ಧರ್ಮಸ್ಥಳ ಯೋಜನೆ ಬಡವರ ಆರ್ಥಿಕ ಪ್ರಗತಿಗೆ ಸಹಕಾರಿ

KannadaprabhaNewsNetwork |  
Published : Oct 01, 2024, 01:24 AM IST
ಫೋಟೋ : 30 ಹೆಚ್‌ಎಸ್‌ಕೆ 1 ಹೊಸಕೋಟೆ ನಗರದ ಖಾಸಗಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆದ ತಾಲೂಕು ಮಟ್ಟದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶವನ್ನು ಜಿಲ್ಲಾ ನಿರ್ದೇಶಕ ಉಮರಬ್ಬ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಲಕ್ಷö್ಮಣ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನಂಬಿಕೆಯ ಆಧಾರದ ಮೇಲೆ ಸದಸ್ಯರಿಗೆ ಕೋಟ್ಯಾಂತರ ರು. ಸಾಲ ಸೌಲಭ್ಯವನ್ನು ನೀಡುತ್ತಿದ್ದು, ಸರ್ಕಾರ ಮಾಡಲಾಗದಂತಹ ಉತ್ತಮ ಕೆಲಸಗಳನ್ನು ಸಂಸ್ಥೆ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಲಕ್ಷ್ಮಣ್ ತಿಳಿಸಿದರು.

ಹೊಸಕೋಟೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನಂಬಿಕೆಯ ಆಧಾರದ ಮೇಲೆ ಸದಸ್ಯರಿಗೆ ಕೋಟ್ಯಾಂತರ ರು. ಸಾಲ ಸೌಲಭ್ಯವನ್ನು ನೀಡುತ್ತಿದ್ದು, ಸರ್ಕಾರ ಮಾಡಲಾಗದಂತಹ ಉತ್ತಮ ಕೆಲಸಗಳನ್ನು ಸಂಸ್ಥೆ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಲಕ್ಷ್ಮಣ್ ತಿಳಿಸಿದರು.ನಗರದ ಖಾಸಗಿ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.ರಾಜ್ಯದಲ್ಲಿ ಬಡಜನರು, ನಿರ್ಗತಿಕರು, ದುರ್ಬಲ ವರ್ಗದವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ನೆರವು ನೀಡಿ ಸ್ವಾವಲಂಬಿ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿದೆ. ಮಹಿಳೆಯರ ಸ್ವಾವಲಂಬಿ ಬದುಕಿಗೆ ನೆರವಾಗುವುದರ ಜೊತೆಗೆ ಸಮುದಾಯ ಮತ್ತು ಕುಟುಂಬದ ಆರ್ಥಿಕ ಪ್ರಗತಿಗೆ ಯೋಜನೆ ಸಹಕಾರಿಯಾಗಿದೆ. ಧರ್ಮಸ್ಥಳ ಯೋಜನೆ ಎಂಬ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ ಕೆಲವರಿಂದ ನಡೆಯುತ್ತಿದ್ದು. ಅಂತಹವರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದರು ಜಿಲ್ಲಾ ನಿರ್ದೇಶಕ ಉಮರಬ್ಬ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಂಬುದು ಬಡ ಮಧ್ಯಮ ವರ್ಗದವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬಡವರ ಹಾಗೂ ಬ್ಯಾಂಕಿನ ನಡುವೆ ಸೇತುವೆಯಾಗಿ ಕರ್ತವ್ಯ ನಿರ್ವಹಿಸುತ್ತಿದೆ. ನಂಬಿಕೆಯ ಆಧಾರದ ಮೇಲೆ ಎಲ್ಲಾ ರೀತಿಯ ಚಟುವಟಿಕೆಗಳು ನಡೆಯುತ್ತಿವೆ ಎಂದರು. ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಲಕ್ಷ್ಮಣ್, ಮಂಜುಳಾ, ದೇವರಾಜ್, ತಾಲೂಕು ಯೋಜನಧಿಕಾರಿ ಪುರುಷೋತ್ತಮ್, ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಬೆಂಗಳೂರು ಜೋನಲ್ ಆಫೀಸ್ ಅಸಿಸ್ಟೆಂಟ್ ಮ್ಯಾನೇಜರ್ ಸುಭಾಷ್, ಹೊಸಕೋಟೆ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕ ಮನೋಜ್, ಎಂಐಎಸ್ ಯೋಜನಾಧಿಕಾರಿ ರಿತೇಶ್, ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯ ಸಿಎಸ್‌ಸಿ ಯೋಜನಾಧಿಕಾರಿ ಧನಂಜಯ, ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ನಿಶ್ಮಿತ ಉಪಸ್ಥಿತರಿದ್ದರು.

PREV

Recommended Stories

3ನೇ ಮಹಡಿಯಿಂದ ಆಯತಪ್ಪಿಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ