ಮಹಿಳೆಯರ ಸಾಧನೆಗೆ ಧಗ್ರಾಯೋ ಉತ್ತಮ ಮಾರ್ಗದರ್ಶನ

KannadaprabhaNewsNetwork |  
Published : Dec 19, 2025, 02:15 AM IST
55 | Kannada Prabha

ಸಾರಾಂಶ

ಮಹಿಳೆಯರ ಉನ್ನತೀಕರಣಕ್ಕೆ ಹತ್ತು ಹಲವು ಸೌಲಭ್ಯವನ್ನು ಒದಗಿಸಿದ್ದು, ಇದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವ ಮೂಲಕ ಪ್ರತಿಯೊಬ್ಬರೂ ಶಿಕ್ಷಣ ಕಲಿತು ಸಮಾಜದ ಮುಖ್ಯ ವಾಹಿನಿಗೆ ಬಂದು ತಮ್ಮಲ್ಲಿರುವ ಅಜ್ಞಾನವನ್ನು ತೊಡೆದುಹಾಕಿ ಸುಜ್ಞಾನದ ಕಡೆಗೆ ಮುಖ ಮಾಡಬೇಕು.

ಕನ್ನಡಪ್ರಭ ವಾರ್ತೆ ಸಾಲಿಗ್ರಾಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುವ ಜೊತೆಗೆ ಹಲವಾರು ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಲು ಹತ್ತು ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿದೆ ಎಂದು ಸಂಸ್ಥೆಯ ಜಿಲ್ಲಾ ನಿರ್ದೇಶಕಿ ಮಮತಾರಾವ್ ಹೇಳಿದರು.

ಪಟ್ಟಣದ ಬಾಹುಬಲಿ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ಉನ್ನತ ಸಾಧನೆ ಮಾಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರುತ್ತಿರುವುದು ಸಂತಸದ ವಿಚಾರವಾಗಿದ್ದು, ಮಹಿಳೆಯರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಕಾನೂನುಗಳನ್ನು ಸರಿಯಾದ ರೀತಿಯಲ್ಲಿಬಳಕೆ ಮಾಡಿಕೊಂಡಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮಹಿಳೆಯರ ಸಬಲೀಕರಣಕ್ಕೆ ಹತ್ತು ಹಲವು ಸೌಲಭ್ಯಗಳನ್ನು ನೀಡುವ ಜತೆಗೆ ಮಹಿಳಾ ಸದಸ್ಯರು ಸ್ವ-ಉದ್ಯೋಗಗಳನ್ನು ಸ್ಪಾಪಿಸಲು, ಗುಂಪು ಸಂಘಗಳಿಗೆ ಹಾಗೂ ಮಕ್ಕಳ ಶಿಕ್ಷಣಕ್ಕೆ ಯಾವುದೇ ಜಾಮೀನು ಇಲ್ಲದೆ ಬ್ಯಾಂಕ್‌ಗಳಲ್ಲಿ ಮಹಿಳೆಯರು ಸಾಲ ಸೌಲಭ್ಯಗಳನ್ನು ಪಡೆಯಲು ಸಂಸ್ಥೆಯು ಸುಲಭ ವ್ಯವಸ್ಥೆಯನ್ನು ಸ್ಟೇಟ್ ಬ್ಯಾಂಕ್ ಮೂಲಕ ಅನುಕೂಲ ಕಲ್ಪಿಸಿದೆ. ಅಲ್ಲದೆ ಮಹಿಳೆಯರ ಉನ್ನತೀಕರಣಕ್ಕೆ ಹತ್ತು ಹಲವು ಸೌಲಭ್ಯವನ್ನು ಒದಗಿಸಿದ್ದು, ಇದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವ ಮೂಲಕ ಪ್ರತಿಯೊಬ್ಬರೂ ಶಿಕ್ಷಣ ಕಲಿತು ಸಮಾಜದ ಮುಖ್ಯ ವಾಹಿನಿಗೆ ಬಂದು ತಮ್ಮಲ್ಲಿರುವ ಅಜ್ಞಾನವನ್ನು ತೊಡೆದುಹಾಕಿ ಸುಜ್ಞಾನದ ಕಡೆಗೆ ಮುಖ ಮಾಡಬೇಕು ಸಲಹೆ ನೀಡಿದರು.

ನಂತರ ವೈದ್ಯೆ ಸೌಜನ್ಯ ಮೋಹನ್ ಮಾತನಾಡಿ. ಮಹಿಳೆಯರಲ್ಲಿ ಮೊದಲು ಶಿಕ್ಷಣ ಹಾಗೂ ಆರೋಗ್ಯದ ಬಗ್ಗೆ ಹೆಚ್ಚು ಅರಿವಿದ್ದರೆ ಮಾತ್ರ ಸದೃಢ ಆರೋಗ್ಯಕರ ಸ್ವಸ್ಥ ಸಮಾಜ ನಿರ್ಮಿಸ ಬಹುದು ಹಾಗಾಗಿ ಮಹಿಳೆಯರು ಇಂದಿನ ಅವಸರದ ಧಾವಂತದಲ್ಲಿ ಆಹಾರ ಪದ್ಧತಿ, ಜೀವನ ಶೈಲಿಯ ಬದಲಾವಣೆಯಿಂದಾಗಿ ಥೈರಾಯ್ಡ್ ಹಾರ್ಮೋನ್ಸಮಸ್ಯೆ ಹೆಚ್ಚಾಗುತ್ತಿದ್ದು, ಹದಿಹರೆಯದ ವಯಸ್ಸಿನಲ್ಲಿ ಥೈರಾಯ್ಡ್ ಗ್ರಂಥಿ, ಋತುಚಕ್ರ, ಕಿಡ್ನಿ ಸಮಸ್ಯೆ ಮಹಿಳೆಯರಲ್ಲಿ ಅತೀ ಹೆಚ್ಚು ಕಂಡು ಬರುತ್ತಿರುವ ಗರ್ಭಕೋಶ, ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡಿದರಲ್ಲದೆ. ಗರ್ಭಕೋಶದ ಸಮಸ್ಯೆ ಬಗ್ಗೆ ಗಮನ ಹರಿಸಿ ಸೂಕ್ತ ಚಿಕಿತ್ಸೆ ಪಡೆಯುವ ಮೂಲಕ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಹೇಳಿದರು.

ಉಷಾ ಸುರೇಶ್, ತಾಲೂಕು ಯೋಜನಾಧಿಕಾರಿ ಉಮೇಶ್ ಪೂಜಾರಿ, ಜನಜಾಗೃತಿ ವೇದಿಕೆ ಸದಸ್ಯರಾದ ಮಧುಚಂದ್ರ, ಬಾಲಮನೋಹರ್, ಜ್ಞಾನವಿಕಾಸ ಸಮಾನ್ವಯಧಿಕಾರಿ ಸುಜಾತ ಸೇರಿದಂತೆ ಸಂಘದ ಪ್ರತಿನಿಧಿಗಳು ಹಾಗೂ ಸದಸ್ಯೆಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು