ರಾಮನಗರ: ಚುನಾವಣೆಯಲ್ಲಿ ನನಗೆ ಮತ ನೀಡುವಂತೆ ಮನವಿ ಮಾಡಿದ್ದೇ ನೀವೆಲ್ಲಾ ಇಕ್ಬಾಲ್ ಹುಸೇನ್ ಅವರನ್ನು ಗೆಲ್ಲಿಸುವ ಮೂಲಕ ನನಗೆ ಶಕ್ತಿ ನೀಡಿದ್ದೀರಿ. ನಿಮಗೆ ನಾನು ಆಭಾರಿಯಾಗಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದ್ದೇವೆ. ಇಡೀ ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿ ಮಾಡಿ ನಿಮ್ಮ ಋಣ ತೀರಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಇಕ್ಬಾಲ್ ಹುಸೇನ್, ಮದ್ದೂರು ಕ್ಷೇತ್ರ ಶಾಸಕ ಉದಯ್, ಮಾಜಿ ಶಾಸಕ ಕೆ.ರಾಜು, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಬಿಎಂಐಸಿಪಿ ಅಧ್ಯಕ್ಷ ರಘುನಂದನ್ ರಾಮಣ್ಣ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗುರುಪ್ರಸಾದ್ , ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಚಿತ್ರನಟರಾದ ದುನಿಯಾ ವಿಜಯ್, ನೆನಪಿರಲಿ ಪ್ರೇಮ್ ಮತ್ತಿತರರು ಉಪಸ್ಥಿತರಿದ್ದರು.
ಬಾಕ್ಸ್.............ದರ್ಶನ್ ಗೆ ಅನ್ಯಾಯವಾಗಿದ್ದರೆ ನ್ಯಾಯ ಕೊಡಿಸುವೆ: ಡಿಕೆಶಿ
ರಾಮನಗರ: ನಟ ದರ್ಶನ್ ಗೆ ಅನ್ಯಾಯವಾಗಿದ್ದಲ್ಲಿ ನ್ಯಾಯ ಕೊಡಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದರ್ಶನ್ ಅಭಿಮಾನಿಗಳಿಗೆ ಭರವಸೆ ನೀಡಿದರು.ಚಾಮುಂಡೇಶ್ವರಿ ಕರಗ ಮಹೋತ್ಸವದ ಅಂಗವಾಗಿ ನಡೆದ ಸಂಗೀತ ರಸ ಸಂಜೆ ಕಾರ್ಯಕ್ರಮದ ವೇದಿಕೆಗೆ ಆಗಮಿಸಿದ್ದ ಅವರು, ಭಾಷಣ ಮಾಡುವ ಸಮಯದಲ್ಲಿ ದರ್ಶನ್ ಅಭಿಮಾನಿಗಳು ಡಿಬಾಸ್ ಎಂದು ಘೋಷಣೆ ಕೂಗಲು ಆರಂಭಿಸಿದರು.
ಈ ವೇಳೆ ಡಿ.ಕೆ.ಶಿವಕುಮಾರ್, ದರ್ಶನ್ ಅವರ ಧರ್ಮಪತ್ನಿ ನನ್ನನ್ನು ಭೇಟಿಯಾಗಲು ಸಮಯ ಕೇಳಿದ್ದಾರೆ. ಬುಧವಾರ ಭೇಟಿ ಸಮಯ ನೀಡಿದ್ದೇನೆ. ದರ್ಶನ್‌ಗೆ ಅನ್ಯಾಯವಾಗಿದ್ದರೆ ನ್ಯಾಯ ಕೊಡಿಸೋಣ. ಹಾಗೇ ಈ ದೇಶದ ಕಾನೂನನ್ನು ಗೌರವಿಸ ಬೇಕಿದೆ. ಕಾನೂನಿನ ಇತಿಮಿತಿಯಲ್ಲಿ ಸಹಾಯ ಮಾಡುವುದಾಗಿ ಸ್ಪಷ್ಟಪಡಿಸಿದರು.(ಫೋಟೋ ಕಡ್ಡಾಯ)
24ಕೆಆರ್ ಎಂಎನ್ 3.ಜೆಪಿಜಿರಾಮನಗರ ಕರಗ ಮಹೋತ್ಸದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಶಾಸಕ ಇಕ್ಬಾಲ್ ಹುಸೇನ್ ಹಾಗೂ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗುರುಪ್ರಸಾದ್ ಅಭಿನಂದಿಸಿದರು.