ಗ್ರಾಮೀಣ ಜನರ ಆರ್ಥಿಕ ಸ್ವಾವಲಂಬನೆ, ಮಹಿಳಾ ಸಬಲೀಕರಣ, ಶಿಕ್ಷಣ, ಆರೋಗ್ಯ ಹಾಗೂ ಗ್ರಾಮೀಣ ಅಭಿವೃದ್ಧಿ ಕ್ಷೇತ್ರಗಳಲ್ಲಿ ಶ್ರೀಕ್ಷೇತ್ರವು ಕೈಗೊಂಡಿರುವ ವಿವಿಧ ಸೇವಾ ಕಾರ್ಯಕ್ರಮಗಳು ಸಮಾಜಕ್ಕೆ ಪ್ರೇರಣೆಯಾಗಿವೆ.
ಯಲ್ಲಾಪುರ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ 59ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಮಹತ್ವದ ಕುರಿತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್, ಯಲ್ಲಾಪುರ- ಮುಂಡಗೋಡ ತಾಲೂಕು ವ್ಯಾಪ್ತಿಯ ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿ ಹಾಗೂ ಸೇವಾ ಪ್ರತಿನಿಧಿಗಳ ಸಭೆಯಲ್ಲಿ ವಿಶೇಷ ಮಾಹಿತಿ ನೀಡಲಾಯಿತು. ಇದೇ ಸಂದರ್ಭದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನೂ ನಡೆಸಲಾಯಿತು.ಸಭೆಯಲ್ಲಿ ಮಾತನಾಡಿದ ಜಿಲ್ಲಾ ನಿರ್ದೇಶಕ ದಿನೇಶ್ ಎಂ. ಅವರು, ಪಟ್ಟಾಭಿಷೇಕ ವರ್ಧಂತ್ಯುತ್ಸವ ಕೇವಲ ಸಂಭ್ರಮದ ದಿನವಲ್ಲ; ಧರ್ಮ, ದಾನ, ಸೇವೆ, ಮಾನವೀಯತೆ ಹಾಗೂ ಸಮಾಜಮುಖಿ ಚಿಂತನೆಗಳನ್ನು ಸ್ಮರಿಸುವ ಪವಿತ್ರ ಸಂದರ್ಭವಾಗಿದೆ ಎಂದರು.ಧರ್ಮಸ್ಥಳದ ಧರ್ಮಾಧಿಕಾರಿಗಳಾಗಿ ಡಾ. ವೀರೇಂದ್ರ ಹೆಗ್ಗಡೆ ಅವರು ಸಲ್ಲಿಸುತ್ತಿರುವ ಸೇವೆಯನ್ನು ಸ್ಮರಿಸಿದ ಅವರು, ಗ್ರಾಮೀಣ ಜನರ ಆರ್ಥಿಕ ಸ್ವಾವಲಂಬನೆ, ಮಹಿಳಾ ಸಬಲೀಕರಣ, ಶಿಕ್ಷಣ, ಆರೋಗ್ಯ ಹಾಗೂ ಗ್ರಾಮೀಣ ಅಭಿವೃದ್ಧಿ ಕ್ಷೇತ್ರಗಳಲ್ಲಿ ಶ್ರೀಕ್ಷೇತ್ರವು ಕೈಗೊಂಡಿರುವ ವಿವಿಧ ಸೇವಾ ಕಾರ್ಯಕ್ರಮಗಳು ಸಮಾಜಕ್ಕೆ ಪ್ರೇರಣೆಯಾಗಿವೆ ಎಂದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಪ್ರಾಮಾಣಿಕತೆ, ಬದ್ಧತೆ ಹಾಗೂ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.ಸೇವೆಯೇ ಸಾಧನೆ, ಮಾನವೀಯತೆಯೇ ಧರ್ಮ, ಸಮಾಜದ ಉನ್ನತಿಯೇ ಸಂಕಲ್ಪ ಎಂಬ ಆಶಯದೊಂದಿಗೆ ಡಾ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಗ್ರಾಮಾಭಿವೃದ್ಧಿ ಯೋಜನೆಯ ಎಲ್ಲ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸುವುದು ಪ್ರತಿಯೊಬ್ಬ ಮೇಲ್ವಿಚಾರಕ ಹಾಗೂ ಸೇವಾ ಪ್ರತಿನಿಧಿಯ ಜವಾಬ್ದಾರಿಯಾಗಿದೆ ಎಂದರು.ತಾಲೂಕಿನ ಪ್ರಗತಿ ಪರಿಶೀಲನೆ ನಡೆಸಿದ ಅವರು, ಯೋಜನೆಯ ವಿವಿಧ ಕಾರ್ಯಕ್ರಮಗಳ ಅನುಷ್ಠಾನ, ಗ್ರಾಮೀಣ ಜನರ ಅಭಿವೃದ್ಧಿ ಹಾಗೂ ಸಂಘಗಳ ಪ್ರಗತಿಗೆ ಸಂಬಂಧಿಸಿದ ಕಾರ್ಯಗಳನ್ನು ಪರಿಶೀಲಿಸಿ, ನಿಗದಿಪಡಿಸಿದ ಗುರಿಗಳನ್ನು ಸಾಧಿಸಲು ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಯೋಜನೆಯ ಪ್ರತಿಯೊಂದು ಕಾರ್ಯಕ್ರಮವನ್ನೂ ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಮೂಲಕ ಗ್ರಾಮಾಭಿವೃದ್ಧಿಯ ಆಶಯವನ್ನು ಸಾಕಾರಗೊಳಿಸಬೇಕು ಎಂದು ಸೂಚಿಸಿದರು.ಸಭೆಯಲ್ಲಿ ತಾಲೂಕು ಯೋಜನಾಧಿಕಾರಿ ಸಂತೋಷ್ ಎ.ಎಸ್., ಹರೀಶ್ ಸೇರಿದಂತೆ ತಾಲೂಕಿನ ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿ ಹಾಗೂ ಎಲ್ಲ ಕಾರ್ಯಕರ್ತರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.