ಕನ್ನಡಪ್ರಭ ವಾರ್ತೆ ಮದ್ದೂರು
ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದಿಂದ ಸುಮಾರು 4. 85 ಲಕ್ಷ ರು. ವೆಚ್ಚದಲ್ಲಿ ಕೈಗೊಂಡಿರುವ ಶಿಂಷಾ ಎಡದಂಡೆ ಮತ್ತು ಬಲದಂಡೆ ನಾಲಾವ್ಯಾಪ್ತಿಯ ಕೆರೆ ಹಾಗೂ ಅಚ್ಚುಕಟ್ಟು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಈ ಊರಿನ ಮಗನಾದರೆ, ನಾನು ಮೊಮ್ಮಗ. ನಾವಿಬ್ಬರೂ ಸೇರಿ ಒಗ್ಗಟ್ಟಿನಿಂದ ಹೋರಾಟ ನಡೆಸಿದ ಫಲವಾಗಿ ಗ್ರಾಮದ ಅಭಿವೃದ್ಧಿ ಕಾಮಗಾರಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ ಎಂದರು.ಈ ಹಿಂದೆ ಕ್ಷೇತ್ರವನ್ನು ಪ್ರತಿನಿಧಿಸಿದವರು ಗ್ರಾಮದ ಅಭಿವೃದ್ಧಿಗೆ ಯಾವುದೇ ಚಿಂತನೆ ನಡೆಸಿಲ್ಲ. ಇದರಿಂದ ಗ್ರಾಮ ಹಿಂದುಳಿದ ಗ್ರಾಮವಾಗಿದೆ. ದಿನೇಶ್ ಗೂಳಿಗೌಡ ಅಥವಾ ನಾನು ಯಾವುದೇ ರಾಜಕೀಯ ಕುಟುಂಬದಿಂದ ಬಂದಿಲ್ಲ. ಸಾಮಾನ್ಯರಾಗಿ ನಮ್ಮಗಳ ವೃತ್ತಿಯಲ್ಲಿ ತೊಡಗಿಕೊಂಡಿದ್ದೆವು. ಅಚಾನಕ್ಕಾಗಿ ರಾಜಕೀಯ ಬಂದು ಜನಪ್ರತಿನಿಧಿಗಳಾಗಿ ಆಯ್ಕೆಯಾಗಿದ್ದೇವೆ ಎಂದರು.
ಕೆಆರ್‌ಎಸ್ ಜಲಾಶಯದಿಂದ ವಿ.ಸಿ.ನಾಲೆ ಕೊನೆ ಭಾಗದ ರೈತರ ಜಮೀನುಗಳಿಗೆ ನೀರು ಸಮರ್ಪಕವಾಗಿ ಹರಿಯಲು ಅನುಕೂಲವಾಗುವಂತೆ ನಾಲೆಗಳ ದುರಸ್ತಿ ಕಾರ್ಯ ಕೈಗೊಳ್ಳಲು ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಉಪಮುಖ್ಯಮಂತ್ರಿ ಸಕಾರಾತ್ಮವಾಗಿ ಸ್ಪಂದಿಸಿದ್ದಾರೆ ಎಂದರು.
ಮದ್ದೂರು: ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಅವರಿಗೆ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ, ಯೋಗ್ಯತೆ ಇದ್ದು, ಮುಂದಿನ ದಿನಗಳಲ್ಲಿ ಅವರಿಗೆ ಅವಕಾಶ ಸಿಗುತ್ತದೆ ಎಂದು ಕ್ಷೇತ್ರದ ಶಾಸಕ ಕೆ.ಎಂ.ಉದಯ್ ದೃಢವಾಗಿ ಹೇಳಿದರು.
ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಪಕ್ಷದ ಕೆಲವು ಶಾಸಕರ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದರು.ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿ ಬದಲಾವಣೆ ಕಾಂಗ್ರೆಸ್ ಹೈಕಮಾಂಡ್ ವಿವೇಚನೆಗೆ ಬಿಡಲಾಗಿದೆ ಹೊರತು ಯಾರೋ ಶಾಸಕರು ಚಟಕ್ಕೆ ಮಾತನಾಡಿದರೆ ಅದಕ್ಕೆ ಬೆಲೆ ಕೊಡುವ ಅಗತ್ಯವಿಲ್ಲ. ಸಿಎಂ, ಡಿಸಿಎಂ ಬದಲಾವಣೆ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಸಮ್ಮುಖದಲ್ಲಿ ಚರ್ಚೆಯಾಗಬೇಕೇ ಹೊರತು ಶಾಸಕರ ಇತಿಮಿತಿಯಲ್ಲಿ ಚರ್ಚೆಯಾಗುವ ವಿಷಯವಲ್ಲ. ಈ ವಿಚಾರದಲ್ಲಿ ನಾನು ಅಥವಾ ರಸ್ತೆಯಲ್ಲಿ ಓಡಾಡುವ ಜನರು ಆಡುವ ಆಟ ಕಾಂಗ್ರೆಸ್ ಪಕ್ಷದಲ್ಲಿ ನಡೆಯುವುದಿಲ್ಲ ಎಂದರು.