ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶ ಅಭಿವೃದ್ಧಿ ಸಾಧ್ಯ: ಸಿದ್ದರಾಮಯ್ಯ

KannadaprabhaNewsNetwork |  
Published : Sep 27, 2024, 01:16 AM IST
Award 4 | Kannada Prabha

ಸಾರಾಂಶ

ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ. ಹಾಗಾಗಿ ಯುವಪೀಳಿಗೆಯಲ್ಲಿ ವಿಜ್ಞಾನ, ತಂತ್ರಜ್ಞಾನದ ಆಸಕ್ತಿ ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ. ಹಾಗಾಗಿ ಯುವಪೀಳಿಗೆಯಲ್ಲಿ ವಿಜ್ಞಾನ, ತಂತ್ರಜ್ಞಾನದ ಆಸಕ್ತಿ ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗುರುವಾರ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಜೆಎನ್‌ ಟಾಟಾ ಸಭಾಂಗಣದಲ್ಲಿ ನಡೆದ 2022 ಮತ್ತು 2023 ನೇ ಸಾಲಿನ ವಿಜ್ಞಾನಿ ಮತ್ತು ಎಂಜಿನಿಯರ್ ರಾಜ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಅವರು ಮಾತನಾಡಿದರು.

ಪ್ರಶಸ್ತಿ ಪುರಸ್ಕೃತ ವಿಜ್ಞಾನಿಗಳ ಸಾಧನೆ ಯುವ ಪೀಳಿಗೆಗೆ ಆದರ್ಶ. ಇವರ ಸಾಧನೆ ವಿಜ್ಞಾನ-ತಂತ್ರಜ್ಞಾನದಲ್ಲಿ ಯುವ ಪೀಳಿಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಲು ಅನುಕೂಲ ಆಗುತ್ತದೆ. ಭಾರತ ರತ್ನ ಸಿ.ಎನ್.ರಾವ್ ಅವರ ಸಾಧನೆ ಇಡಿ ಮನುಷ್ಯ ಕುಲದ ಹೆಮ್ಮೆ. ವಿಜ್ಞಾನದ ಬೆಳವಣಿಗೆಗೆ ಇವರ ತುಡಿತ ಶ್ಲಾಘನೀಯ. ಪ್ರತಿಭೆ ಅನುವಂಶೀಯ ಅಲ್ಲ. ಅವಕಾಶ ಮತ್ತು ನಿರಂತರ ಶ್ರಮದಿಂದ ಪ್ರತಿಭೆ ವಿಸ್ತಾರಗೊಳ್ಳುತ್ತದೆ ಎಂದು ಹೇಳಿದರು.

ನಮ್ಮ ರಾಜ್ಯ ವಿಜ್ಞಾನ-ತಂತ್ರಜ್ಞಾನ ಮತ್ತು ಸಂಶೋಧನೆಯಲ್ಲಿ ನಂಬರ್ ಒನ್ ಇದೆ. ಈ ವಿಜ್ಞಾನ ತಂತ್ರಜ್ಞಾನದ ಫಲ ಜನ ಸಾಮಾನ್ಯರಿಗೆ ತಲುಪಬೇಕು. ಬೆಂಗಳೂರು ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಆಗಿದೆ ಎಂದರೆ ಇದರಲ್ಲಿ ಹಲವು ವಿಜ್ಞಾನಿಗಳ, ತಂತ್ರಜ್ಞರ ಕೊಡುಗೆ ಇದೆ. ವಿಜ್ಞಾನದ ಆಸಕ್ತಿ ಹೆಚ್ಚಿ, ವಿಜ್ಞಾನಿಗಳ ಸಂಖ್ಯೆ ಹೆಚ್ಚಾದರೆ ದೇಶದ ಬೆಳವಣಿಗೆ ಸಾಧ್ಯ. ಸಮಾಜದ ತಾರತಮ್ಯ ಅಳಿಯಬೇಕಾದರೆ ಎಲ್ಲಾ ಜಾತಿ, ಧರ್ಮ, ವರ್ಗಗಳಿಗೆ ಸಮಾನ ಅವಕಾಶಗಳು‌ ಸಿಗುವಂತಾಗಬೇಕು ಎಂದರು.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಭೋಸರಾಜು ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾರತ ರತ್ನ ಪ್ರೊ.ಸಿಎನ್ಆರ್.ರಾವ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಕೈಜೋಡಿಸಿ
ಹೊಲಗಳಲ್ಲಿ ಚರಗ ಚೆಲ್ಲಿ ಹಬ್ಬ ಆಚರಿಸಿದ ಅನ್ನದಾತರು