ಕನ್ನಡಪ್ರಭ ವಾರ್ತೆ ನಾಪೋಕ್ಲು
ನಾಪೋಕ್ಲು ಸಹಕಾರ ಮಹಿಳಾ ಸಮಾಜದಲ್ಲಿ ಮಂಗಳವಾರ ಕೊಡಗು ಜಿಲ್ಲಾ ಪಂಚಾಯಿತಿ ಕೃಷಿ ಇಲಾಖೆ ಮಡಿಕೇರಿ ತಾಲೂಕು ವತಿಯಿಂದ ಬೀಜೋಪಚಾರ ಆಂದೋಲನ ಹಾಗೂ ಸುರಕ್ಷಿತ ಕೀಟನಾಶಕ ಬಳಕೆ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇಲಾಖೆಯಲ್ಲಿ ರಿಯಾಯಿತಿ ದರದಲ್ಲಿ ಸಿಗುವ ಹಲವು ಯಂತ್ರೋಪಕರಣಗಳು ಹಾಗೂ ಬೆಳೆ ವಿಮೆಯ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.ಪೊನ್ನಂಪೇಟೆಯ ಅರಣ್ಯ ಮಹಾ ವಿದ್ಯಾಲಯ ಪ್ರಾಧ್ಯಾಪಕ ಡಾ. ಕೆಂಚಾರೆಡ್ಡಿ ಮಾತನಾಡಿ, ಬತ್ತದ ಬೀಜೋಪಚಾರ ಮತ್ತು ಸುರಕ್ಷಿತ ಕೀಟನಾಶಕ ಬಳಕೆಯ ಕುರಿತು ಮಾಹಿತಿ ನೀಡಿದರು. ಭತ್ತದ ಬೆಳೆಯಲ್ಲಿ ಬರುವ ವಿಧ ರೋಗಗಳ ನಿರ್ವಹಣೆಯ ಕುರಿತು ರೈತರಿಗೆ ಮನವರಿಕೆ ಮಾಡಿಕೊಟ್ಟರು. ಜಿಲ್ಲಾ ಸಂಯೋಜಕ ಕುಮುದ ಮಾತನಾಡಿ, ಕಿರು ಆಹಾರ ಸಂಸ್ಕರಣೆಯ ಬಗ್ಗೆ ಮಾಹಿತಿ ನೀಡಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಹೇಮಾ ಅರುಣ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಹಿಳಾ ಸಮಾಜದ ಅಧ್ಯಕ್ಷೆ ರೇಷ್ಮಾ ಉತ್ತಪ್ಪ ಉದ್ಘಾಟಿಸಿದರು. ತಾಲೂಕು ತಾಂತ್ರಿಕ ವ್ಯವಸ್ಥಾಪಕಿ ಕೆ..ಎಸ್ ಮೋನಿಕ, ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಪಿ.ಎಚ್ ಮೋನಿಷಾ ಇದ್ದರು. ಮಹಿಳಾ ಸಮಾಜದ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಸಿಬ್ಬಂದಿ ಭಾಗವಹಿದ್ದರು.