ಕುಡಿತದ ಚಟಕ್ಕೆ ಬಲಿಯಾದವರ ಸರಿದಾರಿಗೆ ತರುವುದು ಶ್ಲಾಘನೀಯ

KannadaprabhaNewsNetwork |  
Published : Jun 25, 2025, 11:47 PM IST
55 | Kannada Prabha

ಸಾರಾಂಶ

ತಿಯೊಬ್ಬರು ಧೃಢ ಮನಸ್ಸು ಮಾಡಿ ಕುಡಿತವನ್ನು ತ್ಯಜಿಸಿ ಇತರರಿಗೆ ಮಾದರಿಯಾಗಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್. ನಗರಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ದಶಕಗಳಿಂದ ಮಧ್ಯವರ್ಜನ ಶಿಬಿರ ನಡೆಸಿ ಕುಡಿತದ ಚಟಕ್ಕೆ ಬಲಿಯಾದವರನ್ನು ಸರಿದಾರಿಗೆ ತರುತ್ತಿರುವುದು ಶ್ಲಾಘನೀಯ ಕೆಲಸ ಎಂದು ಲಾಲನಹಳ್ಳಿ ಗುರುಮಲ್ಲೇಶ್ವರ ದಾಸೋಹ ಮಠದ ಶರಣೆ ಜಯದೇವಿ ತಾಯಿ ಹೇಳಿದರು.ಪಟ್ಟಣದ ನಾಮಧಾರಿಗೌಡರ ಸಮುದಾಯ ಭವನದಲ್ಲಿ ಬುಧವಾರದಿಂದ ಆರಂಭವಾದ ಎಂಟು ದಿನಗಳ 1941ನೇ ಮಧ್ಯವರ್ಜನೆ ಶಿಬಿರ ಉದ್ಘಾಟನೆ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ದುಶ್ಚಟಕ್ಕೆ ಬಲಿಯಾಗುವವರು ಇಂತಹ ಶಿಬಿರಗಳಿಗೆ ಭಾಗವಹಿಸಿ ತಮ್ಮ ಬದುಕಿನ ದಿಕ್ಕನ್ನು ಬದಲಿಸಿಕೊಂಡು ಉತ್ತಮ ಜೀವನ ನಡೆಸಬೇಕು ಎಂದು ಅವರು ಸಲಹೆ ನೀಡಿದರು.ಶಿಬಿರದಲ್ಲಿ ಪಾಲ್ಗೊಂಡಿರುವ ಪ್ರತಿಯೊಬ್ಬರು ಧೃಢ ಮನಸ್ಸು ಮಾಡಿ ಕುಡಿತವನ್ನು ತ್ಯಜಿಸಿ ಇತರರಿಗೆ ಮಾದರಿಯಾಗಬೇಕು. ಇಂತಹ ಮಹತ್ತರ ಕೆಲಸ ಮಾಡಿ ಸಮಾಜವನ್ನು ಸರಿದಾರಿಗೆ ತರುತ್ತಿರುವ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಎಲ್ಲಾ ಸಿಬ್ಬಂದಿಗೆ, ಸಂಘ ಸಂಸ್ಥೆಗಳ ಮುಖಂಡರು ಮತ್ತು ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.1941ನೇ ಮಧ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಲ್.ಪಿ. ರವಿಕುಮಾರ್ ಮಾತನಾಡಿ, ಶಿಬಿರಕ್ಕೆ ಸೇರ್ಪಡೆಯಾಗಿರುವ 60 ಮಂದಿಗೆ ಎಂಟು ದಿನಗಳ ಕಾಲ ನಿಯಮಿತವಾಗಿ ವ್ಯಾಯಾಮ ಸೇರಿದಂತೆ ಶಿಸ್ತಿನ ಜೀವನ ನಡೆಸುವಂತೆ ಭೋದನೆ ಮಾಡಿ ಅವರುಗಳು ಭವಿಷ್ಯದಲ್ಲಿ ಆರೋಗ್ಯವಂತರಾಗಿ ಬದುಕುವ ಪಾಠ ಕಲಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಹಂದನಹಳ್ಳಿ ಸೋಮಶೇಖರ್, ಪುರಸಭೆ ಅಧ್ಯಕ್ಷ ಶಿವುನಾಯಕ್, ಉಪಾಧ್ಯಕ್ಷ ವಸಂತಮ್ಮ, ಸದಸ್ಯ ಕೋಳಿ ಪ್ರಕಾಶ್, ಮುಖ್ಯಾಧಿಕಾರಿ ಬಿ.ವಿ. ವೆಂಕಟೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್‌ ನಿರ್ದೇಶಕಿ ಮಮತಾರಾವ್, ತಾಲೂಕು ನಾಮಧಾರಿಗೌಡ ಸಮಾಜದ ಅಧ್ಯಕ್ಷ ಕೆ.ಆರ್. ಅಶೋಕ್, 1941ನೇ ಮಧ್ಯವರ್ಜನ ಶಿಬಿರದ ಗೌರವಾಧ್ಯಕ್ಷ ಯು. ಕೃಷ್ಣಭಟ್, ಸದಸ್ಯರಾದ ಕೆ.ಎಂ. ನಾಗರತ್ನಮ್ಮ, ಎ.ಎನ್. ಸಂಪತ್‌ ಕುಮಾರ್, ಎಚ್.ಆರ್. ನವೀನ್‌ ಕುಮಾರ್ ಮಾತನಾಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್‌ ತಾಲೂಕು ಯೋಜನಾಧಿಕಾರಿ ಪಾತಲಿಂಗಪ್ಪ, ಸಂಸ್ಥೆಯ ಭವಾನಿ ರಮೇಶ್, ಮಂಜುಳಾ, ರಜನಿಕಾಂತ್, ಇನ್‌ ಸ್ಪೆಕ್ಟರ್‌ ಎಸ್. ಶಿವಪ್ರಕಾಶ್ ಸೇರಿದಂತೆ ಮಧ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು ಮತ್ತು ವಿವಿಧ ಸಂಘ ಸಂಸ್ಥೆ ಮುಖಂಡರು ಪಾಲ್ಗೊಂಡಿದ್ದರು.

PREV

Recommended Stories

‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ