ಧರ್ಮಸ್ಥಳ: 28ನೇ ಭಜನಾ ಕಮ್ಮಟ ಪೂರ್ವಭಾವಿ ಸಭೆ

KannadaprabhaNewsNetwork |  
Published : Aug 26, 2026, 03:00 AM IST
ಧರ್ಮಸ್ಥಳ: 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆ.28ರಿಂದ ಅ. 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು.

ಕನ್ನಡಪ್ರಭ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆ.28ರಿಂದ ಅ. 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು.

ಭಜನಾ ಕಮ್ಮಟದ ಕಾರ್ಯದರ್ಶಿ ಎ. ವೀರು ಶೆಟ್ಟಿ ಮಾತನಾಡಿ, ತಾಲೂಕು ಹಾಗೂ ವಲಯ ಭಜನಾ ಪರಿಷತ್‌ಗಳ ಮೂಲಕ ಬೇಸಿಗೆ ರಜೆಯಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ, ಕಾನೂನು ಮಾಹಿತಿ ಮತ್ತು ಆರೋಗ್ಯ ಶಿಬಿರ, ಭಜನೋತ್ಸವ, ಮನೆ-ಮನೆ ಭಜನೆ, ಸತ್ಸಂಗ, ಶ್ರಮದಾನ, ಸ್ವಚ್ಛತಾ ಕಾರ್ಯಕ್ರಮ, ರಾಷ್ಟ್ರೀಯ ದಿನಾಚರಣೆ ಹಾಗೂ ಹಬ್ಬ-ಹರಿದಿನಗಳ ಆಚರಣೆ ಸೇರಿದಂತೆ ಹಲವು ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.ಕಮ್ಮಟದ ಸಂಚಾಲಕ ಜಿ. ಸುಬ್ರಹ್ಮಣ್ಯ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಮ್ಮಟದ ಶಿಬಿರಾರ್ಥಿಗಳ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದೊಂದಿಗೆ ತಾಲೂಕು ಮಟ್ಟದಲ್ಲಿ ಭಜನಾ ಪರಿಷತ್ ಸಭೆಗಳು ನಡೆಯುತ್ತಿವೆ. ಸೆ.27ರಂದು ಮಧ್ಯಾಹ್ನ 2.30ರಿಂದ ಶಿಬಿರಾರ್ಥಿಗಳ ನೋಂದಣಿ ಆರಂಭವಾಗಲಿದೆ ಎಂದರು.ಭಜನಾ ಪರಿಷತ್ ರಾಜ್ಯಾಧ್ಯಕ್ಷ ಪಿ. ಚಂದ್ರಶೇಖರ ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು.

ಸೀತಾರಾಮ ತೋಳ್ಪಾಡಿತ್ತಾಯ, ಬಿ. ಭುಜಬಲಿ, ಲಕ್ಷ್ಮೀನಾರಾಯಣ ರಾವ್, ಪಾರ್ಶ್ವನಾಥ್ ಜೈನ್, ಮಹಾವೀರ ಅಜ್ರಿ, ಕೇಶವ ಪಿ., ಡಾ. ಶಶಿಕಾಂತ್ ಜೈನ್, ರತ್ನವರ್ಮ ಜೈನ್ ಹಾಗೂ ಶ್ರೀ ನಿವಾಸ ರಾವ್ ಉಪಸ್ಥಿತರಿದ್ದರು. ಪವಿತ್ರ ಸುನಿಲ್ ಸ್ವಾಗತಿಸಿದರು. ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಲಂಗಾರಿನಲ್ಲಿ ಸಮಗ್ರ ಆರೋಗ್ಯ ಅಭಿಯಾನ: 120 ಮಂದಿಗೆ ಉಚಿತ ಆರೋಗ್ಯ ತಪಾಸಣೆ
ಕಸ್ತೂರಿರಂಗನ್ ವರದಿ ಗೊಂದಲ ನಿವಾರಣೆಗೆ ಆಗ್ರಹ