ಇಂದು ಧರ್ಮ ಜಾಗೃತಿ ಸಮಾರಂಭ: 1008 ಬಿಲ್ವ ಪತ್ರಿ ಸಸಿಗಳ ವಿತರಣೆ

KannadaprabhaNewsNetwork | Published : Dec 18, 2023 2:00 AM

ಸಾರಾಂಶ

ಪಾಪನಾಶ ಗೇಟ್ ಸಮೀಪದ ರಾಮ ಸಮರ್ಥ ಕಲ್ಯಾಣ ಮಂಟಪದಲ್ಲಿ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಪರಿವಾರದಿಂದ ಧರ್ಮ ಜಾಗೃತಿ ಸಮಾರಂಭ ನಡೆಯಲಿದೆ.

ಬೀದರ್‌: ಇಲ್ಲಿಯ ಪಾಪನಾಶ ಗೇಟ್ ಸಮೀಪದ ರಾಮ ಸಮರ್ಥ ಕಲ್ಯಾಣ ಮಂಟಪದಲ್ಲಿ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಪರಿವಾರದಿಂದ ಡಿ.18ರಂದು ಮಧ್ಯಾಹ್ನ 12.45ಕ್ಕೆ ಸಿದ್ಧಾಂತ ಶಿಖಾಮಣಿ ಗ್ರಂಥ ಲೋಕಾರ್ಪಣೆ, 1008 ಬಿಲ್ವ ಪತ್ರಿ ಸಸಿಗಳ ವಿತರಣೆ ಹಾಗೂ ಧರ್ಮ ಜಾಗೃತಿ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಕಾಶಿಯ 1008 ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯರು, ಜಿಲ್ಲೆಯ ಶಿವಾಚಾರ್ಯರು, ಮಠಾಧೀಶರು ಸಾನಿಧ್ಯವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು. ರಾಜ್ಯ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಅಧ್ಯಕ್ಷತೆವಹಿಸುವರು. ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಸಿ.ವೀರಣ್ಣ ಗ್ರಂಥ ಬಿಡುಗಡೆ ಮಾಡುವರು.

ಮುಖ್ಯ ಅತಿಥಿಗಳಾಗಿ ಎಂಎಲ್ಸಿಗಳಾದ ರಘುನಾಥರಾವ್ ಮಲ್ಕಾಪುರೆ, ಅರವಿಂದಕುಮಾರ ಅರಳಿ, ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ, ಡಾ. ಸಿದ್ಧಲಿಂಗಪ್ಪ ಪಾಟೀಲ, ಮಾಜಿ ಸಚಿವ ರಾಜಶೇಖರ ಪಾಟೀಲ ಹುಮನಾಬಾದ್, ಬಂಡೆಪ್ಪ ಕಾಶೆಂಪುರ, ಮಾಜಿ ಶಾಸಕ ಸುಭಾಷ್ ಕಲ್ಲೂರ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ.ಎಂ, ಶೀಲಾ ಭಗವಂತ ಖೂಬಾ, ಗುರುಪಾದಪ್ಪ ನಾಗಮಾರಪಳ್ಳಿ ಸಹಕಾರ ಆಸ್ಪತ್ರೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಕೆಆರ್‌ಇ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಎಚ್‌ಕೆಇ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ.ರಜನೀಶ್ ವಾಲಿ, ವಿಶ್ವ ಹಿಂದೂ ಪರಿಷತ್ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಮಕೃಷ್ಣನ್ ಸಾಳೆ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ರಾಜ್ಯ ಉಪಾಧ್ಯಕ್ಷ ಎನ್. ನಂಜುಂಡೇಶ, ಕೆಪಿಸಿಸಿ ವಕ್ತಾರ ಮಹಾಂತೇಶ ಹಟ್ಟಿ, ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಯ್ಯ ಸ್ವಾಮಿ, ಆರ್.ಎಸ್. ಡೆನ್ ನೆಟ್‌ವರ್ಕ್ ವ್ಯವಸ್ಥಾಪಕ ನಿರ್ದೇಶಕ ರವಿ ಸ್ವಾಮಿ, ವೀರಶೈವ ಲಿಂಗಾಯತ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಅಶೋಕಕುಮಾರ ನಾಗೂರೆ, ಕಡ್ಯಾಳ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಅಧ್ಯಕ್ಷ ರಾಜು ಕಡ್ಯಾಳ, ರಾಜ್ಯ ಹಜ್ ಸಮಿತಿ ಮಾಜಿ ಅಧ್ಯಕ್ಷ ರೌಫೊದ್ದಿನ್ ಕಚೇರಿವಾಲೆ, ಬಿಡಿಎ ಮಾಜಿ ಅಧ್ಯಕ್ಷ ಬಾಬುವಾಲಿ, ಡಾ.ಗುರಮ್ಮ ಸಿದ್ಧಾರೆಡ್ಡಿ, ಡಾ.ಜಗನ್ನಾಥ ಹೆಬ್ಬಾಳೆ, ಪ್ರೊ.ಸಿದ್ರಾಮಪ್ಪ ಮಾಸಿಮಾಡೆ, ರಮೇಶ ಪಾಟೀಲ ಸೋಲಪುರ, ವಿಜಯಕುಮಾರ ಮಡ್ಡೆ, ಎ.ಬಿ. ಪಾಟೀಲ, ವಿಶ್ವೇಶ್ವಯ್ಯ ಭಾಗವಹಿಸುವರು ಎಂದು ಶಿವಯ್ಯ ಸ್ವಾಮಿ ತಿಳಿಸಿದ್ದಾರೆ.

Share this article