ಕನ್ನಡಪ್ರಭ ವಾರ್ತೆ ಮದ್ದೂರು
ಕಾವೇರಿ ನೀರಾವರಿ ನಿಗಮದಿಂದ 4.95 ಲಕ್ಷ ರು. ವೆಚ್ಚದಲ್ಲಿ ಪಟ್ಟಣದ ಮದ್ದೂರಮ್ಮ ಕಲ್ಯಾಣ ಮಂಟಪದ ಬಳಿ ಬೈರನ್ ನಾಲೆ ಸೇರುವ ರಸ್ತೆ ಮತ್ತು ಆಂತರಿಕ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿ, ಮಾಜಿ ಸಿಎಂ ಎಸ್.ಎಂ.ಕೃಷ್ಣರ ಅಧಿಕಾರ ಅವಧಿಯಲ್ಲಿ ಮದ್ದೂರು ಕ್ಷೇತ್ರ ಅಭಿವೃದ್ಧಿಯಾಗಿರುವುದನ್ನು ಬಿಟ್ಟರೆ ಕಳೆದ 20 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾಣದೆ ಹಿಂದುಳಿದ ಕ್ಷೇತ್ರವಾಗಿದೆ ಎಂದರು.
ಆನಂತರ ಕ್ಷೇತ್ರದಿಂದ ಆಯ್ಕೆಯಾದವರು ಕೇವಲ ರಾಜಕಾರಣಕ್ಕೆ ಮಾತ್ರ ಸೀಮಿತರಾಗಿದ್ದರೆ ಹೊರತು ನೀರಾವರಿ, ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲ ಸಮಸ್ಯೆಗಳ ಬಗ್ಗೆ ದಿವ್ಯ ನಿರ್ಲಕ್ಷ ತಾಳಿರುವುದು ನನಗೆ ಬೇಸರ ತರಿಸಿದೆ ಎಂದರು.ಅಭಿವೃದ್ಧಿ ವಿಚಾರದಲ್ಲಿ ಹಿಂದಿನ ಶಾಸಕರುಗಳ ನಿರ್ಲಕ್ಷದಿಂದ ಬೇಸತ್ತು ಕ್ಷೇತ್ರದ ಜನತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಹೆಚ್ಚಿನ ಮತಗಳನ್ನು ನೀಡಿ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಮತ ನೀಡಿದ ಜನರಋಣ ತೀರಿಸುವ ಉದ್ದೇಶದಿಂದ ತಾವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಲ್ಲಾ ಕ್ಷೇತ್ರಗಳಿಗಿಂತ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಪಡಿಸುವ ಬಯಕೆ ಹೊಂದಿದ್ದೇನೆ ಎಂದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು, ಪುರಸಭಾ ಉಪಾಧ್ಯಕ್ಷ ಟಿ.ಅರ್.ಪ್ರಸನ್ನ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಸದಸ್ಯರಾದ ಸರ್ವಮಂಗಳ, ಎಂ.ಬಿ.ಸಚಿನ್, ಶಾಂತಮ್ಮ, ಕಮಲನಾಥ್, ವೆಂಕಟೇಶ, ಬಸವರಾಜು. ಮಾಜಿ ಸದಸ್ಯರಾದ ಡಾಬಾ ಮಹೇಶ್, ಎಂ.ಡಿ.ಮಹಾಲಿಂಗಯ್ಯ, ಮುಖಂಡರಾದ ಅರುಣ್ ಕುಮಾರ್, ಯಶ್ವಂತ್,ಕಾವೇರಿ ನೀರಾವರಿ ನಿಗಮದ ಎಇಇ ನಾಗರಾಜು ಮತ್ತಿತರರು ಇದ್ದರು.