ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಜಿಪಂ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ಕಾರ್ಯಕ್ರಮದ ಪೂರ್ವಸಿದ್ದತೆ ಮತ್ತು ಆರೋಗ್ಯ ಇಲಾಖೆಯ ಇತರೆ ಕಾರ್ಯಕ್ರಮಗಳ ಕುರಿತಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳಲ್ಲಿ ಜಂತು ಹುಳು ನಿವಾರಣೆ ಮಾಡುವುದು ಅತಿ ಅಗತ್ಯ. ಅದರಿಂದ ಮಕ್ಕಳಲ್ಲಿನ ರಕ್ತಹೀನತೆ, ಏಕಾಗ್ರತೆ ಕೊರತೆಯನ್ನು ನೀಗಿಸಿ, ಕಲಿಕಾ ಸಾಮರ್ಥ್ಯ ಹೆಚ್ಚಿಸಬಹುದು ಎಂದು ಹೇಳಿದರು.
ಅಂಗನವಾಡಿ, ಶಾಲಾ-ಕಾಲೇಜಿನಲ್ಲಿ ಹಾಜರಾತಿ ಸುಧಾರಿಸಬಹುದು. ಕೆಲಸದ ಸಾಮರ್ಥ್ಯ ಹಾಗೂ ಜೀವನೋಪಾಯದ ಅವಕಾಶವನ್ನು ವೃದ್ಧಿಸುತ್ತದೆ. ಆದ್ದರಿಂದ ಡಿ.9 ರಂದು ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನದದಂದು ಅಂಗನವಾಡಿ, ಶಾಲೆಗಳು, ಪಿಯು, ಐಟಿಐ, ಟೆಕ್ನಿಕಲ್ ಕೋರ್ಸ್, ನರ್ಸಿಂಗ್ ಕಾಲೇಜು, ಪ್ರಥಮ ಪದವಿ, ಮೆಡಿಕಲ್ ಕಾಲೇಜು ಮತ್ತು ಆಯುರ್ವೇದಿಕ್ ಕಾಲೇಜುಗಳಲ್ಲಿ ಉಚಿತವಾಗಿ ಜಂತುಹುಳು ನಿವಾರಣಾ ಮಾತ್ರೆಯಾದ ಆಲ್ಬೆಂಡಜೋಲ್‌ನ್ನು ಉಚಿತವಾಗಿ ಮಕ್ಕಳಿಗೆ ನೀಡಲಾಗುವುದು ಎಂದು ತಿಳಿಸಿದರು.ಡಿಡಿಪಿಐ, ಎಲ್ಲ ತಾಲೂಕುಗಳ ಬಿಇಒ, ಆರೋಗ್ಯ ಅಧಿಕಾರಿಗಳು, ಸಿಡಿಪಿಒ, ಅಂಗನವಾಡಿ ಮೇಲ್ವಿಚಾರಕರು ಸಮನ್ವಯದೊಂದಿಗೆ ಎಲ್ಲ ಅಂಗನವಾಡಿ, ಶಾಲೆ, ಕಾಲೇಜುಗಳಲ್ಲಿ ಮಕ್ಕಳಿಗೆ ಮಾತ್ರೆಗಳನ್ನು ನೀಡಬೇಕು. ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು ಪೋಷಕರಿಗೆ ಮೊದಲೇ ಮಾತ್ರೆ ನೀಡುವ ಬಗ್ಗೆ ಮಕ್ಕಳ ಮೂಲಕ ತಿಳಿಸಬೇಕು. ಆರೋಗ್ಯ ಇಲಾಖೆ ಸೂಚನೆಯಂತೆಯೇ ಮಾತ್ರೆಗಳನ್ನು ಮಕ್ಕಳಿಗೆ ತಮ್ಮ ಸಮ್ಮುಖದಲ್ಲೇ ನೀಡಬೇಕು ಎಂದು ಸೂಚಿಸಿದರು.
ಆರ್‌ಸಿಎಚ್ ಅಧಿಕಾರಿ ಡಾ.ಓ.ಮಲ್ಲಪ್ಪ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 4,70,316 ಮಕ್ಕಳು ನೋಂದಣಿಯಾಗಿದ್ದು, ಡಿ.9 ರಂದು ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರ, ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಆಶಾ ಕಾರ್ಯಕರ್ತೆಯರು ಮನೆ ಭೇಟಿ ನೀಡುವ ಮೂಲಕ ಮಾತ್ರೆ ನೀಡಲಾಗುವುದು. ಅಂದು ಬಿಟ್ಟು ಹೋದ ಮಕ್ಕಳಿಗೆ ಡಿ.16 ರಂದು ಮಾಪ್-ಅಪ್-ರೌಂಡ್‌ನಲ್ಲಿ ಮಾತ್ರೆ ನೀಡಿ ಶೇ.100 ಗುರಿ ಸಾಧನೆ ಮಾಡಲಾಗುವುದು. 1 ವರ್ಷದಿಂದ 2 ವರ್ಷದೊಳಗಿನ ಮಕ್ಕಳಿಗೆ ಅರ್ಧ ಮಾತ್ರೆ(ಪುಡಿ ಮಾಡಿ) ಮತ್ತು 2 ರಿಂದ 19 ವರ್ಷದೊಳಗಿನ ಮಕ್ಕಳಿಗೆ 1 ಮಾತ್ರೆಯನ್ನು ಜಗಿದು ನುಂಗಲು ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಡಿಎಚ್‌ಒ ಡಾ.ನಟರಾಜ್, ವಿವಿಧ ಕಾರ್ಯಕ್ರಮ ಅನುಷ್ಟಾನಾಧಿಕಾರಿಗಳು, ಟಿಎಚ್‌ಒಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ಡಿಡಿಪಿಯು ನಾಗರಾಜ್ ಇತರೆ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.