ಧರ್ಮಸ್ಥಳ ಲಕ್ಷ ದೀಪೋತ್ಸವ ಪಾದಯಾತ್ರೆಯ ಕರಪತ್ರ ಬಿಡುಗಡೆ

KannadaprabhaNewsNetwork |  
Published : Nov 06, 2025, 03:00 AM IST
13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ನಡೆಯಿತು.

ಬೆಳ್ತಂಗಡಿ: ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ನಡೆಯಿತು.ಸಭೆಯಲ್ಲಿ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೇಟ್ನಾಯರ್ ಮಾತನಾಡಿ, ನಮ್ಮ ಸಾತ್ವಿಕ ಶಕ್ತಿಯನ್ನು ತೋರಿಸುವ ಸಲುವಾಗಿ ದಿ. ಡಾ.ಬಿ. ಯಶೋವರ್ಮ ಹಾಗೂ ದಿ.ವಿಜಯ ರಾಘವ ಪಡುವೇಟ್ನಾಯರ್ ಮಾರ್ಗದರ್ಶನದಲ್ಲಿ ಕೇವಲ 500 ಜನರಿಂದ ಆರಂಭವಾದ ಈ ಪಾದಯಾತ್ರೆ ಇಂದು ಬೃಹತ್ ಹೆಮ್ಮರವಾಗಿ ಬೆಳೆದಿದೆ. ಹಿರಿಯರು ಮತ್ತು ಊರಿನವರ ಭಕ್ತಿ ಮತ್ತು ಸಹಕಾರದಿಂದ ಇದೊಂದು ಧಾರ್ಮಿಕ ಪರಂಪರೆಯಾಗಿ ಬೆಳೆಯುತ್ತಿದೆ. ಬಹು ಶಿಸ್ತಿನಿಂದ ನಡೆದುಕೊಂಡು ಬಂದಿರುವ ಈ ಪಾದಯಾತ್ರೆ ಇನ್ನು ಮುಂದೆಯೂ ಹೀಗೆ ಸಾಗುತ್ತದೆ ಎಂದರು.ಮಂಗಳೂರು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಪ್ರತಿ ಸವಾಲುಗಳನ್ನು ಮೆಟ್ಟಿ ನಾವು ಹೆಜ್ಜೆ ಹಾಕಬೇಕು. ಆರಂಭದಿಂದಲೂ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ಕಳಂಕ ಹೊರಿಸುವ ಪ್ರಯತ್ನಗಳು ನಡೆಯುತ್ತಾ ಬಂದಿದೆ. ಧರ್ಮಾಧಿಕಾರಿ ಖಾವಂದರ ಬಿಳಿಯ ಶುಭ್ರವಸ್ತ್ರವನ್ನು ಯಾರೂ ಕಪ್ಪು ಮಾಡಲು ಸಾಧ್ಯವಿಲ್ಲ. ಶ್ರದ್ಧೆ ಮತ್ತು ಭಕ್ತಿಯಿಂದ ನಾವೆಲ್ಲ ಒಟ್ಟು ಸೇರಿ ಈ ಪಾದಯಾತ್ರೆಯನ್ನು ಯಶಸ್ವಿ ಮಾಡೋಣ ಎಂದರು.ಸಭೆಯಲ್ಲಿ ಪ್ರಸ್ತಾವಿಕ ಮಾತುಗಳನ್ನಾಡಿದ ಉಜಿರೆಯ ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಪೂರನ್ ವರ್ಮ, ನ.15ರಂದು ಮಧ್ಯಾಹ್ನ 2.30ಕ್ಕೆ ಎಲ್ಲರೂ ಶ್ರೀ ಕ್ಷೇತ್ರ ಜನಾರ್ದನ ಸ್ವಾಮಿ ದೇವಸ್ಥಾನದ ಸನ್ನಿಧಿಯಲ್ಲಿ ಸೇರುವುದು, 3 ಗಂಟೆಗೆ ಸರಿಯಾಗಿ 13ನೇ ವರ್ಷದ ಪಾದಯಾತ್ರೆಗೆ ಚಾಲನೆ ನೀಡಿ, 3.30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದೆಡೆಗಿನ ಪಾದಯಾತ್ರೆಯ ಮೆರವಣಿಗೆ ಆರಂಭವಾಗುತ್ತದೆ. ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ದಾರಿಯುದ್ದಕ್ಕೂ ನೀರು ಮತ್ತು ಬೆಲ್ಲದ ವ್ಯವಸ್ಥೆ ಮಾಡಲಾಗುತ್ತದೆ. ಶ್ರೀ ಕ್ಷೇತ್ರ ಧರ್ಮಸ್ಥಳ ತಲುಪಿದ ಬಳಿಕ 5.30ಕ್ಕೆ ಡಾ. ಡಿ.ವೀರೇಂದ್ರ ಹೆಗಡೆಯವರಿಂದ ಆಶೀರ್ವಚನ ಕಾರ್ಯಕ್ರಮ ನಡೆಯಲಿದೆ ಎಂದರು.

ಸಭೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮುಖ್ಯ ಹಣಕಾಸು ಅಧಿಕಾರಿ ಶಾಂತರಾಮ ಪೈ ಮಾತನಾಡಿದರು. ಸಭೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಕರಪತ್ರವನ್ನು ಬಿಡುಗಡೆ ಮಾಡಲಾಯಿತು.

ಸಭೆಯ ವೇದಿಕೆಯಲ್ಲಿ ಸದಾಶಿವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಹಾಗೂ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸತೀಶ್ಚಂದ್ರ ಎಸ್., ಬೆಳ್ತಂಗಡಿ ತಾಲೂಕಿನ ಜನಜಾಗೃತೆ ವೇದಿಕೆ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ, ಉಜಿರೆ ಪಂಚಾಯಿತಿ ಅಧ್ಯಕ್ಷೆ ಉಷಾ ಕಾರಂತ್, ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಯೋಗೀಶ್ ಕುಮಾರ್ ನಡಕರ, ಲಕ್ಷ್ಮಿ ಇಂಡಸ್ಟ್ರೀಸ್ ಮಾಲಕರಾದ ಮೋಹನ್ ಕುಮಾರ್, ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ, ಹಿರಿಯ ವಕೀಲ ಅಗರ್ತ ಸೇರಿದಂತೆ ಊರಿನ ಸದಸ್ಯರು ಭಾಗಿಯಾಗಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ರಾಮಕುಮಾರ್ ನಿರೂಪಿಸಿದರು. ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೇಖಕ ತನ್ನನ್ನು ತಾನು ವಿಮರ್ಶೆಗೊಳಪಡಿಸಿಕೊಳ್ಳಬೇಕು
ಕುಂದಾನಗರಿಯಲ್ಲಿ ಬೆಳಗಾವಿ ಉತ್ಸವ