ಅಂಕನಹಳ್ಳಿ ಬಸವೇಶ್ವರ ದೇವಸ್ಥಾನಕ್ಕೆ ಧರ್ಮಸ್ಥಳ ಕ್ಷೇತ್ರ ದೇಣಿಗೆ

KannadaprabhaNewsNetwork |  
Published : Jul 26, 2026, 03:00 AM IST
. | Kannada Prabha

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಬಿಸಿ ಟ್ರಸ್ಟ್ ವತಿಯಿಂದ ಸಮಿಪದ ಅಂಕನಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಅಭಿವೃದ್ದಿಗೆ ೧ ಲಕ್ಷದ ೫೦ ಸಾವಿರ ರು. ಮಂಜೂರಾತಿ ಪತ್ರ ಹಸ್ತಾಂತರಿಸಲಾಯಿತು.

ಕನ್ನಡಪ್ರಭವಾರ್ತೆ ಶನಿವಾರಸಂತೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಬಿಸಿ ಟ್ರಸ್ಟ್ ವತಿಯಿಂದ ಸಮಿಪದ ಅಂಕನಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಅಭಿವೃದ್ದಿಗೆ ೧ ಲಕ್ಷದ ೫೦ ಸಾವಿರ ರು. ಮಂಜೂರಾತಿ ಪತ್ರ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕ ವಿಠಲ್ ಸಾಲಿಯಾನ್-ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ನಿಮ್ಮ ಊರಿನಲ್ಲೂ ನೆಲೆಸಿದ್ದಾನೆ. ದೇವಸ್ಥಾನದ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳುವುದು ನಮ್ಮ ನಿಮ್ಮಲ್ಲರ ಜವಾಬ್ದಾರಿ ಎಂದರು.

ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಮಾತನಾಡಿ-ಧರ್ಮಸ್ಥಳ ಸಂಸ್ಥೆಯ ಹಲವಾರು ಜನಪರ ಕಾರ್ಯಕ್ರಮಗಳಲ್ಲಿ ದೇವಸ್ಥಾನ ಅಭಿವೃದ್ದಿ ಮತ್ತು ಸ್ವಚ್ಚತ್ತೆ ಕಾರ್ಯಕ್ರಮವೂ ಒಂದಾಗಿದೆ. ಗ್ರಾಮಾಭಿವೃದ್ದಿ ಯೋಜನೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಮಾಡುತ್ತಿದೆ ಎಂದರು.

ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್.ಎಸ್.ಈರಪ್ಪ, ಕಾರ್ಯದರ್ಶಿ ಎ.ಎಸ್.ವರದರಾಜು, ಪ್ರಮುಖರಾದ ಸತೀಶ್, ಸುಂದರೇಶ್, ನವೀನ್, ಗೌರೀಶ್ ತಮ್ಮಯ್ಯ, ವಿಶ್ವನಾಥ್, ಗಣೇಶ್, ರೂಪೇಶ್, ಶನಿವಾರಸಂತೆ ವಲಯ ಮೇಲ್ವಿಚಾರಕ ಅಚ್ಯುತ್, ಸೇವಾ ಪ್ರತಿನಿಧಿಗಳಾದ ಪವಿತ್ರ, ಮಂಜುಳಾ ಸಂಘದ ಸದಸ್ಯರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯುದ್ದೀಪಾಲಂಕಾರದಿಂದ ಝಗಮಗಿಸುತ್ತಿರುವ ತಾಳಿಕೋಟೆ
ಕಾರ್ಯಕರ್ತರ ಅಭಿಪ್ರಾಯಕ್ಕೆ ಹೆಚ್ಚಿನ ಆದ್ಯತೆ