ಧರ್ಮಸ್ಥಳ ಯೋಜನೆ: 1.40 ಲಕ್ಷ ಜನರು ವ್ಯಸನಮುಕ್ತ

KannadaprabhaNewsNetwork |  
Published : Oct 21, 2025, 01:00 AM IST
ಫೋಟೋ- ಮದ್ಯ ಫೋಟ | Kannada Prabha

ಸಾರಾಂಶ

ರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಸಹಯೋಗದಲ್ಲಿ ಮದ್ಯವರ್ಜನ ಶಿಬಿರ ಹಮ್ಮಿಕೊಂಡು ರಾಜ್ಯದಲ್ಲಿ 1 ಲಕ್ಷ 40 ಸಾವಿರ ಜನರನ್ನು ಮದ್ಯ ವ್ಯಸನದಿಂದ ಮುಕ್ತಗೊಳಿಸಿರುವುದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ದೊಡ್ಡ ಸಾಧನೆಯಾಗಿದೆ ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಕಲಬುರಗಿ

ರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಸಹಯೋಗದಲ್ಲಿ ಮದ್ಯವರ್ಜನ ಶಿಬಿರ ಹಮ್ಮಿಕೊಂಡು ರಾಜ್ಯದಲ್ಲಿ 1 ಲಕ್ಷ 40 ಸಾವಿರ ಜನರನ್ನು ಮದ್ಯ ವ್ಯಸನದಿಂದ ಮುಕ್ತಗೊಳಿಸಿರುವುದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ದೊಡ್ಡ ಸಾಧನೆಯಾಗಿದೆ ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಅಭಿಪ್ರಾಯಪಟ್ಟರು.

ನಗರದ ರಾಮತೀರ್ಥದ ಮಂದಾರ ಪುಷ್ಪ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್‌ನಿಂದ ನಡೆದ ಗಾಂಧಿ ಸ್ಮೃತಿ ಮತ್ತು ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದರು.

ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರಾಜ್ಯದಲ್ಲಿ ಗ್ರಾಮಗಳ ಅಭಿವೃದ್ಧಿ ,ಮಹಿಳೆಯರ ಸಬಲೀಕರಣ, ಪುರುಷರ ಬದುಕು ಹಸನು ಮಾಡುವ ಕಾರ್ಯಗಳು ನಡೆಯುತ್ತಿವೆ ಎಂದರು.

ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ವರ್ಷಾ ಜಾನೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜಾರಿ ಮಾಡಿದ ಕಾರ್ಯಕ್ರಮಗಳಿಂದ ಗ್ರಾಮಾಂತರ ಪ್ರದೇಶಗಳ ಮಹಿಳೆಯರ ಬಾಳಿನಲ್ಲಿ ನೆಮ್ಮದಿಯ ಬೆಳಕು ಮೂಡುವಂತಾಗಿದೆ ಎಂದರು.

ಶ್ರೀನಿವಾಸ ಸರಡಗಿ ಶಕ್ತಿ ಪೀಠದ ಡಾ. ಅಪ್ಪಾರಾವ್ ದೇವಿ ಮುತ್ಯಾ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಧಾರ್ಮಿಕ, ಸಾಮಾಜಿಕ ಸೇವಾ ಕಾರ್ಯಗಳಿಂದ ಸಮಾಜವು ಪ್ರಗತಿಯತ್ತ ದಾಪುಗಾಲು ಹಾಕುತ್ತಿದ್ದು ಗ್ರಾಮೀಣ ಅಭಿವೃದ್ಧಿಯಲ್ಲಿ ದೊಡ್ಡ ಸಾಧನೆ ಮಾಡಲಾಗಿದೆ ಎಂದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಲಬುರಗಿ ಜಿಲ್ಲಾ ಅಧ್ಯಕ್ಷ ಸಿ.ಎನ್.ಬಾಬಳಗಾಂವ ಮಹಾತ್ಮ ಗಾಂಧೀಜಿಯವರ ಬದುಕು ಮತ್ತು ಸಾಧನೆ ನಮಗೆಲ್ಲಾ ಆದರ್ಶವಾಗಲಿ ಎಂದು ಹೇಳಿ ಠರಾವುಗಳನ್ನು ವಾಚನ ಮಾಡಿದರು.

ಜಿಲ್ಲಾ ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಡಾ.ಸದಾನಂದ ಪೆರ್ಲ, ಉಪಾಧ್ಯಕ್ಷಅನಿಲ್ ಕುಮಾರ್ ಡಾಂಗೆ, ಸದಸ್ಯರಾದ ಮಾಲತಿ ರೇಷ್ಮೆ, ಎಸ್ ಎಸ್ ಹಿರೇಮಠ, ಗಂಗಪ್ಪ ಹರಸೂರಕರ್, ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ದಿನೇಶ್ ಪೂಜಾರಿ, ನವಜೀವನ ಸಮಿತಿಯ ಸದಸ್ಯ ಆದಪ್ಪ ಭೀಮನಹಳ್ಳಿ ಮಾತನಾಡಿದರು.

ಆಳಂದ ಚೆಕ್‌ಪೋಸ್ಟ್ ದೇವಿ ಮಹಾದ್ವಾರದಿಂದ ನವ ಜೀವನ ಸಮಿತಿ ಸದಸ್ಯರ ಹಾಗೂ ನಾಗರಿಕರ ಜಾಥಾ ನಡೆಯಿತು. ಮಹಾತ್ಮ ಗಾಂಧಿ, ರಾಣಿ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್,ಸ್ವಾಮಿ ವಿವೇಕಾನಂದ ಮುಂತಾದ ಮಹಾತ್ಮರ ವೇಷಭೂಷಣ ಧರಿಸಿದ ಮಕ್ಕಳು ಎಲ್ಲರ ಗಮನ ಸೆಳೆದರು. ಅಳಂದ ಕಮಲಾಪುರ,ಅಫಜಲ್ಪುರ ಹಾಗೂ ಕಲಬುರಗಿ ಯೋಜನಾ ಕಚೇರಿಗಳ ವ್ಯಾಪ್ತಿಯ ನೂರಾರು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಯೋಜನೆಯ ಜಿಲ್ಲಾ ನಿರ್ದೇಶಕರಾದ ಗಣಪತಿ ಮಾಳಿಂಜೆ ಸ್ವಾಗತ ಕೋರಿದರು. ರವಿಕುಮಾರ್ ನೀಲೂರು, ಸೂರ್ಯಕಾಂತಿ ಅವರಾದ, ಶಾಂತಪ್ಪ ಕೋರೆ, ಪ್ರಭಾವತಿ ಮೇತ್ರೆ ಮಲ್ಲಿನಾಥ ಮೈಂದರ್ಗಿ, ರಾಜಕುಮಾರ್ ರಿಯಾಜ್ ಅಕ್ತಾರ್ , ಕಲ್ಲನಗೌಡ,ರಾಜೇಶ್, ಕೃಷ್ಣಪ್ಪ, ಮಹಾಂತೇಶ ಚಿದಂಬರ ಕೊಲ್ಲಾಪುರ, ಮಮತಾ ಮತ್ತಿತರು ಹಾಜರಿದ್ದರು. ಪ್ರಶಾಂತ್ ನಿರೂಪಿಸಿದರು. ಮಂದಾರ ಪುಷ್ಪ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು.

PREV

Recommended Stories

ಮಲೆನಾಡು, ಕರಾವಳಿಯಲ್ಲಿ ಮಳೆ : ಜನಜೀವನ ಅಸ್ತವ್ಯಸ್ತ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ