ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಶಲಕ್ಷ ಗಿಡ ನಾಟಿ ಕಾರ್ಯಕ್ರಮಕ್ಕೆ ಇಂದು ಚಾಲನೆ

KannadaprabhaNewsNetwork | Published : Jul 2, 2024 1:36 AM

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ, ಮಂಗಳೂರು ಪ್ರಾದೇಶಿಕ ಅರಣ್ಯ ವಿಭಾಗ, ಮಂಗಳೂರು ಉಪವಿಭಾಗ ಬಂಟ್ವಾಳ ವಲಯ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ರಾಜ್ಯಾದ್ಯಂತ ಹಮ್ಮಿಕೊಂಡಿರುವ ದಶಲಕ್ಷ ಗಿಡ ನಾಟಿ ಕಾರ್ಯಕ್ರಮ ಉದ್ಘಾಟನೆ ಮಂಗಳವಾರ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಅಲಂಪುರಿ ಸಾಲುಮರ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ನೆರವೇರಲಿದೆ.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಕಾರ್ಯಕ್ರಮದ ಉದ್ಘಾಟಿಸಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನ್ಯಾಕ್‌ ಉಳಿಪಾಡಿಗುತ್ತು ಸಸಿ ವಿತರಣೆ ಮಾಡಲಿದ್ದಾರೆ.

ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ:

ಪುತ್ತೂರು ತಾಲೂಕಿನ ಅವಿನಾಶ್ ಕೊಡಂಕಿರಿ ಅವರಿಗೆ ‘ಅರಣ್ಯ ಮಿತ್ರ ಪ್ರಶಸ್ತಿ’ ಪ್ರದಾನವನ್ನು ಮಾಜಿ ಸಚಿವ ರಮಾನಾಥ ರೈ ನೆರವೇರಿಸಲಿದ್ದು, ಜಿಲ್ಲಾಧಿಕಾರಿ ಮುಲೈ ಮುಗಿಲನ್ ನ್ಯೂ ಶೌರ್ಯ ಕರಪತ್ರ ಬಿಡುಗಡೆ ಮಾಡಲಿರುವರು.

ಮಂಗಳೂರು ವೃತ್ತ ಸಿಎಫ್ ಡಾ.ವಿ. ಕರಿಕಾಲನ್, ವಿಭಾಗ ಡಿ.ಸಿ.ಎಫ್. ಮಂಗಳೂರು ಅಂಟೋನಿ ಮರಿಯಪ್ಪ ವೈ.ಕೆ., ಮಂಗಳೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಕಾವಳಪಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ, ಬಂಟ್ವಾಳ ವಲಯ ಅರಣ್ಯ ಅಧಿಕಾರಿ ಪ್ರಫುಲ್, ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಕಾರ್ಯನಿರ್ವಾಹಕ ಅನಿಲ್ ಕುಮಾರ್ ಎಸ್‌ ಎಸ್ ಉಪಸ್ಥಿತರಿರುವರು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಬಂಟ್ವಾಳ ಯೋಜನಾ ಕಚೇರಿ ಪ್ರಕಟಣೆ ತಿಳಿಸಿದೆ.10 ಸಾವಿರ ಎಕರೆಯಲ್ಲಿ ಗಿಡ ನಾಟಿ:

ಯೋಜನೆಯ ದಶಲಕ್ಷ ಗಿಡ ನಾಟಿ ಕಾರ್ಯಕ್ರಮದ ಪ್ರಯುಕ್ತ ರಾಜ್ಯದಲ್ಲಿ ಸುಮಾರು 10 ಸಾವಿರ ಎಕರೆ ಭೂ ಪ್ರದೇಶದಲ್ಲಿ 10 ಲಕ್ಷಕ್ಕೂ ಅಧಿಕ ಹಣ್ಣಿನ ಹಾಗೂ ಇತರ ಗಿಡ ನಾಟಿಯನ್ನು ಸುಮಾರು 1 ಕೋಟಿ ರು. ವೆಚ್ಚದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ನಡೆಸಲಾಗುತ್ತಿದೆ ಎಂದುಪ್ರಕಟಣೆ ತಿಳಿಸಿದೆ.

Share this article