ಗ್ರಾಮಸ್ಥರು, ಜನರ ಮನವಿಗೆ ಪೂರಕವಾಗಿ ಅಭಿವೃದ್ಧಿ ಕೆಲಸ: ಕೆ.ಎಂ.ಉದಯ್

KannadaprabhaNewsNetwork |  
Published : Oct 03, 2025, 01:07 AM IST
2ಕೆಎಂಎನ್ ಡಿ25  | Kannada Prabha

ಸಾರಾಂಶ

ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಮುಖ್ಯ ಗುರಿ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿಯೂ ಗ್ರಾಮಗಳ ರಸ್ತೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಪಡಿಸಲಾಗುವುದು.

ಕನ್ನಡಪ್ರಭ ವಾರ್ತೆ ಕೆ.ಎಂ ದೊಡ್ಡಿ

ಮದ್ದೂರು ಕ್ಷೇತ್ರದಲ್ಲಿ ಗ್ರಾಮಸ್ಥರು, ಜನರ ಮನವಿಗೆ ಪೂರಕವಾಗಿ ವಿವಿಧ ಅಭಿವೃದ್ಧಿ ಕೆಲಸ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು

ಸಮೀಪದ ಕಳ್ಳಿಮೆಳ್ಳೆದೊಡ್ಡಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಸುಮಾರು 20 ಲಕ್ಷ ರು. ವೆಚ್ಚದಲ್ಲಿ ಗ್ರಾಮ ಪರಿಮಿತಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೆರಿಸಿ ಮಾತನಾಡಿ, ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಗ್ರಾಮ ಪರಿಮಿತಿ ರಸ್ತೆಗಳನ್ನು ಅಭಿವೃದ್ಧಿಪಡಿಸಿ ಗ್ರಾಮಸ್ಥರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.

ತಾಲೂಕಿನ ಹಲವು ಗ್ರಾಮಗಳಲ್ಲಿ ರಸ್ತೆಗಳು ದುರಸ್ಥಿಗೊಂಡಿದ್ದವು. ಹಲವು ಗ್ರಾಮಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರು ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸಾಕಷ್ಟು ಮನವಿ ಪತ್ರಗಳನ್ನು ಸಲ್ಲಿಸಿದ್ದರು. ಅವರ ಮನವಿಗೆ ಪೂರಕವಾಗಿ ಹಂತ ಹಂತವಾಗಿ ಪಟ್ಟಣ ಮತ್ತು ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಸೇರಿದಂತೆ ಕ್ಷೇತ್ರದಲ್ಲಿ ಸಾವಿರಾರು ಕೋಟಿ ರು. ವೆಚ್ಚದಲ್ಲಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದರು.

ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಮುಖ್ಯ ಗುರಿ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿಯೂ ಗ್ರಾಮಗಳ ರಸ್ತೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಪಡಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಕಳ್ಳಿಮೆಳ್ಳೆದೊಡ್ಡಿ ಗ್ರಾಮಸ್ಥರು ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ ಸಹಕರಿಸಿದ ಶಾಸಕರ ಕಾರ್ಯಕ್ಕೆ ಮುಕ್ತವಾಗಿ ಪ್ರಶಂಶಿಸಿ ಅಭಿನಂದಿಸಿದರು.

ಈ ವೇಳೆ ಲೋಕೋಪಯೋಗಿ ಇಲಾಖೆ ಎಇಇ ದೇವಾನಂದ್, ಎಇ ಹನುಮಂತು, ಗುತ್ತಿಗೆದಾರ ಮಹೇಶ್, ಗ್ರಾಮದ ಮುಖಂಡರಾದ ಕೆ.ಎಸ್.ಶಿವಲಿಂಗೇಗೌಡ, ಶರತ್, ಸಿದ್ಧರಾಮ, ರಾಮು, ಸ್ವಾಮಿ, ಮಠದದೊಡ್ಡಿ ವೀರೇಂದ್ರ, ಅಜ್ಜಹಳ್ಳಿ ಮನು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾ‍ಳೆ ತೇಜಸ್ವಿ ನೆನಪು ಕಾರ್ಯಕ್ರಮ

ಪಾಂಡವಪುರ: ತೇಜಸ್ವಿ ಬಳಗ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಮಕ್ಕಳ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಅ.4 ರಂದು ಪಟ್ಟಣದ ಕನ್ನಡ ಸಾಹಿತ್ಯ ಭವನದಲ್ಲಿ ತೇಜಸ್ವಿ ನೆನಪು ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೆಸರಾಂತ ಕವಿ, ನಾಟಕಕಾರ ಜಯಂತ್ ಕಾಯ್ಕಿಣಿ, ರಂಗಭೂಮಿ ನಿರ್ದೇಶಕ, ಚಿತ್ರನಟ ಮಂಡ್ಯ ರಮೇಶ್, ನೈಸರ್ಗಿಕ ಕೃಷಿಕ, ನಿವೃತ್ತ ಉಪನ್ಯಾಸಕ ಎಂ.ವಿ.ಕೃಷ್ಣ, ಬೆಂಗಳೂರು ಬಿಜಿಎಸ್ ಆಸ್ಪತ್ರೆ ತಜ್ಞ ವೈದ್ಯ ಡಾ.ಕೃಷ್ಣ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

PREV

Recommended Stories

ಸರ್ಕಾರಿ ನೌಕರರ ಸೊಸೈಟಿಗೆ 50.58 ಲಕ್ಷ ಲಾಭ
ಡಿಸಿಸಿ ಬ್ಯಾಂಕ್‌ಗೆ ಅಣ್ಣಾಸಾಹೇಬ್ ಜೊಲ್ಲೆ ಆಯ್ಕೆ ನಿಶ್ಚಿತ