೧೫ರಿಂದ ಧರ್ಮಸ್ಥಳ ಲಕ್ಷದೀಪೋತ್ಸವ ವೈಭವ

KannadaprabhaNewsNetwork |  
Published : Nov 11, 2025, 03:15 AM IST
32 | Kannada Prabha

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ.೧೫ರಿಂದ ೧೯ರ ವರೆಗೆ ನಡೆಯಲಿವೆ.

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ.೧೫ರಿಂದ ೧೯ರ ವರೆಗೆ ನಡೆಯಲಿವೆ.

ನ.೧೮ರಂದು ಸಂಜೆ 5 ಗಂಟೆಯಿಂದ ಸರ್ವಧರ್ಮ ಸಮ್ಮೇಳನದ ೯೩ನೇ ಅಧಿವೇಶನ ನಡೆಯಲಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಮೂಲಸೌಕರ್ಯಾಭಿವೃದ್ಧಿ ಇಲಾಖೆ ಸಚಿವ ಡಾ. ಬಿ.ಎಂ. ಪಾಟೀಲ್, ಅಧೀವೇಶನ ಉದ್ಘಾಟಿಸುವರು. ಹರಿಹರಪುರದ ಸ್ವಯಂಪ್ರಕಾಶ್ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು.

‘ಪ್ರಜಾವಾಣಿ’ ಮುಖ್ಯ ಉಪಸಂಪಾದಕ ಎ. ಸೂರ್ಯಪ್ರಕಾಶ್ ಪಂಡಿತ್ ಮತ್ತು ಖ್ಯಾತ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಉಪನ್ಯಾಸ ನೀಡುವರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ಗಂಟೆ ೮.೩೦ರಿಂದ ಚೆನ್ನೈನ ಶ್ರೀದೇವಿ ನೃತ್ಯಾಲಯದ ಕಲಾವಿದರಿಂದ ವಿದುಷಿ ಡಾ. ಶೀಲಾ ಉನ್ನಿಕೃಷ್ಣನ್ ನಿರ್ದೇಶನದಲ್ಲಿ ಭರತನಾಟ್ಯ ನೃತ್ಯ ಪ್ರದರ್ಶನವಿದೆ. ರಾತ್ರಿ ಕಂಚಿಮಾರು ಕಟ್ಟೆ ಉತ್ಸವ ನಡೆಯಲಿದೆ.ನ. ೧೯ರಂದು ಸಂಜೆ ೫ ಗಂಟೆಗೆ ಸಾಹಿತ್ಯ ಸಮ್ಮೇಳನದ ೯೩ನೇ ಅಧೀವೇಶನವನ್ನು ಹಿರಿಯ ಸಾಹಿತಿ ಮತ್ತು ಅಂಕಣಕಾರ ಪ್ರೊ. ಪ್ರೇಮಶೇಖರ ಉದ್ಘಾಟಿಸುವರು. ‘ವಿಶ್ವವಾಣಿ’ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅಧ್ಯಕ್ಷತೆ ವಹಿಸುವರು.ಖ್ಯಾತ ಲೇಖಕಿ ಶಾಂತಾ ನಾಗಮಂಗಲ, ವಿವೇಕಹಂಸ ಮಾಸಪತ್ರಿಕೆಯ ಸಂಪಾದಕ ಡಾ. ರಘು ವಿ. ಮತ್ತು ಧಾರವಾಡದ ಖ್ಯಾತ ಸಾಹಿತಿ ಡಾ. ಬಿ.ಎಂ. ಶರಭೇಂದ್ರ ಸ್ವಾಮಿ ಉಪನ್ಯಾಸ ನೀಡುವರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ಗಂಟೆ ೮.೩೦ರಿಂದ ಬೆಂಗಳೂರಿನ ರಾಹುಲ್ ವೆಲ್ಲಾಲ್ ಮತ್ತು ಬಳಗದವರಿಂದ ಸಂಗೀತ ಕಾರ್ಯಕ್ರಮವಿದೆ. ರಾತ್ರಿ ಗಂಟೆ ೯.೪೫ರಿಂದ ‘ದಕ್ಷಯಜ್ಞ’ ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ. ೧೨ ಗಂಟೆ ಬಳಿಕ ಗೌರಿಮಾರುಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ನಡೆಯಲಿದೆ.ನಾಡಿನೆಲ್ಲೆಡೆಯಿಂದ ಲಕ್ಷಕ್ಕೂ ಮಿಕ್ಕಿ ಭಕ್ತರು ಆಗಮಿಸಲಿದ್ದು, ನ.೨೦ರಂದು ಬೆಳಗ್ಗಿನ ಜಾವ ಲಕ್ಷದೀಪೋತ್ಸವ ಸಮಾಪನಗೊಳ್ಳುತ್ತದೆ.ರಾಜ್ಯದ ವಿವಿಧ ಭಾಗಗಳಿಂದ ಚೆಂಡೆ, ಕೊಂಬು, ಕಹಳೆ, ವಾಲಗ, ನಾಗಸ್ವರ ಮೊದಲಾದ ಸಾವಿರಾರು ಕಲಾವಿದರು ರಾತ್ರಿ ಇಡೀ ಕಲಾಸೇವೆ ಮಾಡುವರು. ರಾಜ್ಯದ ವಿವಿಧ ಊರುಗಳಿಂದ ಧರ್ಮಸ್ಥಳಕ್ಕೆ ಕೆಎಸ್‌ಆರ್‌ಟಿಸಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ