ಆದಿಚುಂಚನಗಿರಿಯಲ್ಲಿ ನಡೆದ ಶರನ್ನವರಾತ್ರಿಯಲ್ಲಿ ಪಾಲ್ಗೊಂಡ ಭಕ್ತರು

KannadaprabhaNewsNetwork |  
Published : Oct 10, 2024, 02:22 AM IST
9ಕೆಎಂಎನ್ ಡಿ18 | Kannada Prabha

ಸಾರಾಂಶ

ನಮ್ಮ ಪೂರ್ವಜರು ಈ ಹಿಂದಿನಿಂದಲೂ ನಡೆಸಿಕೊಂಡು ಬಂದಿರುವ ಧಾರ್ಮಿಕ ಆಚರಣೆಗಳನ್ನು ಶರನ್ನವರಾತ್ರಿಯ 9 ದಿನಗಳೂ ಆಚರಿಸಿ ತಾಯಿ ಶ್ರೀ ಚಾಮುಂಡೇಶ್ವರಿ ದೇವಿ ಹಾಗೂ ಕಾಲ ಭೈರವನಿಗೆ ವಿಶೇಷ ಪೂಜೆ ಸಲ್ಲಿಸಿ, ದಸರಾ ದರ್ಬಾರ್ ನಡೆಸಿ ಸರ್ವರಿಗೂ ಒಳಿತಾಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ.

ನಾಗಮಂಗಲ: ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಡೆಯುತ್ತಿರುವ ಶರನ್ನವರಾತ್ರಿಯಲ್ಲಿ ತಾಲೂಕಿನ ಭಕ್ತಾದಿಗಳು ಭಾಗವಹಿಸಿ ವಿಶೇಷ ಪೂಜೆ, ಗುರುವಂದನೆ ಸಲ್ಲಿಸಿದರು. ತಾಲೂಕಿನಿಂದ ಹೇಮಗಿರಿ ಶಾಖಾ ಮಠದ ಗೌರವ ಕಾರ್ಯದರ್ಶಿ ಡಾ.ಜೆ.ಎನ್. ರಾಮಕೃಷ್ಣಗೌಡರ ನೇತೃತ್ವದಲ್ಲಿ ತಾಲೂಕಿನ ಭಕ್ತರು ಭಾಗವಹಿಸಿ, ರತ್ನಖಚಿತ ಚಿನ್ನದ ಕಿರೀಟ ಧರಿಸಿ ಸಾಂಪ್ರದಾಯಿಕ ಪೋಷಾಕಿನಲ್ಲಿ ಕಂಗೊಳಿಸಿ ಭಕ್ತರಿಗೆ ದರ್ಶನ ನೀಡಿದ ಜಗದ್ಗುರು ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿಗಳು, ಉರಿಗದ್ದುಗೆಯ ಮೇಲೆ ಧ್ಯಾನಾಸಕ್ತರಾಗಿ ಕುಳಿತು ಭಕ್ತರಿಗೆ ದರ್ಶನ ನೀಡಿ ಲೋಕ ಕಲ್ಯಾಣಕ್ಕೆ ಪ್ರಾರ್ಥನೆ ನಡೆಸಿದರು.

ನಮ್ಮ ಪೂರ್ವಜರು ಈ ಹಿಂದಿನಿಂದಲೂ ನಡೆಸಿಕೊಂಡು ಬಂದಿರುವ ಧಾರ್ಮಿಕ ಆಚರಣೆಗಳನ್ನು ಶರನ್ನವರಾತ್ರಿಯ 9 ದಿನಗಳೂ ಆಚರಿಸಿ ತಾಯಿ ಶ್ರೀ ಚಾಮುಂಡೇಶ್ವರಿ ದೇವಿ ಹಾಗೂ ಕಾಲ ಭೈರವನಿಗೆ ವಿಶೇಷ ಪೂಜೆ ಸಲ್ಲಿಸಿ, ದಸರಾ ದರ್ಬಾರ್ ನಡೆಸಿ ಸರ್ವರಿಗೂ ಒಳಿತಾಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದು ಶ್ರೀಗಳು ಹೇಳಿದರು.

ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್, ರಾಜ್ಯ ಆರ್‌ಟಿಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಬೆಡದಹಳ್ಳಿ ಶ್ರೀ ಪಂಚಭೂತೇಶ್ವರ ಮಠದ ಪೀಠಾಧಿಪತಿ ಶ್ರೀ.ರುದ್ರಮುನಿ ಸ್ವಾಮೀಜಿ, ಕೋರಮಂಡಲ್ ಸಕ್ಕರೆ ಕಾರ್ಖಾನೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿ.ನಾಗೇಶ್, ಕಾರ್ಯಪಾಲಕ ಇಂಜಿನಿಯರ್ ಪವಿತ್ರ, ಮುಖಂಡರಾದ ನಾಟನಹಳ್ಳಿ ಗಂಗಾಧರ, ಕಸಾಪ ಮಾಜಿ ಅಧ್ಯಕ್ಷ ಹರಿಚರಣ್ ತಿಲಕ್, ರೈತ ಸಂಘದ ಮಾಜಿ ಅಧ್ಯಕ್ಷ ಮರುವನಹಳ್ಳಿ ಶಂಕರ್, ಸಾಹಿತಿ ಬಲ್ಲೇನಹಳ್ಳಿ ಮಂಜುನಾಥ್, ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಬೇಲದಕೆರೆ ಚನ್ನೇಗೌಡ, ಉದ್ಯಮಿ ಪಾಂಡವಪುರ ತ್ಯಾಗರಾಜು, ಆದಿಚುಂಚನಗಿರಿ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಸೇರಿದಂತೆ ಸಾವಿರಾರು ಭಕ್ತಾದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ