- ನೆಲ್ಲಿಹಂಕಲು ಗ್ರಾಮಸಭೆಯಲ್ಲಿ ಗ್ರಾಪಂ ಅಧ್ಯಕ್ಷ ಜಿ.ಎ. ದಿನೇಶ್ ಅಭಿಮತ
ಕನ್ನಡಪ್ರಭ ವಾರ್ತೆ ಚನ್ನಗಿರಿ
ನೆಲ್ಲಿಹಂಕಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ 7 ಗ್ರಾಮಗಳು ಒಳಪಡಲಿವೆ. 841 ಕುಟುಂಬಗಳನ್ನು ಹೊಂದಿದೆ. ಈ ಗ್ರಾಪಂನಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ 482 ಜನ ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 275 ಕುಟುಂಬಗಳು ಮಾತ್ರ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ ಎಂದು ಗ್ರಾಪಂ ಅಧ್ಯಕ್ಷ ಜಿ.ಎ. ದಿನೇಶ್ ಹೇಳಿದರು.ತಾಲೂಕಿನ ಉಬ್ರಾಣಿ ಹೋಬಳಿಯ ನೆಲ್ಲಿಹಂಕಲು ಗ್ರಾಮದ ಶ್ರೀ ಸೇವಾಲಾಲ್ ದೇವಸ್ಥಾನ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಹಾಗೂ 15ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ತಾಲೂಕು ಲೆಕ್ಕ ಪರಿಶೋಧನಾ ತಂಡದ ವ್ಯವಸ್ಥಾಪಕ ಜೆ.ಎಂ. ಕೊಟ್ರೇಶ್ ಮಾತನಾಡಿ, 2024-25ನೇ ಸಾಲಿನ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಮುದಾಯ ಮತ್ತು ವೈಯಕ್ತಿಕ ಕಾಮಗಾರಿ ಹಾಗೂ 15ನೇ ಹಣಕಾಸು ಆಯೋಗ ಮತ್ತು 4ನೇ ರಾಜ್ಯ ಹಣಕಾಸು ಯೋಜನೆಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ 77, ತೋಟಗಾರಿಕಾ ಇಲಾಖೆಯಿಂದ 12 ಹೀಗೆ 89 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಇದಕ್ಕಾಗಿ ₹73.15 ಲಕ್ಷವನ್ನು ಪಾವತಿ ಮಾಡಿರುವ ಬಗ್ಗೆ ಗ್ರಾಮ ಸಭೆಯಲ್ಲಿ ವರದಿ ಮಂಡಿಸಿದರು.
- - -