ಧರ್ಮಚಕ್ರ ಆರಾಧನಾ ಮಹೋತ್ಸವಕ್ಕೆ ಚಾಲನೆ

KannadaprabhaNewsNetwork |  
Published : Apr 25, 2026, 03:30 AM IST
ದಿ.24-ಅರ್.ಪಿ.ಟಿ.5ಪಿ ಇಲ್ಲಿಗೆ ಸಮೀಪದ ಇತಿಹಾಸ ಪ್ರಸಿದ್ದ ಶ್ರೀ ಗುಳುಗುಳಿಶಂಕರದ ಶ್ರೀಶಂಕರೇಶ್ವರ ದೇವಸ್ಥಾನದ  11 ನೇ ವರ್ಷದ ಪ್ರತಿಷ್ಟಾ ವರ್ಧಂತ್ಯುತ್ಸವ ಧರ್ಮಸಮಾರಂಭದ  ಕಾರ್ಯಕ್ರಮದಲ್ಲಿ ಶಾಸಕ ಅರಣ್ಯಕೈಗಾರಿಕಾಭಿವೃದ್ದಿ ನಿಗಮದ ಆಧ್ಯಕ್ಷ ಗೋಪಾಲಕೃಷ್ಣ ಬೇಳೂರು ಮುಖ್ಯ ಆತಿಥಿಯಾಗಿ ಭಾಗವಹಿಸಿ ಮಾತನಾಡಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಬೆಳಗಾವಿಯ ಕೋಟೆ ಆವರಣದ ಐತಿಹಾಸಿಕ ಕಮಲ ಬಸದಿಯಲ್ಲಿ ಐದು ದಿನಗಳ ಧರ್ಮಚಕ್ರ ಆರಾಧನಾ ಮಹೋತ್ಸವಕ್ಕೆ ಶುಕ್ರವಾರ ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿಯ ಕೋಟೆ ಆವರಣದ ಐತಿಹಾಸಿಕ ಕಮಲ ಬಸದಿಯಲ್ಲಿ ಐದು ದಿನಗಳ ಧರ್ಮಚಕ್ರ ಆರಾಧನಾ ಮಹೋತ್ಸವಕ್ಕೆ ಶುಕ್ರವಾರ ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಜೈನ ಸಮಾಜ ಶಾಂತಿಪ್ರೀಯ ಸಮಾಜವಾಗಿದ್ದು, ಎಲ್ಲ ಸಮಾಜದವರೊಂದಿಗೆ ಒಂದಾಗಿ ಹಾಗೂ ಎಲ್ಲರೊಂದಿಗೆ ಹೊಂದಿಕೊಂಡು ಹೋಗುವ ಸಮಾಜವಾಗಿದೆ. ಇಂದು ಐತಿಹಾಸಿಕ ಕೋಟೆ ಆವರಣದಲ್ಲಿ ಒಂದು ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಈಗಾಗಲೆ ಕೋಟೆ ಆವರಣವನ್ನು ಅಭಿವೃದ್ಧಿಗೊಳಿಸಲಾಗಿದ್ದು, ಇದನ್ನು ಇದೇ ರೀತಿ ಕಾಪಾಡಿಕೊಂಡು ಹೋಗುವುದು ಎಲ್ಲರ ಜವಾಬ್ದಾರಿಯಾಗಿದೆ.‌ ಇಂದಿನ ಕಾರ್ಯಕ್ರಮದಲ್ಲಿ ಅನೇಕ‌ ಯುವಕ- ಯುವತಿಯರು ಭಾಗವಹಿಸಿದ್ದು ಮೆಚ್ಚುಗೆಯ ಸಂಗತಿ. ‌ಇಂತಹ ಕಾರ್ಯಕ್ರಮಗಳಿಂದ ಮಕ್ಕಳಲ್ಲಿ ಸಂಸ್ಕಾರ ಬೆಳೆಯಲು ಕಾರಣವಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಹೋತ್ಸವ ಸಮಿತಿ ವತಿಯಿಂದ ಹಾಗೂ ಜೈನ ಸಮಾಜದ ವತಿಯಿಂದ ಗೌರವಿಸಲಾಯಿತು. ಸಮಾರಂಭದಲ್ಲಿ ಮಹೋತ್ಸವ ಸಮಿತಿಯ ಖಜಾಂಚಿ ಹಾಗೂ ಭರತೇಶ ಶಿಕ್ಷಣ ಸಂಸ್ಥೆ ಯ ಕಾರ್ಯದರ್ಶಿ ವಿನೋದ ದೊಡ್ಡಣ್ಣವರ ಸ್ವಾಗತಿಸಿದರು. ಮೊದಲು ಬೆಳಿಗ್ಗೆ ಮಾಜಿ ಶಾಸಕರಾದ ವೀರಕುಮಾರ ಪಾಟೀಲ, ಸಂಜಯ ಪಾಟೀಲ, ವಕೀಲ ರವಿರಾಜ ಪಾಟೀಲ, ಉದ್ಯಮಿ‌ ಭರತ ಪಾಟೀಲ ಇನ್ನಿತರ ಗಣ್ಯರಿಂದ ಧ್ವಜಾರೋಹಣ ಮತ್ತು ಮಂಟಪ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಇಂದ್ರಜಿತ್ ‌ದೊಡ್ಡಣ್ಣವರ ಮತ್ತು ಭರತೇಶ ಬುಡವಿ ವಿಧಿ- ವಿಧಾನ ಮಾಡಿದರು. ಪಂಡಿತ ಅಮೋಲ ಉಪಾಧ್ಯೆ ಮತ್ತು ಮಹಾವೀರ ಉಪಾಧ್ಯೆ ಅವರು ಪೂಜಾ ವಿಧಿಗಳನ್ನು ನಡೆಸಿಕೊಟ್ಟರು. ‌

ಈ ಸಂದರ್ಭದಲ್ಲಿ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುನಿಲ ಹನಮಣ್ಣವರ, ಕಾರ್ಯದರ್ಶಿ ಹೀರಾಚಂದ ಕಲಮನಿ, ಸನ್ಮತಿ ಕಸ್ತೂರಿ, ಅಭಿನಂದನ ಜಾಬನ್ನವರ, ರಾಜೇಂದ್ರ ಜಕ್ಕನ್ನವರ, ಅಭಯ ಅವಲಕ್ಕಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು. ಪದ್ಮರಾಜ ವೈಜನ್ನವರ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂವ೯ಭಾವಿ ಸಭೆ
ವಿವಿಧೆಡೆ ಕಳ್ಳತನದ ಪ್ರಕರಣಗಳ ಆರೋಪಿತರ ಬಂಧನ