ಮಹಿಳೆಯರ ಸಬಲೀಕರಣಕ್ಕೆ ಧರ್ಮಸ್ಥಳ ಸಂಸ್ಥೆ ಶ್ರಮ: ಡಾ.ಅಲೀಂ ಪಾಷ

KannadaprabhaNewsNetwork |  
Published : Nov 10, 2026, 12:30 AM IST
ಧರ್ಮಸ್ಥಳ ಗ್ರಾಮೀಣಾವೃದ್ಧಿ ಸಂಸ್ಥೆ ಮಹಿಳೆಯರ ಸಬಲೀಕಣಕ್ಕೆ ಶ್ರಮಿಸುತ್ತಿದೆ  | Kannada Prabha

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರಿಗೆ ಆರೋಗ್ಯ ಶಿಬಿರ ಸೇರಿದಂತೆ ಮಹಿಳಾ ಸಬಲೀಕರಣಕ್ಕಾಗಿ ಶ್ರಮಿಸುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಆರ್.ಅಲೀಂ ಪಾಷಾ ಹೇಳಿದರು.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರಿಗೆ ಆರೋಗ್ಯ ಶಿಬಿರ ಸೇರಿದಂತೆ ಮಹಿಳಾ ಸಬಲೀಕರಣಕ್ಕಾಗಿ ಶ್ರಮಿಸುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಆರ್.ಅಲೀಂ ಪಾಷಾ ಹೇಳಿದರು.

ಪಟ್ಟಣದ ಶಿವ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ಆಯೋಜಿಸಿದ್ದ ಮಹಿಳೆಯರ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶ್ರೀ ಕ್ಷೇತ್ರ ಮಹಿಳೆಯರಿಗೆ ಅನೇಕ ಯೋಜನೆ ಜಾರಿಗೆ ತರುವ ಮೂಲಕ ಮಹಿಳೆಯರ ಆರ್ಥಿಕ ಪ್ರಗತಿಗೂ ನಾಂದಿ ಹಾಡಿದೆ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡ ಆರೋಗ್ಯ ಇಲಾಖೆ ಮೂಲಕ ಮಹಿಳೆಯರಿಗೆ ಅನೇಕ ಸೌಲಭ್ಯ ನೀಡುತ್ತಿದೆ ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಟ್ಟು ಸ್ವಾವಲಂಬಿಗಳಾಗಿ ಎಂದರು.

ಅಪರಾಧ ವಿಭಾಗದ ಗಿರೀಶ್ ಮಾತನಾಡಿ, ಆನ್‌ಲೈನ್‌ ವಂಚನೆಗಳು ಹೇಗೆ ನಡೆಯುತ್ತವೆ. ನಮಗೆ ಅರಿವು ಇಲ್ಲದೆ ಆಗುತ್ತವೆ.ತಡೆಗಟ್ಟುವುದು ಹೇಗೆ ಎಂಬ ಬಗ್ಗೆ ಮಾಹಿತಿ ಸಭೆಗೆ ತಿಳಿಸಿದರು.

ಬಾಲನ್ಯಾಯ ಮಂಡಳಿ ಸದಸ್ಯ ಗಂಗಾಧರಸ್ವಾಮಿ ಮಾತನಾಡಿ, ಮಕ್ಕಳ ಪೋಷಣೆಯಲ್ಲಿ ಪೋಷಕರ ಜವಾಬ್ದಾರಿ ಹಾಗೂ ಪಾತ್ರದ ಕುರಿತು ಮಾತನಾಡಿ ಮಕ್ಕಳಿಗೆ ಒತ್ತಡ ಹೇರದೆ ಆಸಕ್ತಿ ಇರುವ ವಿಷಯಗಳ ಕಡೆಗೆ ನೀವು ಪ್ರೋತ್ಸಾಹಿಸಬೇಕು ಎಂದರು.

ಜ್ಞಾನ ವಿಕಾಸ ಯೋಜನಾಧಿಕಾರಿ ಮೂಕಾಂಬಿಕ ಮಾತನಾಡಿ, ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮಹಿಳೆಯರಿಗೆ ಸಿಗುತ್ತಿರುವ ಕಾರ್ಯಕ್ರಮ, ಸೌಲಭ್ಯ ಹಾಗೂ ವಾತ್ಸಲ್ಯ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ಎಂಐಎಸ್‌ ಯೋಜನಾಧಿಕಾರಿ ಆರತಿ ಮಾತನಾಡಿ, ಬ್ಯಾಂಕ್ ಗಳಿಂದ ಸದಸ್ಯರಿಗೆ ಹೇಗೆ ಸಾಲ ಸೌಲಭ್ಯಗಳು ಸಿಗುತ್ತದೆ ಮತ್ತು ಕಡಿಮೆ ದರದಲ್ಲಿ ಹೇಗೆ ಸಾಲವನ್ನು ನೀಡುತ್ತಿದ್ದೇವೆ ಹಾಗೂ ಸಾಲದ ಮರುಪಾವತಿ ಕುರಿತು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಶೇಷವಾಗಿ ರಂಗೋಲಿ ಸ್ಪರ್ಧೆ, ಹೂ ಕುಚ್ಚು ಸ್ಪರ್ಧೆ, ದೀಪಾಲಂಕರ ಸ್ಪರ್ಧೆ, ನೃತ್ಯ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಚಂದ್ರಶೇಖರ್,ಸಮನ್ವಯಧಿಕಾರಿ ಚೈತ್ರ, ತಾಲೂಕಿನ ಕೇಂದ್ರ ಸಂಯೋಜಿಕಿಯರು, ಸದಸ್ಯರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

12, 13ರಂದು ಪುಣ್ಯಾರಾಧನೆ, ಸ್ಮರಣೋತ್ಸವ, ಜನಜಾಗೃತಿ ಧರ್ಮ ಸಮ್ಮೇಳನ
ಟನಲ್ ಮಾಡಿದ್ರೂ ಆಗಲ್ಲ, ಎಲಿವೇಟೆಡ್‌ ಮಾಡಿದರೂ ಅಪಾದನೆ: ಡಿಕೆಶಿ ಆಕ್ರೋಶ