ಗ್ರಾಮೀಣ ರಸ್ತೆಗಳ ಅಭಿವೃದ್ಧಿ ದೇಶದ ಪ್ರಗತಿಗೆ ಪೂರಕ: ಶಾಸಕ ಸಿ.ಪುಟ್ಟರಂಗಶೆಟ್ಟಿ

KannadaprabhaNewsNetwork |  
Published : Apr 20, 2026, 01:30 AM IST
 ೨.೩೦ ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ | Kannada Prabha

ಸಾರಾಂಶ

ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿ ದೇಶದ ಪ್ರಗತಿಗೆ ಪೂರಕವಾಗಿದೆ. ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಜನತೆಯ ಆಶಯಕ್ಕೆ ಬದ್ಧರಾಗಿ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಸಮುದಾಯ ಭವನ, ಆಶ್ರಯ ಮನೆ, ಗಂಗಾ ಕಲ್ಯಾಣ ಯೋಜನೆ ಸೇರಿ ಸರ್ಕಾರ ಮಂಜೂರು ಮಾಡುವ ಅನುದಾನ ಹಾಗೂ ಸೌಲಭ್ಯಗಳನ್ನು ಜನರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ತಾಲೂಕಿನ ಬೂದಿತಿಟ್ಟು, ಕಾಗಲವಾಡಿ ಮೋಳೆ, ಕರುಳುಮೋಳೆ, ನಲ್ಲೂರು ಮೋಳೆ ಗ್ರಾಮಗಳಲ್ಲಿ ₹೨.೩೦ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಬೂದಿತಿಟ್ಟು ಗ್ರಾಮದಲ್ಲಿ ೨೦೨೫- ೨೦೨೬ನೇ ಸಾಲಿನ ಮಳೆ ಪರಿಹಾರ ಯೋಜನೆಯಡಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ₹೫೦ ಲಕ್ಷ, ಕಾಗಲವಾಡಿ ಮೋಳೆ ಗ್ರಾಮಕ್ಕೆ ರಸ್ತೆ, ಅಭಿವೃದ್ಧಿಗೆ ₹೮೦ಲಕ್ಷ , ಕರುಳುಮೋಳೆ ಗ್ರಾಮಕ್ಕೆ ರಸ್ತೆ, ಚರಂಡಿ ಅಭಿವೃದ್ಧಿಗೆ ₹೫೦ಲಕ್ಷ , ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ ಅನುದಾನದಡಿ ಜ್ಯೋತಿಗೌಡನಪುರ ಮಾರ್ಗ ನಲ್ಲೂರು ಮೋಳೆ ಗ್ರಾಮಕ್ಕೆ ಸಂಪರ್ಕ ರಸ್ತೆಗೆ ₹೫೦ ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುವುದು ಎಂದರು.

ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿ ದೇಶದ ಪ್ರಗತಿಗೆ ಪೂರಕವಾಗಿದೆ. ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಜನತೆಯ ಆಶಯಕ್ಕೆ ಬದ್ಧರಾಗಿ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಸಮುದಾಯ ಭವನ, ಆಶ್ರಯ ಮನೆ, ಗಂಗಾ ಕಲ್ಯಾಣ ಯೋಜನೆ ಸೇರಿ ಸರ್ಕಾರ ಮಂಜೂರು ಮಾಡುವ ಅನುದಾನ ಹಾಗೂ ಸೌಲಭ್ಯಗಳನ್ನು ಜನರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಸಂಬಂಧಪಟ್ಟ ಗುತ್ತಿಗೆದಾರರು ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿ, ಈ ಭಾಗದ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸೂಚನೆ ನೀಡಿದರು.

ಮಲೆ ಮಾದೇಶ್ವರ ಬೆಟ್ಟದ ಪ್ರಾಧಿಕಾರದ ಸದಸ್ಯ ಮರಿಸ್ವಾಮಿ, ತಾಲೂಕು ಉಪ್ಪಾರ ಸಂಘದ ಅಧ್ಯಕ್ಷ ಪಿ. ಲಿಂಗರಾಜು ಬೂದಿತಿಟ್ಟು, ಕೆಡಿಪಿ ಸದಸ್ಯ ಶ್ರೀನಿವಾಸ್, ಗ್ರಾಪಂ ಮಾಜಿ ಉಪಾಧ್ಯಕ್ಷ ಸಿದ್ದರಾಜು, ಸದಸ್ಯೆ ಮಂಜುಳ, ಮುಖಂಡರಾದ ಮಹೇಶ್, ಅಂಕಪ್ಪ, ಮಹದೇವಶೆಟ್ಟಿ, ಶಂಕರ್, ಕೆಆರ್‌ಐಡಿಎಲ್ ಎಂಜಿನಿಯರ್ ಮಧುಸೂಧನ್ ಸೇರಿ ಗ್ರಾಮಗಳ ಯಜಮಾನರು, ಮುಖಂಡರು, ಗ್ರಾಮಸ್ಥರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಗಿ ಖರೀದಿ ಕೇಂದ್ರಕ್ಕೆ ಹೊರ ಜಿಲ್ಲೆಯ ರಾಗಿ
ಬಹುಮತವಿದ್ದರೂ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ಸಿಗರೇ ಅಡ್ಡಗಾಲು