ಪ್ರವಾಹ ಉಂಟಾದರೆ ಜನ, ಜಾನುವಾರ ರಕ್ಷಣೆಗೆ ಧಾರವಾಡ ಜಿಲ್ಲಾಡಳಿತ ಸನ್ನದ್ಧ

KannadaprabhaNewsNetwork | Published : Jul 21, 2024 1:18 AM

ಸಾರಾಂಶ

ಆಗಸ್ಟ್‌ ಹಾಗೂ ಸೆಪ್ಟಂಬರ್‌ ತಿಂಗಳಲ್ಲಿ ಧಾರವಾಡ ಜಿಲ್ಲಾದ್ಯಂತ ಉತ್ತಮ ಮಳೆಯಾಗಲಿದೆ ಎಂಬ ಮುನ್ಸೂಚನೆ ಇರುವುದರಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥತಿ ಉಂಟಾಗಬಹುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದ್ದಾರೆ. ಆದರೆ, ಜನರು, ಜಾನುವಾರು ರಕ್ಷಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು 38 ಪರಿಣಿತ ಈಜುಗಾರರನ್ನು ಗುರುತಿಸಲಾಗಿದೆ.

ಧಾರವಾಡ:

ಆಗಸ್ಟ್ ಮತ್ತು ಸೆಪ್ಟೆಂಬರ್‌ ತಿಂಗಳಲ್ಲಿ ವ್ಯಾಪಕ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಯಾವುದೇ ಜನ, ಜಾನುವಾರು ಹಾನಿ ಆಗದಂತೆ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತವು ಸಮರ್ಪಕ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಇಲಾಖೆ ಆಶ್ರಯದಲ್ಲಿ ಪ್ರವಾಹದ ಮುನ್ನೆಚ್ಚರಿಕೆಯ ಕುರಿತು ಕೆಲಗೇರಿ ಕೆರೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಅಣುಕು ಪ್ರದರ್ಶನದ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕುಂದಗೋಳ, ಹುಬ್ಬಳ್ಳಿ, ಅಣ್ಣಿಗೇರಿ, ನವಲಗುಂದ ಧಾರವಾಡ ತಾಲೂಕಿನಲ್ಲಿ ಬೆಣ್ಣಿಹಳ್ಳ ಹಾಗೂ ತುಪ್ಪರಿಹಳ್ಳಗಳು ದೊಡ್ಡ ಪ್ರಮಾಣದಲ್ಲಿ ಹರಿಯುತ್ತವೆ. ಈ ಐದು ತಾಲೂಕುಗಳಲ್ಲಿನ 35 ಗ್ರಾಪಂ ವ್ಯಾಪ್ತಿಯ 56 ಗ್ರಾಮಗಳು ಪ್ರವಾಹ ಪೀಡಿತವಾಗಬಹುದು ಮತ್ತು ಈ ಆರು ಗ್ರಾಮಗಳ 8677 ಜನರು ಇರುವ 1824 ಕುಟುಂಬ, 3,188 ಜಾನುವಾರು ಹಾಗೂ 85,514 ಎಕರೆ ಕೃಷಿ ಜಮೀನು ಪ್ರವಾಹಕ್ಕೆ ಒಳಗಾಗಬಹುದೆಂದು ಸಮೀಕ್ಷೆ ಮೂಲಕ ಅಂದಾಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯಕ್ಕೆ ತಕ್ಕಂತೆ 71 ಕಾಳಜಿ ಕೇಂದ್ರ ಹಾಗೂ ಆರು ಗೋಶಾಲೆ ತೆರೆಯಲು ಸ್ಥಳ ಗುರುತಿಸಿ, ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 38 ಪರಿಣಿತ ಈಜುಗಾರರನ್ನು ಗುರುತಿಸಿದ್ದು, ಪ್ರವಾಹ ಸಂದರ್ಭದಲ್ಲಿ ಸಾರ್ವಜನಿಕರ ರಕ್ಷಣೆಗಾಗಿ ಈಜುಗಾರರ ಸಹಾಯ ಪಡೆದುಕೊಳ್ಳಲಾಗುವುದು. ತಾಲೂಕಿನಲ್ಲಿ ಪ್ರವಾಹಕ್ಕೆ ಒಳಗಾಗುವ ಗ್ರಾಮದಲ್ಲಿ ಸಮಿತಿ ರಚಿಸಲಾಗಿದ್ದು, ಗ್ರಾಮಮಟ್ಟದಲ್ಲಿ ವಿಪತ್ತು ನಿರ್ವಹಣಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಪ್ರಕಾಶ ಪವಾರ, ತಹಸೀಲ್ದಾರ್‌ ಡಾ. ಡಿ.ಎಚ್. ಹೂಗಾರ, ಪಾಲಿಕೆ ಸದಸ್ಯೆ ಚಂದ್ರಕಲಾ ಕೊಟಬಾಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ, ರಾಮಕೃಷ್ಣ ಸದಲಗಿ, ಗ್ರಾಮದ ಮುಖಂಡ ರುದ್ರಗೌಡ ಪಾಟೀಲ, ಅಗ್ನಿಶಾಮಕ ಸಿಬ್ಬಂದಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರು, ಆರೋಗ್ಯ ಇಲಾಖೆಯ, ಮಹಾನಗರ ಪಾಲಿಕೆ ಅಧಿಕಾರಿಗಳು, ಕೆಲಗೇರಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇದ್ದರು.

Share this article