ಬೇಡಿಕೆಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿ

KannadaprabhaNewsNetwork |  
Published : Sep 07, 2026, 03:30 AM IST
ಬೆಳಗಾವಿ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಸ್ತೆ ಮೂಲಸೌಕರ್ಯ ಅತ್ಯಂತ ಪ್ರಮುಖವಾಗಿದೆ. ರೈತರಿಗೆ ತಮ್ಮ ಜಮೀನುಗಳಿಗೆ ಸುಲಭವಾಗಿ ತೆರಳಲು ಉತ್ತಮ ರಸ್ತೆ ಸಂಪರ್ಕ ಅಗತ್ಯವಾಗಿದ್ದು, ಜನರ ಅಗತ್ಯತೆ ಮತ್ತು ಬೇಡಿಕೆಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಸ್ತೆ ಮೂಲಸೌಕರ್ಯ ಅತ್ಯಂತ ಪ್ರಮುಖವಾಗಿದೆ. ರೈತರಿಗೆ ತಮ್ಮ ಜಮೀನುಗಳಿಗೆ ಸುಲಭವಾಗಿ ತೆರಳಲು ಉತ್ತಮ ರಸ್ತೆ ಸಂಪರ್ಕ ಅಗತ್ಯವಾಗಿದ್ದು, ಜನರ ಅಗತ್ಯತೆ ಮತ್ತು ಬೇಡಿಕೆಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೊದಗಾ ಗ್ರಾಮದಲ್ಲಿ ಸುಮಾರು ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರೈತ ಸಂಪರ್ಕ ರಸ್ತೆ ಹಾಗೂ ಸ್ಮಶಾನಕ್ಕೆ ತೆರಳುವ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತ ಸಂಪರ್ಕ ರಸ್ತೆಗಳ ಅಭಿವೃದ್ಧಿಯಿಂದ ಕೃಷಿ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ. ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಹಾಗೂ ಜಮೀನುಗಳಿಗೆ ತೆರಳಲು ಅನುಕೂಲವಾಗಲಿದೆ. ಅದೇ ರೀತಿ ಸ್ಮಶಾನಕ್ಕೆ ತೆರಳುವ ರಸ್ತೆ ಅಭಿವೃದ್ಧಿಯಿಂದ ಗ್ರಾಮಸ್ಥರಿಗೆ ಅಗತ್ಯ ಸಂದರ್ಭಗಳಲ್ಲಿ ಸುಗಮ ಸಂಚಾರ ವ್ಯವಸ್ಥೆ ದೊರೆಯಲಿದೆ ಎಂದು ತಿಳಿಸಿದರು.ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗ್ರಾಮದ ಹಿರಿಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಗ್ರಾಮದ ಪ್ರಮುಖರು ಹಾಗೂ ಗ್ರಾಮಸ್ಥರು ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಲು ಮನವಿಗ್ರಾಮದ ಜನರ ಬಹುದಿನಗಳ ಬೇಡಿಕೆಯಾಗಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆತಿರುವುದರಿಂದ ಸ್ಥಳೀಯರಲ್ಲಿ ಸಂತಸ ವ್ಯಕ್ತವಾಗಿದೆ. ರೈತರು ತಮ್ಮ ಜಮೀನುಗಳಿಗೆ ತೆರಳಲು ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಸಾಮಗ್ರಿ ಮತ್ತು ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಅನುಕೂಲವಾಗುವಂತೆ ರೈತ ಸಂಪರ್ಕ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದರ ಜೊತೆಗೆ ಸ್ಮಶಾನಕ್ಕೆ ತೆರಳುವ ರಸ್ತೆಯೂ ಅಭಿವೃದ್ಧಿಯಾಗಲಿದ್ದು, ಗ್ರಾಮಸ್ಥರಿಗೆ ಸುಗಮ ಸಂಚಾರದ ವ್ಯವಸ್ಥೆ ಕಲ್ಪಿಸಿದಂತಾಗಲಿದೆ. ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಬೇಕೆಂದು ಗ್ರಾಮಸ್ಥರು ಒಗ್ಗಟ್ಟಿನಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮನವಿ ಮಾಡಿದರು.

ಜನರ ಮೂಲಭೂತ ಅಗತ್ಯಗಳನ್ನು ಈಡೇರಿಸುವುದು ಅಭಿವೃದ್ಧಿಯ ಪ್ರಮುಖ ಭಾಗವಾಗಿದ್ದು, ಗ್ರಾಮೀಣ ಭಾಗದಲ್ಲಿ ರಸ್ತೆ, ಕುಡಿಯುವ ನೀರು, ಚರಂಡಿ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿಯೂ ಮೊದಗಾ ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು.-ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಾದಗಿರಿ ಜಿಲ್ಲೆಗೆ ಅನ್ಯಾಯ: ಸರ್ಕಾರದ ವಿರುದ್ಧ ಮಾಗನೂರ ಕಿಡಿ
ಮನಃಶುದ್ಧಿಗೆ ಲಿಂಗಪೂಜೆ ಅತ್ಯವಶ್ಯ: ಡಾ.ಗುರುಮಹಾಂತ ಶ್ರೀ