ದೇವಿರಮ್ಮ ಜಾತ್ರೆ: ಎರಡು ದಿನ ವಿಶೇಷ ಬಸ್ ವ್ಯವಸ್ಥೆ

KannadaprabhaNewsNetwork |  
Published : Nov 05, 2026, 01:15 AM IST
ಡಿ.ಸಿ. ಪೋಟೋ  | Kannada Prabha

ಸಾರಾಂಶ

ಚಿಕ್ಕಮಗಳೂರುಚಿಕ್ಕಮಗಳೂರು ತಾಲೂಕಿನ ಬಿಂಡಿಗ ಮಲ್ಲೇನಹಳ್ಳಿ ಆದಿಶಕ್ತ್ಯಾತ್ಮಕ ಶ್ರೀ ದೇವಿರಮ್ಮನ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ನ. 7 ಮತ್ತು 8ರಂದು ಭಕ್ತರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿದ್ದು, ಜಾತ್ರೆ ಪ್ರದೇಶದ ಸುತ್ತಮುತ್ತ 10 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮತ್ತು ಸಾಗಾಣಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಆದೇಶ । ಮದ್ಯ ಮಾರಾಟ ನಿಷೇಧ । ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಚಿಕ್ಕಮಗಳೂರು ತಾಲೂಕಿನ ಬಿಂಡಿಗ ಮಲ್ಲೇನಹಳ್ಳಿ ಆದಿಶಕ್ತ್ಯಾತ್ಮಕ ಶ್ರೀ ದೇವಿರಮ್ಮನ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ನ. 7 ಮತ್ತು 8ರಂದು ಭಕ್ತರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿದ್ದು, ಜಾತ್ರೆ ಪ್ರದೇಶದ ಸುತ್ತಮುತ್ತ 10 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮತ್ತು ಸಾಗಾಣಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಆದೇಶ ಹೊರಡಿಸಿದ್ದಾರೆ.ಹೆಚ್ಚುವರಿ ಬಸ್‌ಗಳ ವ್ಯವಸ್ಥೆ: ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಚಿಕ್ಕಮಗಳೂರು ನಗರ ಬಸ್ ನಿಲ್ದಾಣದಿಂದ ಕಡೂರು, ಬೀರೂರು, ತರೀಕೆರೆ, ಹಾಸನ, ಬೇಲೂರು, ಮೂಡಿಗೆರೆ, ಆಲ್ದೂರು ಹಾಗೂ ಶೃಂಗೇರಿ ಮಾರ್ಗಗಳಿಗೆ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಚಿಕ್ಕಮಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.ಭಕ್ತರು ತಮ್ಮ ಸ್ವಂತ ವಾಹನಗಳಲ್ಲಿ ಆಗಮಿಸುವುದನ್ನು ಕಡಿಮೆ ಮಾಡಿ, ನಿಗಮದ ಬಸ್‌ಗಳು ಸೇರಿದಂತೆ ಸಾಮೂಹಿಕ ಸಾರಿಗೆ ವ್ಯವಸ್ಥೆ ಬಳಸಬೇಕು. ಇದರಿಂದ ಜಾತ್ರಾ ಪ್ರದೇಶದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಸಹಕಾರಿ. ಸಾರ್ವಜನಿಕರು ವಿಶೇಷ ಬಸ್ ವ್ಯವಸ್ಥೆಯ ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.ಮದ್ಯ ಮಾರಾಟಕ್ಕೆ ನಿರ್ಬಂಧ: ದೇವಿರಮ್ಮನ ದರ್ಶನಕ್ಕೆ ನ. 7ರಂದು ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ ಹಾಗೂ ನ. 8ರಂದು ಬೆಳಿಗ್ಗೆ 6ರಿಂದ ಮಧ್ಯಾಹ್ನ 3ರವರೆಗಿನ ಅವಧಿಯಲ್ಲಿ ಬೆಟ್ಟದ ಮೇಲೆ ಅಭಿಷೇಕ ಹಾಗೂ ವಿವಿಧ ಪೂಜಾ ವಿಧಿವಿಧಾನ ನಡೆಯಲಿದೆ. ಭಕ್ತರು ವಿವಿಧ ಮಾರ್ಗಗಳ ಮೂಲಕ ಬೆಟ್ಟವೇರಿ ದೇವಿ ದರ್ಶನ ಪಡೆಯಲಿದ್ದಾರೆ.ದೇವಿರಮ್ಮನ ಬೆಟ್ಟ ಎತ್ತರ ಮತ್ತು ಕಡಿದಾದ ಪ್ರದೇಶವಾಗಿರುವುದರಿಂದ ಮದ್ಯಪಾನ ಮಾಡಿ ಬೆಟ್ಟ ಹತ್ತುವ ಸಂದರ್ಭದಲ್ಲಿ ಪ್ರಾಣಾಪಾಯ ಸಂಭವಿಸುವ ಸಾಧ್ಯತೆಯಿದೆ. ಅಲ್ಲದೆ, ಇತರ ಭಕ್ತರು, ಮಹಿಳೆಯರು ಮತ್ತು ಮಕ್ಕಳಿಗೆ ತೊಂದರೆಯಾಗುವ ಹಾಗೂ ಅಸಭ್ಯ ವರ್ತನೆಯಿಂದ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಹಿನ್ನೆಲೆ ಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಲಾಗಿದೆ.ನ. 7ರ ಬೆಳಿಗ್ಗೆ 6ರಿಂದ ನ. 8ರ ರಾತ್ರಿ 11ರವರೆಗೆ ಮಲ್ಲೇನಹಳ್ಳಿ, ಹೊಸಪೇಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯ ಎಲ್ಲ ನಮೂನೆ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಕೈಮರದಲ್ಲಿರುವ ಮದ್ಯದ ಅಂಗಡಿಗಳಿಗೂ ಈ ನಿರ್ಬಂಧ ಅನ್ವಯಿಸಲಿದೆ.ಈ ಅವಧಿಯಲ್ಲಿ ಮದ್ಯ, ಬಿಯರ್ ಸೇರಿದಂತೆ ಎಲ್ಲ ಅಬಕಾರಿ ಪದಾರ್ಥಗಳ ಮಾರಾಟ, ಸಾಗಾಣಿಕೆ, ಶೇಖರಣೆ, ತಯಾರಿಕೆ ಹಾಗೂ ಸರಬರಾಜನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗಳನ್ನು ಲವ್‌ ಮಾಡಿದ್ದಕ್ಕೆ ಕೆಲಸಗಾರನ ಹತ್ಯೆ
ಡೇಟಿಂಗ್‌ ಆ್ಯಪಲ್ಲಿ ಪರಿಚಯವಾದಯುವಕನ ದರೋಡೆ: ನಾಲ್ವರ ಸೆರೆ