ಕನ್ನಡಪ್ರಭ ವಾರ್ತೆ ಚಿಂತಾಮಣಿ
ನಗರದ ಮಾಳ್ಳಪಲ್ಲಿಯ ಅಂಜನಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ನವೆಂಬರ್ ೨೪ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಶಿಡ್ಲಘಟ್ಟಕ್ಕೆ ಬರುತ್ತಿದ್ದ ಅಂದು ನಮ್ಮ ಚಿಂತಾಮಣಿ ಕ್ಷೇತ್ರದಿಂದ ೨೫ ಸಾವಿರಕ್ಕೂ ಅಧಿಕ ಜನರು ಅ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅದಕ್ಕೆ ನಿಮ್ಮೆಲ್ಲರ ಸಹಕಾರ ಅಗತ್ಯವಿದೆಯೆಂದರು.
ಕ್ಷೇತ್ರದ ಅಭಿವೃದ್ಧಿಗೆ ಅದ್ಯತೆಪ್ರಜಾಪ್ರಭುತ್ವದ ಮೇಲೆ ಅಪಾರ ಗೌರವವಿದೆ. ಸೋಲು-ಗೆಲವು ಸಹಜವಾಗಿದ್ದು ಅದನ್ನು ನಾನು ಕಂಡಿದ್ದು, ನಾನು ಮತ್ತು ನಮ್ಮ ಕುಟುಂಬ ಯಾವಾಗಲೂ ಕ್ಷೇತ್ರದ ಅಭಿವೃದ್ಧಿಗೆ ಅದ್ಯತೆಯನ್ನು ನೀಡುತ್ತೇವೆ ಮತ್ತು ಅದರ ಕಲೆ, ಇಚ್ಛಾಶಕ್ತಿ ನಮ್ಮಲ್ಲಿದೆ. ಜನರಿಗೆ ಶಾಶತ್ವಗಾಗಿ ನೆಲೆಗೊಳ್ಳುವಂತಹ ದೂರದೃಷ್ಟಿಯನ್ನು ಇಟ್ಟುಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು. ಕ್ಷೇತ್ರದ ಯುವಕ ಯುವತಿಯರಿಗೆ ಜನತೆಗೆ ಉದ್ಯೋಗಾವಕಾಶಗಳು ಸಿಗುವಂತಾಗಬೇಕು, ಅದರ ಮೂಲಕ ಆರ್ಥಿಕ ಸಬಲರಾಗಬೇಕೆಂದು ನಮ್ಮ ಜವಾಬ್ದಾರಿ ಎಂದರು.
ಕಾನೂನು ಉಲ್ಲಂಘನೆ ಮಾಡಿಲ್ಲ
ಉಸ್ತುವಾರಿ ಸಚಿವನಾದ ತಾವು ಕ್ಷೇತ್ರದ ಅಭಿವೃದ್ಧಿಗಾಗಿ ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದೇನೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದು ಶಿಡ್ಲಘಟ್ಟದ ಹನುಮಂತಪುರ ಗೇಟ್ ಬಳಿ ನಡೆಯಲಿರುವ ಸಭೆಗೆ ಭಾಗವಹಿಸಿ ಚಿಂತಾಮಣಿ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಒಗ್ಗಟ್ಟನ್ನು ಪ್ರದರ್ಶಿಸಬೇಕೆಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ರಾಜಣ್ಣರ ಸಹಕಾರದಿಂದ ಡಿಸಿಸಿ ಬ್ಯಾಂಕ್‌ನ್ನು ಬೇರೆಡೆಗೆ ಸ್ಥಳಾಂತರ ಮಾಡಲು ಪ್ರಯತ್ನವನ್ನು ನಡೆಸಿದ್ದು ಆದರಂತೆ ಯುವಜನ ಸಬಲೀಕರಣದಿಂದ ೨ಕೋಟಿ ೮೦ ಲಕ್ಷ ಹಣ ಡಿಸಿಸಿ ಬ್ಯಾಂಕ್ ಸ್ಥಳಾಂತರಕ್ಕೆ ನೀಡಲಾಗಿದೆ. ಡಿಸಿಸಿ ಬ್ಯಾಂಕ್ ಇದ್ದ ಸ್ಥಳದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು. ಹಿಂದಿನವರು ಮಾಡದ ಅಭಿವೃದ್ಧಿ ಕೆಲಸಗಳನ್ನು ತಾವು ಮಾಡುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣವನ್ನು ೯ ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣ ಮಾಡಲಾಗುವುದು. ಅಲ್ಲದೆ ಮಸ್ತೇನಹಳ್ಳಿ ಕೈವಾರ ಪಟ್ಟಣ ಪಂಚಾಯತಿಯನ್ನಾಗಿಸಲಾಗಿದೆ ಎಂದು ಸಚಿವರು ವಿವರಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ ಪದಾಧಿಕಾರಿಗಳು, ಮುಖಂಡರುಗಳು, ನಗರಸಭಾ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.