ರಾಮನಾಮ ಸ್ಮರಣೆಮಾಡಿದ ಭಕ್ತರು

KannadaprabhaNewsNetwork |  
Published : Jan 23, 2024, 01:46 AM IST
ಕುರುಗೋಡಿನ ಪ್ರಮುಖ ವೃತ್ತಗಳು ಕೇಸರಿಮಯವಾಗಿದ್ದವು. | Kannada Prabha

ಸಾರಾಂಶ

ಶ್ರೀರಾಮ ಭಕ್ತರು ಜ್ಯೋತಿಯಾತ್ರೆ ಮೆರವಣಿಗೆ ನಡೆಸಿದರು. ಕಂಪ್ಲಿ ರಸ್ತೆಯಿಂದ ಪ್ರಾರಂಭಗೊಂಡ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಕುರುಗೋಡು: ಅಯೋಧ್ಯೆಯ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸೋಮವಾರ ತಾಲೂಕಿನ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ಪಟ್ಟಣದ ದೊಡ್ಡಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸೇರಿದ್ದ ಶ್ರೀರಾಮ ಭಕ್ತರು ಜೈ ಶ್ರೀರಾಮ ಘೋಷಣೆಗಳನ್ನು ಕೂಗಿ ರಾಮನಾಮ ಸ್ಮರಣೆ ಮಾಡಿ ಭಕ್ತಿ ಸಮರ್ಪಿಸಿದರು.

ಶ್ರೀರಾಮ ಭಕ್ತರು ಜ್ಯೋತಿಯಾತ್ರೆ ಮೆರವಣಿಗೆ ನಡೆಸಿದರು. ಕಂಪ್ಲಿ ರಸ್ತೆಯಿಂದ ಪ್ರಾರಂಭಗೊಂಡ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮುಖ್ಯವೃತ್ತದ ಮೂಲಕ ದೊಡ್ಡಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ತಲುಪಿತು. ಈ ಸಂದರ್ಭದಲ್ಲಿ ವೀರಾಂಜನೇಯ ಭಕ್ತರ ಮಂಡಳಿ ಸದಸ್ಯರು ಇದ್ದರು.ಪಟ್ಟಣದ ಮುಖ್ಯವೃತ್ತ ಮತ್ತು ಪ್ರಮುಖ ಬೀದಿಗಳಲ್ಲಿ ಕೇಸರಿ ಬಾವುಟಗಳನ್ನು ಬಳಸಿ ಅಲಂಕರಿಸಲಾಗಿತ್ತು. ಬ್ಯಾನರ್, ಫ್ಲೆಕ್ಸ್‌ಗಳು ರಾರಾಜಿಸಿದವು. ರೈತ ಸಮುದಾಯ ಭವನದಲ್ಲಿ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!