ಧರ್ಮಸ್ಥಳ: ಪುರಾಣ ವಾಚನ- ಪ್ರವಚನ ಕಾರ್ಯಕ್ರಮ ಸಂಪನ್ನ

KannadaprabhaNewsNetwork |  
Published : Sep 18, 2024, 01:49 AM IST
ಪುರಾಣ ವಾಚನ | Kannada Prabha

ಸಾರಾಂಶ

ಎರಡು ತಿಂಗಳು ಪ್ರತಿದಿನ ಸಂಜೆ ಗಂಟೆ ೬ ರಿಂದ ರಾತ್ರಿ ೮ರ ವರೆಗೆ ನಡೆದ ಕಾರ್ಯಕ್ರಮದಲ್ಲಿ ಊರಿನ ನಾಗರಿಕರು ಹಾಗೂ ಕ್ಷೇತ್ರಕ್ಕೆ ಬಂದ ಭಕ್ತಾದಿಗಳು ಕೂಡಾ ಕಾರ್ಯಕ್ರಮದ ಸೊಗಡನ್ನು ಆಸ್ವಾದಿಸಿದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಎರಡು ತಿಂಗಳ ಕಾಲ ನಡೆದ ಪುರಾಣ ವಾಚನ- ಪ್ರವಚನ ಕಾರ್ಯಕ್ರಮ ಸೋಮವಾರ ಸಂಪನ್ನಗೊಂಡಿತು.

ಎರಡು ತಿಂಗಳು ಪ್ರತಿದಿನ ಸಂಜೆ ಗಂಟೆ ೬ ರಿಂದ ರಾತ್ರಿ ೮ರ ವರೆಗೆ ನಡೆದ ಕಾರ್ಯಕ್ರಮದಲ್ಲಿ ಊರಿನ ನಾಗರಿಕರು ಹಾಗೂ ಕ್ಷೇತ್ರಕ್ಕೆ ಬಂದ ಭಕ್ತಾದಿಗಳು ಕೂಡಾ ಕಾರ್ಯಕ್ರಮದ ಸೊಗಡನ್ನು ಆಸ್ವಾದಿಸಿದರು. ಎರಡು ತಿಂಗಳು ನಡೆದ ಪುರಾಣ ವಾಚನದಲ್ಲಿ ೧೪ ಮಂದಿ ಹಾಗೂ ಪ್ರವಚನದಲ್ಲಿ ೨೦ ಮಂದಿ ವಿದ್ವಾಂಸರು ಭಾಗವಹಿಸಿದರು. ಸೋಮವಾರ ಸುಪ್ರೀತಾ ಕೋರ್ನಾಯ ವಾಚನ ಮಾಡಿದರೆ, ಅಶೋಕ ಭಟ್ ಪ್ರವಚನ ನೀಡಿದರು.ಸಮಾರೋಪ ಸಮಾರಂಭದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿದ ಎಲ್ಲರನ್ನೂ ಗೌರವಿಸಿ ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉರ್ದು ಮುಸ್ಲಿಂರಿಗಷ್ಟೇ ಸೀಮಿತವಲ್ಲ ಜನಸಾಮಾನ್ಯರ ಭಾಷೆ
2 ಕೋಟಿ ವಂಚನೆ ಪ್ರಕರಣ: ಶರವಣ ಅಂದರ್