ಕನ್ನಡಪ್ರಭ ವಾರ್ತೆ ಹನೂರು
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಶಾಸಕ ಎಂಆರ್ ಮಂಜುನಾಥ್ ತಿಳಿಸಿದರು.ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿ ಅವರು ಮಾತನಾಡಿದರು.
ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳಾದ ಕ್ಯೂಬ್ ಕಾಂಪ್ಲೆಕ್ಸ್ ಸುರಂಗ ಮಾರ್ಗ ಮತ್ತು ಮಾಸ್ಟರ್ ಪ್ಲಾನ್ ಆವರಣಗಳ ಬಗ್ಗೆ ಪ್ರಗತಿ ಪರಿಶೀಲನ ಸಭೆಯಲ್ಲಿ ಚರ್ಚಿಸಲಾಯಿತು. ಸುರಂಗ ಮಾರ್ಗದ ಕೊಪ್ಪಳಿ ಮಳೆ ನೀರು ನಿಲ್ಲದ ರೀತಿಯಲ್ಲಿ ವೈಜ್ಞಾನಿಕವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದರು.ವಿವಿಧ ಅಭಿವೃದ್ಧಿ ಕಾಮಗಾರಿಗಳ ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ದೀಪದಗಿರಿ ಒಟ್ಟಿನ ಬಳಿ ನಿರ್ಮಿಸಲಾಗುತ್ತಿರುವ ತಡೆಗೋಡೆ ಕಾಮಗಾರಿ ಒಳಚರಂಡಿ ನಿರ್ಮಾಣ ಹಾಗೂ ರಸ್ತೆ ರಿಟರ್ನಿಂಗ್ ವಾಲ್ ಕಾಮಗಾರಿ ಮತ್ತು ಸಾಲೂರು ಮಠದ ರಸ್ತೆಯ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಸಕಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು ಜಿಲ್ಲಾಧಿಕಾರಿ ಶಿಲ್ಪನಾಗ್ ಮಾತನಾಡಿ, ಕೋಟ್ಯಂತರ ಭಕ್ತರ ಆರಾಧ್ಯ ದೈವ ಮಾದಪ್ಪನ ಸನ್ನಿಧಿಯಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿ ಸಿಬ್ಬಂದಿ ವರ್ಗದವರು ಜವಾಬ್ದಾರಿತವಾಗಿ ಕ್ರಮ ಕೈಗೊಳ್ಳಬೇಕು. ಕಲ್ಯಾಣಿ ಕೊಳವನ್ನು ಇನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಪಡಿಸಿ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸಿ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ಲೋಪದೋಷಗಳು ಬರದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ನೀಡಿದರು.
ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಎಂಆರ್ ಮಂಜುನಾಥ್ ಜಿಲ್ಲಾಧಿಕಾರಿ ಶಿಲ್ಪನಾಗ್ ಪರಿಶೀಲನೆ ನಡೆಸಿದರು.ಇದೇ ಸಂದರ್ಭದಲ್ಲಿ ಸಾಲೂರು ಬೃಹನ್ ಮಠದ ಪೀಠಾಧಿಪತಿಗಳಾದ ಶಾಂತ ಮಲ್ಲಿಕಾರ್ಜುನ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಕೊಳ್ಳೇಗಾಲ ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್, ತಾಲೂಕು ದಂಡಾಧಿಕಾರಿ ಚೈತ್ರ, ಲೋಕೋಪಯೋಗಿ ಇಲಾಖೆಯ ಇಇ ಚಿನ್ನಣ್ಣ, ಚೆಸ್ಕಾಂ ಎಇಇ ರಂಗಸ್ವಾಮಿ, ವಲಯ ಅರಣ್ಯ ಅಧಿಕಾರಿ ಅರುಣ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.--------------
4ಸಿಎಚ್‌ಎನ್54ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿ ಶಾಸಕ ಎಂಆರ್ ಮಂಜುನಾಥ್ ಅವರು ಮಾತನಾಡಿದರು.
---------