ರೈತಸಂಘದಿಂದ 2ನೇ ದಿನಕ್ಕೆ ಕಾಲಿಟ್ಟ ಧರಣಿ

KannadaprabhaNewsNetwork |  
Published : Nov 07, 2024, 12:35 AM IST
ಪೊಟೋ: 6ಎಸ್‌ಎಂಜಿಕೆಪಿ05ಭದ್ರಾವತಿ ತಾಲೂಕು ಭದ್ರಾ ಜಲಾಶಯದ ತಳಭಾಗದಲ್ಲಿ ನಡೆಯುತ್ತಿರುವ ಶುದ್ಧೀಕರಣ ಘಟಕದ ಕಾಮಗಾರಿ ವಿರೋಧಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ವತಿಯಿಂದ ಬುಧವಾರವೂ ಧರಣಿ ನಡೆಯಿತು. | Kannada Prabha

ಸಾರಾಂಶ

ಶಿವಮೊಗ್ಗ: ಕರ್ನಾಟಕ ನೀರಾವರಿ ನಿಗಮ ನಿಯಮಿತವು ಭದ್ರಾ ಜಲಾಶಯದ ಬಳಿಯ ಬಫರ್ ಝೋನ್‍ನ ಒಳ ಭಾಗದಲ್ಲಿ ನಡೆಸಲಾಗುತ್ತಿರುವ ನೀರು ಶುದ್ಧೀಕರಣ ಘಟಕದ ಕಾಮಗಾರಿ ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡಿದೆ.

ಶಿವಮೊಗ್ಗ: ಕರ್ನಾಟಕ ನೀರಾವರಿ ನಿಗಮ ನಿಯಮಿತವು ಭದ್ರಾ ಜಲಾಶಯದ ಬಳಿಯ ಬಫರ್ ಝೋನ್‍ನ ಒಳ ಭಾಗದಲ್ಲಿ ನಡೆಸಲಾಗುತ್ತಿರುವ ನೀರು ಶುದ್ಧೀಕರಣ ಘಟಕದ ಕಾಮಗಾರಿ ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡಿದೆ. ನೀರಾವರಿ ನಿಗಮದ ಭದ್ರಾವತಿಯ ನಂ.4, ಬಿಆರ್‌ಎಲ್‍ಬಿಸಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಅವರು ಕಾಮಗಾರಿ ನಿಲ್ಲಿಸುವ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ಪತ್ರದ ಮೂಲಕ ತಿಳಿಸಿದ್ದರೂ, ಕಾಮಗಾರಿ ಮುಂದುವರೆಸಲಾಗಿತ್ತು. ಇದನ್ನು ಖಂಡಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಮುಖಂಡ ಕೆ.ಟಿ.ಗಂಗಾಧರ್ ನೇತೃತ್ವದಲ್ಲಿ ಭದ್ರಾ ಜಲಾಶಯದ ಬಳಿ ಮಂಗಳವಾರ ಮಧ್ಯಾಹ್ನದಿಂದ ಅಹೋರಾತ್ರಿ ಧರಣಿ ಪ್ರಾರಂಭಿಸಲಾಗಿತ್ತು.ಭದ್ರಾ ಜಲಾಶಯದ ಬಫರ್ ಝೋನ್‍ನ ಒಳಭಾಗದಲ್ಲಿ ನಡೆಸುತ್ತಿರುವ ಕಾಮಗಾರಿಯಿಂದ ಡ್ಯಾಂನ ಭದ್ರತೆಗೆ ಧಕ್ಕೆ ಉಂಟಾಗಲಿದೆ. ಆದ್ದರಿಂದ ಕಾಮಗಾರಿಯನ್ನು ಸ್ಥಗಿತಗೊಳಿಸಿ ಯೋಜನೆಯನ್ನು ಕೈಬಿಡಬೇಕೆಂದು ಆಗ್ರಹಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಳಿಸಲಾಗಿದೆ. ಆದರೆ ಯೋಜನೆ ಕೈಬಿಡುವ ಬಗ್ಗೆ ಲಿಖಿತ ರೂಪದಲ್ಲಿ ನೀಡಬೇಕೆಂದು ಆಗ್ರಹಿಸಿ ಅಹೋರಾತ್ರಿ ಧರಣಿಯನ್ನು ಎರಡನೇ ದಿನವಾದ ಬುಧವಾರ ಮುಂದುವರೆಸಲಾಗಿದೆ ಎಂದು ಕೆ.ಟಿ.ಗಂಗಾಧರ್ ತಿಳಿಸಿದರು.ನೀರು ಶುದ್ಧೀಕರಣ ಘಟಕದ ಕಾಮಗಾರಿಗೆ ವಿರೋಧವಿಲ್ಲ. ಆದರೆ ನಿಯಮಬಾಹಿರವಾಗಿ ಹಾಗೂ ಜಲಾಶಯಕ್ಕೆ ಧಕ್ಕೆ ಉಂಟಾಗಬಹುದೆಂಬ ಕಾರಣಕ್ಕೆ ಬಫರ್ ಝೋನ್‍ನ ಒಳಭಾಗದಲ್ಲಿ ನಡೆಸುತ್ತಿರುವ ಕಾಮಗಾರಿಗೆ ವಿರೋಧವಿದೆ. ಸರ್ಕಾರ ಇಂತಹ ಕಾಮಗಾರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದರಷ್ಟೇ ಸಾಲದು. ಬಫರ್ ಝೋನ್‍ನ ಭಾಗದಲ್ಲಿ ಯೋಜನೆಯನ್ನು ಅನುಷ್ಟಾನಗೊಳಿಸಬಾರದು. ಈ ನಿಟ್ಟಿನಲ್ಲಿ ಕಾನೂನು ಹೋರಾಟಕ್ಕೂ ಸಿದ್ಧ ಎಂದರು.ಜಿಲ್ಲಾಧ್ಯಕ್ಷ ಯಶವಂತರಾವ್ ಘೋರ್ಪಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥೇಶ್ವರ, ಗುಣಶೇಖರ, ಜಗದೀಶ ನಾಯ್ಕ ಮಲವಗೊಪ್ಪ, ಶೇಠ್, ಗೋವಿಂದ ನಾಯ್ಕ, ಮೂಡಲಗಿರಿಯಪ್ಪ, ಅರಬಿಳಚಿ, ಅರಬಿಳಚಿ ಕ್ಯಾಂಪ್, ಹರಕೆರೆ, ಮಾರಶೆಟ್ಟಿಹಳ್ಳಿ ಭಾಗದ ರೈತರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

PREV

Recommended Stories

‘ಚಾಮುಂಡೇಶ್ವರಿ ಬಗ್ಗೆ ಬಾನು ತಮ್ಮ ಗೌರವ ಸ್ಪಷ್ಟಪಡಿಸಲಿ’ : ವಿಜಯೇಂದ್ರ
ಗ್ಯಾರಂಟಿ ಯೋಜನೆಗಳ ಜತೆ ರಾಜ್ಯವು ಅಭಿವೃದ್ಧಿ