ಕೆಆರ್‌ಎಸ್‌ ಪ್ರವಾಸಿ ತಾಣ ಮಾದರಿಯಲ್ಲಿ ವಿವಿ ಸಾಗರ ಅಭಿವೃದ್ಧಿ

KannadaprabhaNewsNetwork |  
Published : Jun 11, 2025, 12:14 PM ISTUpdated : Jun 11, 2025, 12:37 PM IST
ಚಿತ್ರ 1 | Kannada Prabha

ಸಾರಾಂಶ

ವಿವಿ ಸಾಗರ ಜಲಾಶಯವನ್ನು ಕೆಆರ್‌ಎಸ್ ಮಾದರಿಯಲ್ಲಿ ಪ್ರವಾಸಿ ತಾಣವನ್ನಾಗಿ ಮೇಲ್ದರ್ಜೆಗೇರಿಸಲು ಯೋಜನೆ

 ಹಿರಿಯೂರು :  ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಾಲೂಕಿನ ವಿವಿ ಸಾಗರ ಜಲಾಶಯವನ್ನು ಕೆಆರ್‌ಎಸ್ ಮಾದರಿಯಲ್ಲಿ ಪ್ರವಾಸಿ ತಾಣವನ್ನಾಗಿ ಮೇಲ್ದರ್ಜೆಗೇರಿಸಲು ಯೋಜನೆ ರೂಪಿಸಿದ್ದು, ಈ ಸಂಬoಧ ಮೊದಲನೇ ಹಂತದಲ್ಲಿ ತಾಲೂಕಿನ ವಿವಿಪುರ ಕ್ರಾಸ್‌ನಿಂದ ವಿವಿಪುರ ಗ್ರಾಮದವರೆಗೆ ಹಾಲಿ ಇರುವ ದ್ವಿ-ಪಥದ ರಸ್ತೆಯನ್ನು ನಾಲ್ಕು ಪಥದ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಕೈಗೊಳ್ಳಬೇಕಾದ ಭೂ ಸ್ವಾಧೀನ ಪ್ರಕ್ರಿಯೆಗಳಿಗೆ ಚಾಲನೆ ನೀಡಲು ಪೂರ್ವಭಾವಿ ಸಭೆ ನಡೆಸಿದರು.

ಪ್ರಸ್ತುತ ಹಿರಿಯೂರು ಪಟ್ಟಣದ ವಿವಿಪುರ ಕ್ರಾಸ್‌ನಿಂದ ವಿವಿಪುರ ಗ್ರಾಮದ ಕಣಿವೆ ಮಾರಮ್ಮ ದೇವಸ್ಥಾನದವರೆಗೆ ಇರುವ 17.50 ಕಿ.ಮೀ ರಸ್ತೆಯನ್ನು ಅಗಲೀಕರಣ ಮಾಡಲು ಸಭೆಯಲ್ಲಿ ಸವಿಸ್ತಾರವಾಗಿ ಚರ್ಚಿಸಲಾಯಿತು. ಸದರಿ ರಸ್ತೆಯು ಲೋಕೋಪಯೋಗಿ ಇಲಾಖೆಗೆ ಸೇರಿದ್ದು ಭೂಸ್ವಾಧೀನಕ್ಕೆ ತಗುಲಬಹುದಾದ ವೆಚ್ಚವನ್ನು ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಗೊಳಿಸಲು ಮತ್ತು ನಾಲ್ಕು ಪಥದ ರಸ್ತೆ ನಿರ್ಮಾಣ ಮತ್ತು ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿಗಳನ್ನು ಜಲ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ಬರುವ ವಿಶ್ವೇಶ್ವರಯ್ಯ ಜಲ ನಿಗಮದಿಂದ ಕೈಗೆತ್ತಿಕೊಳ್ಳಲು ಸೂಚಿಸಲಾಯಿತು.

ಸದರಿ ಪ್ರಸ್ತಾವನೆಗೆ ಆಗಬಹುದಾದ ವಿಸ್ತ್ರತವಾದ ಯೋಜನಾ ವರದಿಯನ್ನು ತಯಾರಿಸಲು ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಯಿತು. ಭೂಸ್ವಾಧೀನ ಸಂಬoಧ ಕೈಗೊಳ್ಳಬೇಕಾದ ಕ್ರಮಗಳನ್ನು ಜಿಲ್ಲಾಧಿಕಾರಿಗಳು ಲೋಕೋಪಯೋಗಿ ಇಲಾಖೆಯ ಸಹಕಾರದೊಂದಿಗೆ ಜಂಟಿ ಸರ್ವೇ ಮಾಡಿ ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳಲು ನಿರ್ದೇಶನ ನೀಡಲಾಯಿತು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಸತ್ಯ ನಾರಾಯಣ, ಜಲ ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಕೃಷ್ಣಮೂರ್ತಿ.ಬಿ.ಕುಲಕರ್ಣಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ, ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಎಂಜಿನಿಯರ್ ಎಫ್.ಎಚ್.ಲಮಾಣಿ, ಕಾರ್ಯಪಾಲಕ ಎಂಜಿನಿಯರ್ ಬಾರಿಕರ ಚಂದ್ರಪ್ಪ, ಲೋಕೋಪಯೋಗಿ ಕಾರ್ಯಪಾಲಕ ಎಂಜಿನಿಯರ್ ನಾಗರಾಜ್, ಹಿರಿಯೂರು ತಹಸೀಲ್ದಾರ್ ರಾಜೇಶ್ ಕುಮಾರ್ ಸೇರಿ ಇತರರಿದ್ದರು.

PREV
Read more Articles on

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ