ಕನ್ನಡಪ್ರಭ ವಾರ್ತೆ ಹನೂರು
ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆ ಹಾಗೂ ಎಣ್ಣೆ ಮಜ್ಜನ ಸೇವೆ ಪೂಜಾ ಕಾರ್ಯಕ್ರಮಕ್ಕೆ ಸಾಲೂರು ಬೃಹನ್ ಮಠದ ಪೀಠಾಧಿಪತಿಗಳಾದ ಶಾಂತ ಮಲ್ಲಿಕಾರ್ಜುನ ಸ್ವಾಮಿ ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನ ವರ್ಷದ ಮೊದಲ ಅಮಾವಾಸ್ಯೆ ಪೂಜೆಗೆ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಭಕ್ತಾದಿಗಳು ಮಾದೇಶ್ವರನ ದರ್ಶನ ಪಡೆದು ಹರಕೆ, ಕಾಣಿಕೆಗಳನ್ನು ಸಲ್ಲಿಸಿ ಇಷ್ಟಾರ್ಥ ಸಿದ್ಧಿಸುವಂತೆ ನಿವೇದನೆ ಮಾಡಿಕೊಂಡರು.ಉತ್ಸವಾದಿಗಳು:ಶ್ರೀ ಕ್ಷೇತ್ರದಲ್ಲಿ ಮಹದೇಶ್ವರ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ, ಪೂಜಾ ಕಾರ್ಯಕ್ರಮಗಳು, ಶನಿವಾರ ಬೆಳಗ್ಗೆ 8 ಗಂಟೆಗೆ ಬೆಳ್ಳಿ ರಥೋತ್ಸವ ಹಾಗೂ ಹುಲಿವಾಹನ ಉತ್ಸವ, ಮಾದೇಶ್ವರ ಉತ್ಸವ, ಭಕ್ತಾದಿಗಳಿಂದ ಉರುಳು ಸೇವೆ ಹಾಗೂ ಪಂಜಿನ ಸೇವೆ ಧೂಪದ ಸೇವೆ ಸಂಭ್ರಮ ಸಡಗರದೊಂದಿಗೆ ಜರುಗಿತು.
ಶ್ರೀಕ್ಷೇತ್ರದ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ವ್ಯವಸ್ಥೆ ಹಾಗೂ ವಿಶೇಷ ದಾಸೋಹ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿತ್ತು, ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳು ಪ್ಲಾಸ್ಟಿಕ್ ತ್ಯಜಿಸಿ ಶ್ರೀ ಕ್ಷೇತ್ರವನ್ನು ಉಳಿಸಿ ಸ್ವಚ್ಛತೆಯನ್ನು ಕಾಪಾಡುವಂತೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ ರಘು ಭಕ್ತಾದಿಗಳಲ್ಲಿ ಮನವಿ ಮಾಡಿಕೊಂಡರು .