ವಿಶ್ವವೇ ಭಾರತದತ್ತ ತಿರುಗಿ ನೋಡುವ ಅಭಿವೃದ್ಧಿ: ನಾರಾಯಣಸ್ವಾಮಿ

KannadaprabhaNewsNetwork |  
Published : Oct 11, 2026, 03:00 AM IST
ಫೋಟೋ: 8 ಹೆಚ್‌ಎಸ್‌ಕೆ 2ಹೊಸಕೋಟೆ ನಗರದಲ್ಲಿ ಬಿಜೆಪಿ ಸೇವಾ ಸಂಕಲ್ಪ ಅಭಿಯಾನದ ಪ್ರಯುಕ್ತ ಬೀದಿ ನಾಟಕದ ಮೂಲಕ ನರೇಂದ್ರ ಮೋದಿಯವರ ಆಡಳಿತ, ಅಭಿವೃದ್ದಿ ಕಾರ್ಯಗಳ ಜಾಗೃತಿ ಮೂಡಿಸಲಾಯಿತು. | Kannada Prabha

ಸಾರಾಂಶ

ಹೊಸಕೋಟೆ: ದೇಶದ ಅಭಿವೃದ್ಧಿ ಹಾಗೂ ಜಾಗತಿಕ ಮಟ್ಟದಲ್ಲಿ ಭಾರತದ ವರ್ಚಸ್ಸನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ಹಲವು ಜನಪರ ಹಾಗೂ ಅಭಿವೃದ್ಧಿಪರ ಯೋಜನೆಗಳಿಂದಾಗಿ ಇಂದು ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಸಿ ಮೋರ್ಚ ಅಧ್ಯಕ್ಷ ದೇವನಗೊಂದಿ ನಾರಾಯಣಸ್ವಾಮಿ ಹೇಳಿದರು

ಹೊಸಕೋಟೆ: ದೇಶದ ಅಭಿವೃದ್ಧಿ ಹಾಗೂ ಜಾಗತಿಕ ಮಟ್ಟದಲ್ಲಿ ಭಾರತದ ವರ್ಚಸ್ಸನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ಹಲವು ಜನಪರ ಹಾಗೂ ಅಭಿವೃದ್ಧಿಪರ ಯೋಜನೆಗಳಿಂದಾಗಿ ಇಂದು ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಸಿ ಮೋರ್ಚ ಅಧ್ಯಕ್ಷ ದೇವನಗೊಂದಿ ನಾರಾಯಣಸ್ವಾಮಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಜೀವನ ಹಾಗೂ 25 ವರ್ಷಗಳ ಸುದೀರ್ಘ ಆಡಳಿತ ಸೇವೆಯ ಸವಿನೆನಪಿಗಾಗಿ ದೇಶಾದ್ಯಂತ ಹಮ್ಮಿಕೊಂಡಿರುವ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ತಾಲೂಕು ಕಚೇರಿ ಮುಂದೆ ಆಯೋಜಿಸಿದ್ದ ಬೀದಿ ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಆದ ಬಳಿಕ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ‘ವಿಕಸಿತ ಭಾರತ–2047’ ಗುರಿಯತ್ತ ದೇಶವನ್ನು ಕೊಂಡೊಯ್ಯಲು ಸಂಕಲ್ಪ ಮಾಡಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿ, ಡಿಜಿಟಲ್ ತಂತ್ರಜ್ಞಾನ, ಸ್ವಚ್ಛತೆ, ಬಡವರ ಕಲ್ಯಾಣ, ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗಾವಕಾಶ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಇದರಿಂದ ಭಾರತ ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಸ್ಥಾನಮಾನ ಗಳಿಸಿದೆ ಎಂದು ಹೇಳಿದರು. ಪ್ರಧಾನಿ ಮೋದಿ ಅವರ ಬಾಲ್ಯ, ಸಂಘಟನಾ ಜೀವನ, ರಾಜಕೀಯ ಪ್ರವೇಶ, ಹಂತಹಂತವಾಗಿ ಮೇಲೆ ಬಂದು ಗುಜರಾತ್ ಮುಖ್ಯಮಂತ್ರಿ ಆಗಿ ಸಲ್ಲಿಸಿದ ಸೇವೆ, ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕೈಗೊಂಡ ಪ್ರಮುಖ ನಿರ್ಧಾರಗಳು, ಯೋಜನೆಗಳು ಹಾಗೂ ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಬೀದಿ ನಾಟಕ ಪ್ರದರ್ಶನ ಮಾಡಲಾಗುತ್ತಿದೆ ಎಂದು ಹೇಳಿದರು.

ಟೌನ್ ಬಿಜೆಪಿ ಅಧ್ಯಕ್ಷ ಬಾಲಚಂದ್ರ ಮಾತನಾಡಿ, ಸೇವಾ ಸಂಕಲ್ಪ ಅಭಿಯಾನದ ಮೂಲಕ ದೇಶಾದ್ಯಂತ ರಕ್ತದಾನ, ಸಸಿ ನೆಡುವಿಕೆ, ಕೆರೆ–ಕಟ್ಟೆಗಳ ಸ್ವಚ್ಛತೆ, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಹಾಗೂ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕಾರ್ಯಕರ್ತರು ಜನಸೇವೆಯ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸುತ್ತಿದ್ದಾರೆ. ನಾಟಕದ ಮೂಲಕ ಮೋದಿ ಅವರ ಜೀವನದ ಪ್ರಮುಖ ಘಟ್ಟಗಳು, ದೇಶದ ಅಭಿವೃದ್ಧಿ ಕುರಿತ ಅವರ ದೃಷ್ಟಿಕೋನ, ಜನಪರ ಯೋಜನೆಗಳು ಹಾಗೂ ಭಾರತವನ್ನು ವಿಶ್ವದ ಪ್ರಮುಖ ರಾಷ್ಟ್ರವನ್ನಾಗಿ ರೂಪಿಸುವ ಸಂಕಲ್ಪದ ಕುರಿತು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತ.ರಾ.ವೆಂಕಟೇಶ್, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಾಗೇಶ್, ವಾಗಟ ರವಿಕುಮಾರ್, ನಗರ ಮಂಡಲ ಮಹಿಳಾ ಅಧ್ಯಕ್ಷೆ ಯಶೋಧ, ಬಿಜೆಪಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಫೋಟೋ: 8 ಹೆಚ್‌ಎಸ್‌ಕೆ 2

ಹೊಸಕೋಟೆ ತಾಲೂಕು ಕಚೇರಿ ಮುಂದೆ ತಾಲೂಕು ಬಿಜೆಪಿ ಘಟಕದ ವತಿಯಿಂದ ಬಿಜೆಪಿ ಸೇವಾ ಸಂಕಲ್ಪ ಅಭಿಯಾನದ ಪ್ರಯುಕ್ತ ಬೀದಿ ನಾಟಕದಲ್ಲಿ ನರೇಂದ್ರ ಮೋದಿಯವರ ಆಡಳಿತ, ಅಭಿವೃದ್ಧಿ ಕಾರ್ಯಗಳ ಜಾಗೃತಿ ಮೂಡಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೆಕ್ಕೆಜೋಳದ ಬೆಲೆ ಏರಿಕೆ; ರೈತರ ಕೈ ಖಾಲಿ
ದಕ್ಷಿಣ ಭಾರತದಲ್ಲಿ ಹಿಂದಿ ಭಾಷೆ ಪ್ರಚಾರಕ್ಕೆ ಗಾಂಧಿ ಕೊಡುಗೆ ಅಪಾರ