ಕನ್ನಡಪ್ರಭ ವಾರ್ತೆ ಅಥಣಿ
ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಲೂಟಿಯಾಗಿದ್ದು, ಅಭಿವೃದ್ಧಿಗೆ ದುಡ್ಡಿಲ್ಲದೆ ಅನೇಕ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿವೆ. ಇಂತಹ ಗ್ಯಾರಂಟಿ ಯೋಜನೆಗಳನ್ನು ನಂಬಿ ಮತದಾರರು ಮೋಸ ಹೋಗಬಾರದು. ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಆಡಳಿತವನ್ನು ನೀಡುವ ಮೂಲಕ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ಸದೃಢ ಹಾಗೂ ಸಮೃದ್ಧ ಭಾರತವನ್ನು ಕಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ಅನೇಕ ಯೋಜನೆಗಳನ್ನು ರೂಪಿಸಿದ್ದಾರೆ. ಜಗತ್ತಿನ ಅನೇಕ ರಾಷ್ಟ್ರಗಳು ಇಂದು ಭಾರತದ ತಿರುಗಿ ನೋಡುವಂತಾಗಿದೆ. ರಾಷ್ಟ್ರದ ಅಭಿವೃದ್ಧಿ ಮತ್ತು ದೇಶದ ಜನತೆಯ ಸುರಕ್ಷತೆಯ ದೃಷ್ಟಿಯಿಂದ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಅದಕ್ಕಾಗಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರನ್ನ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅಥಣಿ ಮಂಡಲ ಬಿಜೆಪಿ ಅಧ್ಯಕ್ಷ ಡಾ.ರವಿ ಸಂಕ, ಗೀತಾ ತೋರಿ, ವಿನಯ ಪಾಟೀಲ, ಮಹಾಂತೇಶ ಮಾಳಿ, ಮಹಾಂತೇಶ ಇರಳೆ, ಸ್ವಾಗತ ತೋರಿ, ನಾರಾಯಣ್ ಭೋಸಲೆ, ಅಮೃತ ಮಹಾಜನ, ರವಿ ಹಿರೇಮಠ, ಅಭಯ ಸಗರೆ, ಜಯದೇವ ಯಲ್ಲಟ್ಟಿ, ಚಂದ್ರು ನಾಯಿಕ, ಸತೀಶ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು