ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು 109 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯವೆಂದು ಮರು ನಾಮಕರಣ ಮಾಡಿದರು. ಬಡವರ ಹಾಗೂ ದುರ್ಬಲರ ಬಗ್ಗೆ ಅಪಾರ ಕಾಳಜಿ ಹಾಗೂ ಕಳಕಳಿ ಹೊಂದಿದ್ದರು ಎಂದು ಹೇಳಿದರು.ವಿದ್ಯಾರ್ಥಿ ನಿಲಯಗಳ ಆರಂಭ, ಭಾಗ್ಯ ಜ್ಯೋತಿ, ಹಿಂದುಳಿದ ವರ್ಗಗಳಿಗೆ ಭೂಮಿ ಹಂಚಿಕೆ ಹೀಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ಮತ್ತು ಸುಧಾರಣೆಗೆ ಶ್ರಮಿಸಿದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಬೇಕು ಎಂಬುದು ಡಿ.ದೇವರಾಜ ಅರಸು ಬದ್ಧತೆಯಾಗಿತ್ತು. ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೃಷಿಕರು, ಬಡವರು, ನಿರ್ಗತಿಕರು, ಇತರರು ಓಡಾಡುವಂತೆ ಮಾಡಿದರು. ಸಾಲ ಮನ್ನಾ ಯೋಜನೆ, ಜೀತ ಪದ್ಧತಿ ನಿರ್ಮೂಲನೆ, ಮಲ ಹೊರುವ ಪದ್ಧತಿ ನಿಷೇಧ, ವೃದ್ಧಾಪ್ಯ ವೇತನ ಯೋಜನೆ ಜಾರಿ ಹೀಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದರು ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಡಿ.ದೇವರಾಜ ಅರಸು ಅವರು ಮೌನಕ್ರಾಂತಿಯ ಹರಿಕಾರ ಎಂದರೆ ತಪ್ಪಾಗಲಾರದು ಎಂದು ನುಡಿದರು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಚಿತ್ರಕಲೆ, ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು. ಉತ್ತಮ ನೌಕರರನ್ನು ಸನ್ಮಾನಿಸಲಾಯಿತು.
ಪ್ರಮುಖರಾದ ಮೇದಪ್ಪ, ಕೆ.ಟಿ.ಬೇಬಿ ಮ್ಯಾಥ್ಯೂ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಪೌರಾಯುಕ್ತ ವಿಜಯ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕಿ ಮಹಾದೇವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕೃಷ್ಣಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಶಿವಶಂಕರ ಮತ್ತಿತರರು ಇದ್ದರು.