ಧರ್ಮಸ್ಥಳ ಯೋಜನೆ ದೇಶಕ್ಕೆ ಮಾದರಿ-ತಹಸೀಲ್ದಾರ್‌ ಶರಣಮ್ಮ

KannadaprabhaNewsNetwork |  
Published : Jan 21, 2025, 12:33 AM IST
20ಎಚ್‌ವಿಆರ್‌1, 1ಎ | Kannada Prabha

ಸಾರಾಂಶ

ಧರ್ಮಸ್ಥಳದ ಡಾ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ಯೋಜನೆಗಳು ಸಮಾಜ ಅಭಿವೃದ್ಧಿ ಚಿಂತನೆಗಳಿಂದ ರಾಜ್ಯದ ಜನರಿಗೆ ಬಹಳಷ್ಟು ಪ್ರಯೋಜನವಾಗುತ್ತಿದೆ. ಇದು ದೇಶಕ್ಕೆ ಮಾದರಿಯಾಗಿದೆ ಎಂದು ತಹಸೀಲ್ದಾರ್‌ ಶರಣಮ್ಮ ಹೇಳಿದರು.

ಹಾವೇರಿ: ಧರ್ಮಸ್ಥಳದ ಡಾ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ಯೋಜನೆಗಳು ಸಮಾಜ ಅಭಿವೃದ್ಧಿ ಚಿಂತನೆಗಳಿಂದ ರಾಜ್ಯದ ಜನರಿಗೆ ಬಹಳಷ್ಟು ಪ್ರಯೋಜನವಾಗುತ್ತಿದೆ. ಇದು ದೇಶಕ್ಕೆ ಮಾದರಿಯಾಗಿದೆ ಎಂದು ತಹಸೀಲ್ದಾರ್‌ ಶರಣಮ್ಮ ಹೇಳಿದರು.

ನಗರದ ಕಮಲ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ ಏರ್ಪಡಿಸಿದ್ದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆಯುವ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಅಬಲೆಯರಲ್ಲ, ಸಬಲರಾಗಿ ಸಮಾಜದಲ್ಲಿ ಸಕ್ರಿಯರಾಗಿ ಎಲ್ಲಾ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಮಹಿಳೆಯರ ಸಬಲೀಕರಣ ಸಾಧ್ಯ. ಡಾ. ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಕುಟುಂಬದಲ್ಲಿ ಅಭಿವೃದ್ಧಿ ಹೊಂದುತ್ತಿದ್ದಾರೆ ಎಂದು ಹೇಳಿದರು. ಹಿರಿಯ ಶಿಕ್ಷಕಿ ರೂಪಾ ಸಜ್ಜನರ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಕುಟುಂಬದ ಸ್ವಾಸ್ಥ್ಯ ಮಹಿಳೆಯರನ್ನು ಅವಲಂಬಿಸಿದೆ. ಆಧುನಿಕ ಜೀವನದಲ್ಲಿ ಮಹಿಳೆಯರು ಅತೀ ಹೆಚ್ಚು ಮೊಬೈಲ್‌ ಬಳಕೆ ಮತ್ತು ಟಿ.ವಿ. ಮಾಧ್ಯಮಗಳಿಗೆ ದಾಸರಾಗಿರುವುದು ಕಳವಳವನ್ನುಂಟು ಮಾಡಿದೆ. ಮಕ್ಕಳ ಶಿಕ್ಷಣ ಅವರ ನೈತಿಕ ಜವಾಬ್ದಾರಿಯನ್ನು ಪ್ರತಿಯೊಬ್ಬ ಪೋಷಕರು ಜವಾಬ್ದಾರಿಯಿಂದ ನಿರ್ವಹಿಸಿದಾಗ ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬೆಳೆಯಲು ಸಾಧ್ಯ ಎಂದರು.ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಧರ್ಮಸ್ಥಳ ಯೋಜನೆಯ ಮೂಲಕ ಸ್ವಸಹಾಯ ಸಂಘಗಳಿಂದ ಅತೀ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆದು ಅಭಿವೃದ್ಧಿ ಹೊಂದಲು ಮಹಿಳೆಯರಿಗೆ ಅನುಕೂಲವಾಗಿದೆ. ಇದರಿಂದ ಮಹಿಳೆಯರಲ್ಲಿ ಆರ್ಥಿಕ ಶಿಸ್ತು ಮತ್ತು ಬ್ಯಾಂಕಿನ ವ್ಯವಹಾರ ಜ್ಙಾನ ಬೆಳೆಯುತ್ತದೆ ಎಂದು ಹೇಳಿದರು.ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಮುತ್ತಣ್ಣ ಯಲಿಗಾರ ಮಾತನಾಡಿದರು. ಯೋಜನೆಯ ಜಿಲ್ಲಾ ನಿರ್ದೇಶಕ ಶಿವರಾಯ ಪ್ರಭು ಮಾತನಾಡಿ, ಇಂತಹ ಕಾರ್ಯಕ್ರಮಗಳಿಂದ ಮಹಿಳೆಯಲ್ಲಿ ಶಿಸ್ತು, ಸಮಯ ಪಾಲನೆ ಅರಿವು ಮೂಡುತ್ತದೆ. ಸರ್ಕಾರಿ ಯೋಜನೆಗಳ ಸೌಲಭ್ಯಗಳನ್ನು ತಿಳಿದುಕೊಳ್ಳಲು ಅನುಕೂಲವಾಗುತ್ತದೆ ಎಂದರು.ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಪ್ರಕಾಶ ಶೆಟ್ಟಿ ಇದ್ದರು. ತಾಲೂಕಿನ ಯೋಜನಾಧಿಕಾರಿ ನಾರಾಯಣ ಜಿ. ಸ್ವಾಗತಿಸಿದರು. ಮೇಲ್ವಿಚಾರಕರ ಸಂತೋಷ ನಿರೂಪಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ವೀಣಾ ವಂದಿಸಿದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌