ಗ್ರಾಪಂಗಳು ಸದೃಢಗೊಂಡರೆ ದೇಶದ ಅಭಿವೃದ್ಧಿ

KannadaprabhaNewsNetwork |  
Published : Oct 22, 2024, 12:08 AM IST
ಹಿರೇಬಾಗೇವಾಡಿ ನೂತನ ಗ್ರಾಮ ಪಂಚಾಯಿತಿ ಕಟ್ಟಡವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಉದ್ಘಾಟಿಸಿದರು | Kannada Prabha

ಸಾರಾಂಶ

ತಾರತಮ್ಯವಿಲ್ಲದೆ ಎಲ್ಲ ಗ್ರಾಮಗಳ ಅಭಿವೃದ್ಧಿ ಮಾಡುತ್ತೇನೆ. ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ತಲೆಎತ್ತಿ ನೋಡುವಂತೆ ಮಾಡುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ತಾರತಮ್ಯವಿಲ್ಲದೆ ಎಲ್ಲ ಗ್ರಾಮಗಳ ಅಭಿವೃದ್ಧಿ ಮಾಡುತ್ತೇನೆ. ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ತಲೆಎತ್ತಿ ನೋಡುವಂತೆ ಮಾಡುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕ್ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ಹಿರೇಬಾಗೇವಾಡಿ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಿಸಿರುವ ಭಾರತ ನಿರ್ಮಾಣ ರಾಜೀವ್ ಗಾಂಧಿ ಸೇವಾ ಕೇಂದ್ರ ಹಾಗೂ ಹಿರೇ ಬಾಗೇವಾಡಿಯ ನೂತನ ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯತಿಗಳು ಬಲಿಷ್ಠಗೊಂಡರೇ ಮಹಾತ್ಮ ಗಾಂಧೀಜಿಯವರ ಕನಸು ನನಸಾದಂತೆ ಎಂದರು.

ಗ್ರಾಮ ಪಂಚಾಯತಿಗಳನ್ನು ಬಲಿಷ್ಠಗೊಳಿಸುವುದು, ಸ್ಥಳೀಯರಿಗೆ ಅಧಿಕಾರ ನೀಡಿ, ಅವರಿಗೆ ಶಕ್ತಿ ತುಂಬಬೇಕು ಎಂಬುವುದು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಉದ್ದೇಶವಾಗಿತ್ತು. ಅವರ ದೂರದೃಷ್ಟಿಯ ಫಲವಾಗಿ ಇಂದು ಪಂಚಾಯತಿಗಳಿಗೆ ಹೆಚ್ಚು ಅನುದಾನ ಬರುವಂತಾಗಿದೆ. ಹಿರೇಬಾಗೇವಾಡಿ ಗ್ರಾಮದ ಬಗ್ಗೆ ನನಗೆ ವಿಶೇಷ ಅಭಿಮಾನವಿದ್ದು, ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ಎಂದು ತಿಳಿಸಿದರು.ಈ ಹಿಂದೆ ಪಂಚಾಯತಿಗಳಿಗೆ ಅನುದಾನ ಇರಲಿಲ್ಲ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ರಾಮ ಪಂಚಾಯತಿಗಳಿಗೂ ಶಕ್ತಿ ಬಂತು. ಅಂದು ಕರೆಂಟ್ ಬಿಲ್ ಕಟ್ಟಲು ಪರದಾಡುತ್ತಿದ್ದ ಪಂಚಾಯತಿಗಳು ಇಂದು ಕೋಟಿ ಕೋಟಿ ರುಪಾಯಿ ಆದಾಯ ಹೊಂದಿವೆ. ಇದಕ್ಕೆ ಯುಪಿಎ ಸರ್ಕಾರದ ದೂರದೃಷ್ಟಿಯೇ ಕಾರಣ ಎಂದು ತಿಳಿಸಿದರು.

ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಅನುದಾನ ತರುತ್ತೇನೆ. ನಾನು ಎಲ್ಲೇ ಇದ್ದರೂ ಗ್ರಾಮೀಣ ಕ್ಷೇತ್ರದ ಜನರ ಪ್ರೀತಿ ಮರೆತಿಲ್ಲ. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಕರ್ನಾಟಕ ಪಬ್ಲಿಕ್ ಸ್ಕೂಲ್, ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭಿಸಲಾಗಿದೆ ಎಂದರು.ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ವಿಶೇಷ ಪ್ರಯತ್ನ ಮಾಡಿ ಪಂಚಾಯತಿ ಕಟ್ಟಡವನ್ನು ನಿರ್ಮಿಸಲಾಗಿದೆ. ಕಟ್ಟಡ ನಿರ್ಮಾಣಕ್ಕೆ ಒಟ್ಟು ₹52 ಲಕ್ಷ ಮಂಜೂರು ಮಾಡಿಸಲಾಗಿದೆ. ಎಲ್ಲರೂ ಕೈ ಜೋಡಿಸಿದ್ದರಿಂದ ಸುಸಜ್ಜಿತ ಕಟ್ಟಡ ನಿರ್ಮಾಣ ಆಗಿದೆ ಎಂದರು. ಈ ವೇಳೆ ಬಡೇಕೊಳ್ಳಿಮಠದ ನಾಗೇಂದ್ರ ಸ್ವಾಮೀಜಿ, ಅರಳಿಕಟ್ಟಿಯ ಶಿವಾಚಾರ್ಯ ಸ್ವಾಮೀಜಿ, ಮುತ್ನಾಳ ಕೇದಾರ ಪೀಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತಾರಿಹಾಳ ಅಡವಿ ಸಿದ್ದೇಶ್ವರ ಮಠದ ಅಡವೀಶ್ವರ ದೇವರು, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ.ಪಾಟೀಲ, ಸುರೇಶ ಇಟಗಿ, ಗ್ರಾಮ ಪಂಚಾಯತಿ ಅಧ್ಯಕ್ಷೆ ಸ್ಮಿತಾ ಪಾಟೀಲ, ಉಪಾಧ್ಯಕ್ಷೆ ಪುಷ್ಪ ನಾಯ್ಕರ್ ಉಪಸ್ಥಿತರಿದ್ದರು.ಯಾವುದೇ ವಿಚಾರದಲ್ಲೂ ನಾನು ಸ್ಥಳೀಯರಿಗೆ ಪ್ರಥಮ ಆದ್ಯತೆ ನೀಡುತ್ತಿದ್ದು, ಬಸವಣ್ಣ, ಅಂಬೇಡ್ಕರ್ ಆಶಯದಂತೆ ಕೆಲಸ ಮಾಡುತ್ತಿರುವೆ. ಪ್ರಜಾಪ್ರಭುತ್ವದ ದೇವಾಲಯದಿಂದ ಜನರ ಸಮಸ್ಯೆಗಳಿಗೆ ಸ್ಪಂದಿಸಿದಾಗ ಸಾರ್ಥಕತೆ ಸಿಗುತ್ತದೆ. ಎಲ್ಲರ ಕೆಲಸ ಮಾಡಿಕೊಟ್ಟಾಗ ಮನಸಿಗೆ ನೆಮ್ಮದಿ ಸಿಗುತ್ತದೆ. ಎಲ್ಲ ಸಿಬ್ಬಂದಿ, ಸದಸ್ಯರು ತಾರತಮ್ಯವಿಲ್ಲದೆ ಜನರ ಕೆಲಸ ಮಾಡಬೇಕು.

-ಲಕ್ಷ್ಮೀ ಹೆಬ್ಬಾಳಕರ್, ಸಚಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಂಚನೆಗೆ ಬ್ಯಾಂಕ್ ಖಾತೆ ಬಳಕೆ: ಅಂತಾರಾಜ್ಯ ಸೈಬರ್ ಕ್ರೈಂ ಜಾಲ ಬಯಲು
ವಿಕಲಚೇತನರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಮಂಜೂರು: ಟಿ.ಎಂ. ಶಾಹೀದ್