ಕನ್ನಡಪ್ರಭ ವಾರ್ತೆ ಮಂಗಳೂರು
ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಧರ್ಮದೈವ’ ತುಳು ಸಿನಿಮಾ ಜುಲೈ 5 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಪುಣೆ, ಮುಂಬೈನಲ್ಲಿ ನಡೆದ ಪ್ರೀಮಿಯರ್ ಶೋ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.‘ಧರ್ಮ ದೈವ’ ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್‌ನಲ್ಲಿ ಸಿನಿಗ್ಯಾಲಕ್ಸಿ, ನಟರಾಜ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನಾ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಸಿನಿಮಾ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬಳಿಕ ಮಾತಾಡಿದ ರಮೇಶ್ ರೈ ಕುಕ್ಕುವಳ್ಳಿ ಅವರು, ಅವಿಭಜಿತ ದ.ಕ. ಜಿಲ್ಲೆಯ ಕರಾವಳಿ ಸೇರಿದಂತೆ ಅನೇಕ ಸಾನಿಧ್ಯ ಸ್ಥಳಗಳು, ದೈವಾರಾಧನೆ ನಾಗಾರಾಧನೆಗೆ ಪ್ರಸಿದ್ಧಿ ಪಡೆದಿವೆ. ಇಂದು ತುಳುನಾಡು, ತುಳು ಭಾಷೆ, ದೇಶ-ವಿದೇಶ ತುಂಬಾ ಮಾನ್ಯತೆ ಪಡೆದಿದೆ ಎಂದರು.ಸಿನಿಮಾ ಮಾಧ್ಯಮ ಇಂದು ಪರಿಣಾಮಕಾರಿ ಶ್ರೀಮಂತ ಮಾಧ್ಯಮವಾಗಿ ಬೆಳಗುತ್ತಿದೆ.ಈ ನಾಡಿನ ರೈತಾಪಿ ಜನರು ತಮ್ಮ ಬೇಸಾಯ- ಕೃಷಿ, ತೋಟಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ತುಳುನಾಡಿನ ದೈವ-ದೇವರು, ನೇಮ- ಕೋಲ-ತಂಬಿಲ, ನಾಗಾರಾಧನೆ -ದೈವಾರಾಧನೆ. ಮೂಲಕ ಈ ಮಣ್ಣಿನ, ಬದುಕಿನ ಕಥೆಯನ್ನು ಕಟ್ಟಿಕೊಡುವ ತುಳು ಚಲನಚಿತ್ರ ‘ಧರ್ಮ ದೈವ’ ಬೆಳ್ಳಿ ತೆರೆಯಲ್ಲಿ ಮೂಡಿಬರಲು ಸಿದ್ಧವಾಗಿದೆ. ತುಳುವರು ಸಿನಿಮಾ ನೋಡಿ ಕಲಾವಿದರನ್ನು ಬೆಳೆಸಿ ಎಂದರು. ನಟ ಚೇತನ್ ರೈ ಮಾಣಿ, ಯುವ ನಿರ್ಮಾಪಕ ಬಿಳಿಯೂರು ರಾಕೇಶ್ ಭೋಜರಾಜ ಶೆಟ್ಟಿ, ನಿರ್ಮಾಪಕ ಬಿಳಿಯೂರು ರಾಕೇಶ್ ಭೋಜರಾಜ ಶೆಟ್ಟಿ, ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ , ರಮೇಶ್ ರೈ ಕುಕ್ಕುವಳ್ಳಿ, ಚೇತನ್ ರೈ ಮಾಣಿ, ಅರುಣ್ ರೈ ಪುತ್ತೂರು ಮತ್ತಿತರರು ಇದ್ದರು.