ಸಮಾಜಕ್ಕೆ ಧರ್ಮಸ್ಥಳ ಕ್ಷೇತ್ರದ ಕೊಡುಗೆ ಅಪಾರ: ಸುನೀಲ ನಾಯ್ಕ

KannadaprabhaNewsNetwork |  
Published : Oct 27, 2026, 02:30 AM IST
ಸಾಮೂಹಿಕ ಸತ್ಯನಾರಾಯಣ ಪೂಜೆ ಕಾರ್ಯಕ್ರಮವನ್ನು ಮಾಜಿ ಶಾಸಕ ಸುನೀಲ ನಾಯ್ಕ ಉದ್ಘಾಟಿಸಿದರು. | Kannada Prabha

ಸಾರಾಂಶ

ಧರ್ಮಸ್ಥಳ ಕ್ಷೇತ್ರದಿಂದ ಅನೇಕ ಸಮಾಜಮುಖಿ ಕಾರ್ಯಗಳು ಮಾಡುತ್ತಾ ಬರಲಾಗಿದ್ದು, ರಾಜ್ಯದ ಧಾರ್ಮಿಕ ಕ್ಷೇತ್ರ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರವಾದದ್ದು.

ಭಟ್ಕಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ತಾಲೂಕು ಘಟಕದ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಸರ್ಪನಕಟ್ಟೆ ವಲಯ, ಪ್ರಗತಿ ಬಂಧು, ಸ್ವ ಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ನೆರವೇರಿತು.

ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಸರ್ಪನಕಟ್ಟೆ ವಲಯದ ೫೧ ವಿದ್ಯಾರ್ಥಿಗಳಿಗೆ ಮಂಜೂರಾದ ಸುಜ್ಞಾನ ನಿಧಿಯನ್ನು ವಿತರಣೆ ಮಾಡಿ ಮಾತನಾಡಿದ ಮಾಜಿ ಶಾಸಕ ಸುನೀಲ ನಾಯ್ಕ ಅವರು, ನಾವು ಸತ್ಯನಾರಾಯಣ ಪೂಜೆಗೆ ಹೆಚ್ಚಿನ ಮಹತ್ವವನ್ನು ಕೊಡುತ್ತೇವೆ. ಅದರಲ್ಲೂ ಸಾಮೂಹಿಕ ಸತ್ಯನಾರಾಯಣ ಪೂಜೆ ಅತ್ಯಂತ ಶ್ರೇಷ್ಠ. ಅತ್ಯಂತ ಅಚ್ಚುಕಟ್ಟಾಗಿ ಆಯೋಜನೆ ಮಾಡಿರುವುದನ್ನು ಶ್ಲಾಘಿಸಿದರು.

ಧರ್ಮಸ್ಥಳ ಕ್ಷೇತ್ರದಿಂದ ಅನೇಕ ಸಮಾಜಮುಖಿ ಕಾರ್ಯಗಳು ಮಾಡುತ್ತಾ ಬರಲಾಗಿದ್ದು, ರಾಜ್ಯದ ಧಾರ್ಮಿಕ ಕ್ಷೇತ್ರ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರವಾದದ್ದು ಎಂದರು.

ಯೋಜನೆಯ ಜಿಲ್ಲಾ ನಿರ್ದೇಶಕಿ ನಾಗರತ್ನಾ ಹೆಗಡೆ, ಹಿರಿಯ ಪತ್ರಕರ್ತ ರಾಧಾಕೃಷ್ಣ ಭಟ್ಟ, ಕಿರುಹೊಳೆ ದೇವಸ್ಥಾನದ ಅಧ್ಯಕ್ಷ ಸುಭಾಷ ಕಾಮತ್, ಉಪಾಧ್ಯಕ್ಷ ಈಶ್ವರ ಮೊಗೇರ, ನ್ಯಾಯವಾದಿ ಪಾಂಡು ನಾಯ್ಕ, ಯೋಜನೆಯ ಯೋಜನಾಧಿಕಾರಿ ಲತಾ ಬಂಗೇರ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕ ಸುರೇಶ ಮುರ್ಡೆಶ್ವರ ಧಾರ್ಮಿಕ ಉಪನ್ಯಾಸ ನೀಡಿದರು. ಆನಂದ ರಾಮಾ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಗೊರಟೆ ಒಕ್ಕೂಟದ ಅಧ್ಯಕ್ಷೆ ಯಮುನಾ ಮಾದೇವ ನಾಯ್ಕ ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿಗಳಾದ ಜ್ಯೋತಿ ಸಂಗಡಿಗರು ಪ್ರಾರ್ಥಿಸಿದರು. ಸೇವಾ ಪ್ರತಿನಿಧಿ ಪ್ರೇಮ ಸ್ವಾಗತಿಸಿದರು. ಸರ್ಪನಕಟ್ಟೆ ವಲಯದ ಮೇಲ್ವಿಚಾರಕ ಹರೀಶ ಖಾರ್ವಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು. ಇದಕ್ಕೂ ಪೂರ್ವ ನೂರಕ್ಕೂ ಅಧಿಕ ಜನರು ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಭಕ್ತಿ ಭಾವದಿಂದ ನೆರವೇರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಾಲ್ಮೀಕಿ ರಾಮಾಯಣದಿಂದ ಸಮಾಜಕ್ಕೆ ಸಂದೇಶ
ರುದ್ರಭೂಮಿ ಸ್ವಚ್ಛಗೊಳಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು