆಗಮಿಸಿದ್ದರು.ಕಾರ್ಯಕ್ರಮದಲ್ಲಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಶಶಿಕುಮಾರ್ ರೈ ಬೊಳ್ಯೊಟ್ಟು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ., ಬ್ಯಾಂಕ್ ನಿರ್ದೇಶಕರಾದ ಟಿ.ಜಿ. ರಾಜಾರಾಮ ಭಟ್, ಭಾಸ್ಕರ ಎಸ್. ಕೋಟ್ಯಾನ್, ಎಂ. ವಾದಿರಾಜ ಶೆಟ್ಟಿ, ಎಸ್. ರಾಜು ಪೂಜಾರಿ, ಶಶಿಕುಮಾರ್ ರೈ ಬಿ., ಎಸ್. ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಹರಿಶ್ಚಂದ್ರ, ಎಂ. ಮಹೇಶ್ ಹೆಗ್ಡೆ, ಬಿ. ಅಶೋಕ್ ಕುಮಾರ್ ಶೆಟ್ಟಿ, ಕೆ. ಜೈರಾಜ್ ಬಿ. ರೈ, ಕುಶಾಲಪ್ಪ ಗೌಡ ಪಿ, ಎಸ್.ಎನ್. ಮನ್ಮಥ, ರಾಜೇಶ್ ರಾವ್, ಸದಾಶಿವ ಉಳ್ಳಾಲ್, ರಮೇಶ್ ಎಚ್.ಎನ್. ಮೊದಲಾದವರಿದ್ದರು.ಬ್ಯಾಂಕ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿದರು. ದಾಮೋದರ ಶರ್ಮಾ ನಿರೂಪಿಸಿದರು. ಅಶೋಕ್ ಕುಮಾರ್ ಶೆಟ್ಟಿ ವಂದಿಸಿದರು.