ಕನ್ನಡಪ್ರಭ ವಾರ್ತೆ ಕಲಬುರಗಿ
ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನ ಗಾಣಗಾಪುರ ದತ್ತಾತ್ರೇಯ ದೇವಾಸ್ಥಾನದ ಅಭಿವೃದ್ಧಿಯನ್ನು ಪಂಡರಪುರ ತುಳಜಾಪುರ ಮಾದರಿಯಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಹೇಳಿದರು.ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದತ್ತಾತ್ತೇಯ ದೇವಸ್ಥಾನದ ಹಾಗೂ ದೇವಸ್ಥಾನದ ವ್ಯಾಪ್ತಿ ಪ್ರದೇಶವನ್ನು ಅಭಿವೃದ್ಧಿಪಡಿಸಲು ತಯಾರಿಸಲಾದ ಮಾಸ್ಟರ್ ಪ್ಲಾನ್‌ಗೆ ಮಂಜೂರಾತಿ ನೀಡುವ ಬಗ್ಗೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳ ಜತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ. ಮಾತಾಡಿದ ಅವರು, ಗಾಣಗಾಪುರ ಕ್ಷೇತ್ರ ಈ ಭಾಗದ ದೊಡ್ಡ ಕ್ಷೇತ್ರವಾಗಿದೆ ಪ್ರತಿನಿತ್ಯ ನೂರಾರು ಭಕ್ತರು ದರುಶನ ಪಡೆಯಲು ಆಗಮಿಸುತ್ತಾರೆ ಇದನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ ಅದರಂತೆ ಕೆಲಸ ಮಾಡಲಾಗುವುದು ಭಕ್ತರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗತ್ತದೆ ಎಂದರು.
ಅಫಜಲ್ಪುರ ಶಾಸಕ ಎಂ.ವೈ. ಪಾಟೀಲ ಮಾತನಾಡಿ, ಪ್ರಸಾದ ಯೋಜನೆ ಅಡಿಯಲ್ಲಿ ಪ್ತಸ್ತಾಪಿಸಲಾದ ಪ್ರಸ್ತಾವನೆಯನ್ನು ಆದ್ಯತೆ ಮೇರೆಗೆ ಸರ್ಕಾರಕ್ಕೆ ಕಳುಹಿಸಿ ಅನುಮೋದನೆ ಪಡೆಯಬೇಕು. ಎಲ್ಲಾ ಅಧಿಕಾರಿಗಳು ತಮಗೆ ನೀಡಿದ ಕೆಲಸ ಕಾರ್ಯಗಳನ್ನು ಜವಬ್ದಾರಿಯಿಂದ ನಿರ್ವಹಿಸಬೇಕೆಂದು ಸಭೆಯ ಗಮನಕ್ಕೆ ತಂದರು.ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಾತನಾಡಿ, ದತ್ತಾತ್ತೇಯ ದೇವಸ್ಥಾನಕ್ಕೆ ಬಂದಂತಹ ಭಕ್ತರಿಗೆ ನಿತ್ಯ ಅಭಿಷೇಕ ಪೂಜೆ ಮಾಡಲು ಪ್ರತ್ಯೇಕ ಅಭಿಷೇಕ ಕೋಣೆ ವ್ಯವಸ್ಥೆ ಮಾಡಬೇಕು, ಬಸ್ ಸ್ಟ್ಯಾಂಡ್ ವರೆಗೆ ಹಾಗೂ ದೇವಸ್ಥಾನದಿಂದ ಹನುಮಾನ ದೇವಸ್ಥಾನದ ವರೆಗೆ ವಾಕ್ ವೇವ್ ಅಭಿವೃದ್ಧಿ ಮಾಡಬೇಕು ಎಂಬ ವಿಷಯವನ್ನು ಅಧಿಕಾರಿಗಳು ಚರ್ಚಿಸಿದರು.
ದತ್ತಾತ್ತೇಯ ದೇವಸ್ಥಾನದಲ್ಲಿ ವ್ಯಾಪ್ತಿಯಲ್ಲಿ ಬರುವ ಸಂಗಮ ದೇವಸ್ಥಾನ ಕಲ್ಲೇಶ್ವರ ದೇವಸ್ಥಾನ ಹಾಗೂ ಚಿದಾನಂದ ದೇವಸ್ತಾನಗಳ ಭದ್ರತಾ ಹಿತದೃಷ್ಟಿಯಿಂದ ಪ್ರತ್ಯೇಕ ಪೊಲೀಸ್ ಸಿಬ್ಬಂದಿಗಳನ್ನು ಪಂಢರಾಪುರ, ತುಳಜಾಪುರ ಮಾದರಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕೆಂದು ಮಾಜಿ ಶಾಸಕ ಮಾಲೀಕಯ್ಯ ವಿ ಗುತ್ತೇದಾರ ಅವರು ಹೇಳಿದರು.ದೇವಸ್ಥಾನಕ್ಕೆ ಬೇಕಾಗುವ ಎಲ್ಲ ರೀತಿಯಾಗಿ ಪ್ಲ್ಯಾನ್ ಮಾಡಿ, ಪ್ರಸ್ತಾವನೆಯನ್ನು ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ತಾಪಡೇ ಧರ್ಮಶಾಲೆಯ ಹತ್ತಿರ ಪಂಚಾಯತ್ ಜಾಗವಿದ್ದು, ಬಂದಂತಹ ಭಕ್ತರಿಗೆ ನೆರವಾಗುವಂತೆ ಶೌಚಾಲಯ ನಿರ್ಮಾಣ ಮಾಡಬೇಕು. ದತ್ತಾತ್ರೇಯ ದೇವಸ್ಥಾನದಲ್ಲಿ ದೇವರ ದರ್ಶನಕ್ಕಾಗಿ ನಿರ್ಮಿಸಲಾದ ಕಿಂಡಿಯ ಕಿರಿದಾಗಿದ್ದು, ಭಕ್ತರಿಗೆ ದೇವರು ಕಾಣುವಂತೆ ದೊಡ್ಡದಾಗಿ ಮಾರ್ಪಡಿಸುವುದು ದೇವಸ್ಥಾನದ ಅರ್ಚಕರೊಂದಿಗೆ ಚರ್ಚಿಸಿ ನಿಯಮಾನುಸರ ಕ್ರಮಕೈಗೊಳ್ಳಲಾಗುವುದು ಎಂದರು.ವಿಶೇಷವಾಗಿ ದೇವಸ್ಥಾನಕ್ಕೆ ಪ್ರತಿ ಹುಣ್ಣೆಮೆಯ ದಿನದಂದು ನಾನಾ ರಾಜ್ಯಗಳಿಂದ ಭಕ್ತರು ದೇವರ ದರ್ಶನಕ್ಕಾಗಿ ಬರುತ್ತಾರೆ. ಬಂದಂತಹ ಭಕ್ತರು ತಮ್ಮ ಭಕ್ತಿ ಸೇವೆಯನ್ನು ಹಣದ ಮೂಲಕ ಸಂದಾಯ ಮಾಡುತ್ತಿದ್ದು, ಧಾರ್ಮಿಕ ದತ್ತಿ ಇಲಾಖೆಗೆ ಸರಿಯಾಗಿ ಪಾವತಿಯಾಗದೇ ಇರುವ ಕುರಿತು ಭಕ್ತಾಧಿಗಳು ದೂರು ನೀಡಿದ್ದು, ಪ್ರತಿ ಹುಣ್ಣೆಮೆಯಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸುತ್ತಾರೆ ದೇವಾಲಯದ ವತಿಯಿಂದ ವಿಶೇಷ ದರ್ಶನಕ್ಕೆ ಪಾಳಿ ಪ್ರಕಾರ ರಸೀದಿಗಳನ್ನು ನೀಡಲಾಗುತಿದೆ ಕೆಲವು ಸಂದರ್ಭಗಳಲ್ಲಿ ಮಧ್ಯವರ್ತಿಗಳು ಕಂಡು ಬರುತ್ತಾರೆ ಅದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲು ಕ್ರಮ ಜರುಗಿಸಲು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.
ಪೊಲೀಸರು ತಮಗೆ ನೀಡಿದ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಯಾವುದ ಕರ್ತವ್ಯ ಲೋಪ ಆಗದಂತೆ ಕ್ರಮವಹಿಸಬೇಕು ಎಂದರು. ದೇವಸ್ಥಾನದ ಹುಂಡಿ ಪೆಟ್ಟಿಗೆಯ ಏಣಿಕೆ ಕಾರ್ಯವನ್ನು ದೇವಸ್ಥಾನದ ಸಿಬ್ಬಂದಿ ಬದಲಾಗಿ ಬ್ಯಾಂಕ್ ಸಿಬ್ಬಂದಿ ಮುಖಾಂತ ಕ್ರಮಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಭೆಯಲ್ಲಿ ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ಆಫ್ರೀನ್, ಜಿಲ್ಲಾಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಅಧಿಕಾರಿಗಳು ದೇವಾಲಯದ ಆರ್ಚಕರು, ತಾಲೂಕ ಪಂಚಾಯತ್ ಅಧ್ಯಕ್ಷರು, ಸಮಾಜದ ಮುಖಂಡರು ಭಾಗವಹಿಸಿದ್ದರು.